Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ | Green Crackers
    ಸುದ್ದಿ

    ರಾಜ್ಯದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ | Green Crackers

    vartha chakraBy vartha chakraಅಕ್ಟೋಬರ್ 16, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ.16: ಪರಿಸರ ಮಾಲಿನ್ಯ ತಡೆಗಟ್ಟುವ ದೃಷ್ಟಿಯಿಂದ,ಕೋರ್ಟ್ ಆದೇಶದಂತೆ ರಾಜ್ಯದೆಲ್ಲೆಡೆ ಹಸಿರು ಪಟಾಕಿಗಳಿಗೆ (Green Crackers) ಮಾತ್ರ ಅವಕಾಶವಿದೆ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.
    ಪರಿಸರಕ್ಕೆ ಹಾನಿಕಾರಕವಾದ ಪಟಾಕಿಗಳ ತಯಾರಿಕೆ, ಸಾಗಾಟ, ದಾಸ್ತಾನು ಮತ್ತು ಮಾರಾಟವನ್ನು ನ್ಯಾಯಾಲಯವೇ ನಿಷೇಧಿಸಿದೆ. ಇದನ್ನು ಮಂಡಳಿ ಮತ್ತು ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆಗಳು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಆದೇಶಿಸಿದರು.

    ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
    ನೆರೆ ರಾಜ್ಯಗಳಿಂದ ರಾಜ್ಯಕ್ಕೆ ಬರುವ ಹಾನಿಕಾರಕ ಪಟಾಕಿ ತಡೆಯಲು ರಾಜ್ಯದ ಗಡಿಯಲ್ಲಿ ತಪಾಸಣೆ ನಡೆಯುತ್ತಿದೆ. ಹಸಿರು ಪಟಾಕಿಗಳ ಮೇಲೆ ಕ್ಯು.ಆರ್. ಕೋಡ್ ಇರುತ್ತದೆ. ಇದನ್ನು ಸ್ಕ್ಯಾನ್ ಮಾಡಿದರೆ ಹಸಿರು ಪಟಾಕಿ ತಿಳಿಯುತ್ತದೆ ಎಂದು ತಿಳಿಸಿದರು.
    ಜನರಲ್ಲಿ ಜಾಗೃತಿ ಮೂಡಿಸಿದರೆ, ಪಟಾಕಿಗಳಿಂದ ಆಗುವ ಅಪಾಯದ ಬಗ್ಗೆ ತಿಳಿಯ ಹೇಳಿದರೆ ಹಸಿರು ಪಟಾಕಿ ಉತ್ತೇಜಿಸಲು ಮತ್ತು ಹೊಗೆ ಉಗುಳುವ, ಅಪಾಯಕಾರಿ ಅಂಶ ಒಳಗೊಂಡ ಪಟಾಕಿ ನಿರ್ಬಂಧಿಸಲು ಸಾಧ್ಯ. ಹೀಗಾಗಿ ಆಬಾಲವೃದ್ಧರಾದಿಯಾಗಿ ಎಲ್ಲರಿಗೂ ಈ ಬಗ್ಗೆ ಜಾಗೃತಿ ಮೂಡಿಸಲು ಶ್ರಮಿಸುವಂತೆ ಮಂಡಳಿಯ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

