ಗಾಂಧಿನಗರ(ಗುಜರಾತ್),ಸೆ.13- 87 ವರ್ಷದ ವೃದ್ಧೆಯೊಬ್ಬರು 89 ವರ್ಷದ ತನ್ನ ಪತಿ ಪದೇ, ಪದೇ ಲೈಂಗಿಕ ಕ್ರಿಯೆ ನಡೆಸುವಂತೆ ಕಿರುಕುಳ ನೀಡುತ್ತಾನೆ ಎಂದು ಮಹಿಳಾ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾರೆ.
ವಡೋದರಾದ 87 ವರ್ಷದ ವೃದ್ಧೆ ಪದೇ, ಪದೇ ಲೈಂಗಿಕ ಕ್ರಿಯೆ ನಡೆಸುತ್ತವಂತೆ ಒತ್ತಾಯಿಸುತ್ತಿದ್ದ ತನ್ನ ಪತಿಯ ಕಿರುಕುಳದಿಂದ ಬೇಸತ್ತು ರಾಜ್ಯ ಸರ್ಕಾರದ ಟೋಲ್-ಫ್ರೀ ಮಹಿಳಾ ಸಹಾಯವಾಣಿ ಸಂಖ್ಯೆ -181 ಅಭಯಂ ಕರೆ ಮಾಡಿ ದೂರು ನೀಡಿದ್ದಾರೆ.
ಈ ಕರೆಯನ್ನು ಸ್ವೀಕರಿಸಿದ ಅಭಯಂ ತಂಡ ನಿಜಕ್ಕೂ ದಿಗ್ಭ್ರಮೆಗೊಂಡಿದೆ. ತನ್ನ ಗಂಡನ ಕಿರುಕುಳದಿಂದ ಹೇಗಾದರೂ ಪಾರು ಮಾಡುವಂತೆ ವೃದ್ಧೆ ತನ್ನ ಅಳಲನ್ನು ತೋಡಿಕೊಂಡಿದ್ದಾರೆ.
89 ವರ್ಷದ ತನ್ನ ಪತಿ ಇಂಜಿನಿರ್ ಆಗಿದ್ದು, ವಡೋದರದ ಸಯಾಜಿಗಂಜ್ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ವಯಸ್ಸಾದರೂ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸುತ್ತಿದ್ದರು. ಅಲ್ಲದೇ ಇಬ್ಬರಿಗೂ ಹಲವಾರು ವರ್ಷಗಳಿಂದ ಆರೋಗ್ಯ ಸಂಬಂಧ ಸಮಸ್ಯೆಗಳಿದೆ. ತಮ್ಮ ಮಗ ಹಾಗೂ ಸೊಸೆಯೊಂದಿಗೆ ವೃದ್ಧ ದಂಪತಿ ನೆಲೆಸುತ್ತಿರುವುದಾಗಿ ತಿಳಿಸಿದ್ದಾರೆ.
ಅವರ ಬೇಡಿಕೆಗಳಿಗೆ ಸ್ಪಂದಿಸದೇ, ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದಾಗ ತನ್ನ ಮೇಲೆ ಕೋಪಗೊಂಡು ಕಿರುಚಾಡುತ್ತಾರೆ ಮತ್ತು ನಿಂದಿಸುತ್ತಾರೆ. ಅನಾರೋಗ್ಯದ ಮಧ್ಯೆಯೂ ಪತಿ ಲೈಂಗಿಕ ಸಂಭೋಗಕ್ಕೆ ಒತ್ತಾಯಿಸಿದ್ದಕ್ಕೆ ವೃದ್ಧೆ ಮಹಿಳಾ ಸಹಾಯವಾಣಿಗೆ ಕರೆ ಮಾಡಿ ತಮ್ಮ ವೈಯಕ್ತಿಕ ವಿಚಾರಗಳನ್ನು ಹೇಳಿಕೊಂಡಿದ್ದಾರೆ. ನಂತರ ಅಭಯಂ ತಂಡ ಅವರ ಮನೆಗೆ ಭೇಟಿ ನೀಡಿ ಕೌನ್ಸೆಲಿಂಗ್ ಆರಂಭಿಸಿ, ಈ ವಯಸ್ಸಿನಲ್ಲಿ ಯೋಗಾಭ್ಯಾಸ ಮಾಡುವಂತೆ ಮತ್ತು ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಂತೆ ವೃದ್ಧೆಯ ಪತಿಗೆ ತಿಳಿಸಿದೆ. ಅವರ ಮನಸ್ಸನ್ನು ಬೇರೆಡೆಗೆ ತಿರುಗಿಸಲು ಉದ್ಯಾನವನಗಳಿಗೆ ಭೇಟಿ ನೀಡುವಂತೆಯೂ ಹೇಳಲಾಗಿದೆ.