    ಅರ್ಜಿ ವಿಲೇವಾರಿ:
    ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರಾಕ್ಷೇಪಣಾ ಪತ್ರ (ಎನ್.ಓ.ಸಿ) ಕೋರಿ ಬರುವ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥ ಪಡಿಸುವಂತೆ ಸೂಚನೆ ನೀಡಲಾಗಿದೆ ಎಂದರು.
    ಹಸಿರು ಪ್ರವರ್ಗದ ಕೈಗಾರಿಕಾ ಘಟಕಗಳ ಸ್ಥಾಪನೆಗಾಗಿ ಅನುಮತಿ ಕೋರಿ ಸಲ್ಲಿಸಲಾಗುವ ಅರ್ಜಿಗಳು ನಿಯಮಾನುಸಾರ ಇದ್ದಲ್ಲಿ 30 ದಿನಗಳ ಒಳಗೆ, ಕೇಸರಿ ಅಂದರೆ ಆರೆಂಜ್ ಪ್ರವರ್ಗದ ಅರ್ಜಿಗಳನ್ನು 45 ದಿನಗಳ ಒಳಗೆ ಮತ್ತು ಕೆಂಪು ಪ್ರವರ್ಗದ ನಿರಾಕ್ಷೇಪಣಾ ಪತ್ರ ಕೋರಿ ಸಲ್ಲಿಸುವ ಅರ್ಜಿಗಳನ್ನು 90 ದಿನಗಳ ಒಳಗೆ ಇತ್ಯರ್ಥ ಪಡಿಸಬೇಕು ಎಂದು ಆದೇಶ ನೀಡಿದರು.
    ಮಂಡಳಿಯಲ್ಲಿ 1400ಕ್ಕೂ ಹೆಚ್ಚು ಅರ್ಜಿಗಳು ವಿಲೇವಾರಿ ಆಗದೆ ಬಾಕಿ ಉಳಿದಿದ್ದು, ಈ ರೀತಿ ವಿಳಂಬ ಮಾಡುವುದು ಸರಿಯಲ್ಲ, ಹೀಗಾಗಿ ಕಾಲಮಿತಿಯೊಳಗೆ ಅರ್ಜಿಗಳ ವಿಲೇವಾರಿ ಆಗಬೇಕು, ಅನಗತ್ಯವಾಗಿ ವಿಳಂಬವಾದರೆ ಸಂಬಂಧಿತ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಬೆಂಗಳೂರು ನಗರದ ಬೆಳ್ಳಂದೂರು ಕೆರೆಯ ಸುತ್ತಮುತ್ತ ತ್ಯಾಜ್ಯ ನೀರನ್ನು ಕರೆಗೆ ನೇರವಾಗಿ ಹರಿಸುತ್ತಿರುವ ಬೃಹತ್ ವಸತಿ ಸಮುಚ್ಚಯಗಳಿಂದ ಸುಮಾರು 200 ಕೋಟಿ ರೂ. ದಂಡ ವಸೂಲಿ ಮಾಡಿ, ತ್ಯಾಜ್ಯ ಜಲ ಸಂಸ್ಕರಣೆಗೆ ಘಟಕ (ಎಸ್.ಟಿ.ಪಿ.) ನಿರ್ಮಿಸಲು ಎನ್.ಜಿ.ಟಿ. ಆದೇಶ ನೀಡಿದೆ.

     

    2024ರ ಡಿಸೆಂಬರ್ ಒಳಗೆ ಈ ಎಸ್.ಟಿ.ಪಿ. ಕಾರ್ಯ ಪೂರ್ಣಗೊಳಿಸಲು ಗಡುವು ನೀಡಲಾಗಿದೆ. ಸುಮಾರು 58 ಕಟ್ಟಡ ಸಮುಚ್ಚಯಗಳಿಗೆ ತಲಾ 3 ಕೋಟಿ ರೂ. ದಂಡ ವಿಧಿಸಲಾಗಿದೆ. ಆದರೆ ಈವರೆಗೆ 4 ಕೋಟಿ ರೂ. ಮಾತ್ರವೇ ಸಂಗ್ರಹವಾಗಿದೆ ಎಂದು ತಿಳಿಸಿದರು.
    ಕಟ್ಟಡ ನಿರ್ಮಾಣ ಮಾಡಿದ ಬಿಲ್ಡರ್ ಗಳು ಮನೆಗಳನ್ನು ಮಾರಾಟ ಮಾಡಿ ಹೋಗಿದ್ದಾರೆ. ಆದರೆ ಈಗ ಮನೆ ಖರೀದಿಸಿರುವ ಮಧ್ಯಮವರ್ಗದ ಜನರಿಂದ ದಂಡ ವಸೂಲಿ ಮಾಡುವುದು ಕಷ್ಟವಾಗಿದೆ ಆದರೂ ಕಾನೂನಿನ ಮಿತಿಯಲ್ಲಿ ದಂಡ ವಸೂಲಿ ಮಾಡಿ ಕೆರೆ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ನೀಡಿದ ಉತ್ತರದಲ್ಲಿ ತಿಳಿಸಿದರು.

    environment Government Green Crackers Karnataka News Trending ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಶಕ್ತಿ ಪ್ರದರ್ಶನದ ಜಾರಕಿಹೊಳಿ ನಡೆಗೆ ಹೈಕಮಾಂಡ್ ಬ್ರೇಕ್ | Satish Jarkiholi
    Next Article Invest Karnataka Forumಗೆ ಸಜ್ಜನ್ ಜಿಂದಾಲ್ ನೇತೃತ್ವ
    vartha chakra
    • Website

    Related Posts

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025

    ಜರ್ಮನಿ ತಂಡದೊಂದಿಗೆ ಮುಖ್ಯಕಾರ್ಯದರ್ಶಿ ಚರ್ಚೆ

    ಡಿಸೆಂಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಫಾರಿ ಸ್ಥಗಿತ – ಮುಂದೇನು?

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Teploogonoids ರಲ್ಲಿ ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    • Scotthem ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Scotthem ರಲ್ಲಿ BJP ಗೆಲುವಿಗೆ ಮಾಸ್ಟರ್ ಪ್ಲಾನ್
    Latest Kannada News

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ, ಡಿಸಿಎಂ ಬಳಿ ಇದೆ 43 ಲಕ್ಷದ ವಾಚ್!
    Subscribe