ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವಕುಮಾರ್ ಅವರನ್ನು ಕಟ್ಟಿಹಾಕುವ ಪ್ಲಾನ್ ಹೇಗಿದೆ ಗೊತ್ತಾ | DK Shivakumar
    ಸುದ್ದಿ

    ಶಿವಕುಮಾರ್ ಅವರನ್ನು ಕಟ್ಟಿಹಾಕುವ ಪ್ಲಾನ್ ಹೇಗಿದೆ ಗೊತ್ತಾ | DK Shivakumar

    vartha chakraBy vartha chakraನವೆಂಬರ್ 27, 2023Updated:ನವೆಂಬರ್ 27, 20232 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ನಲ್ಲಿ ಪ್ರಮುಖವಾಗಿ ಕೇಳಿಬರುವ ಹೆಸರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar). ಇವರನ್ನು ಹೇಗಾದರೂ ಮಣಿಸಲೇಬೇಕು ಎಂದು ಹಠಕ್ಕೆ ಬಿದ್ದವರಲ್ಲಿ ಮೊದಲ ಸ್ಥಾನದಲ್ಲಿರುವವರು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಕುಮಾರಸ್ವಾಮಿ.
    ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮಯದಲ್ಲಿ ಜೋಡೆತ್ತು ಎಂದು ಬಣ್ಣಿಸಲ್ಪಟ್ಟ ನಾಯಕರು ಇದೀಗ ಹಾವು- ಮುಂಗುಸಿಯಂತಾಗಿದ್ದಾರೆ.ರಾಜಕಾರಣದಲ್ಲಿ ಈ ಇಬ್ಬರ ನಡುವಿನ ಸಂಘರ್ಷ ರಾಜ್ಯದ ಜನರ ಗಮನ ಸೆಳೆದಿದೆ.
    ಅವಕಾಶ ಸಿಕ್ಕಾಗೆಲ್ಲಾ ಅವರು, ಇವರನ್ನು ಮಣಿಸಲು,ಇವರು, ಅವರನ್ನು ಮಣಿಸಲು ಸದಾ ಹಾತೊರೆಯುತ್ತಿದ್ದಾರೆ.ಇದಕ್ಕಾಗಿ ಸಿಗುವ ಒಂದು ಸಣ್ಣ ಅವಕಾಶವನ್ನೂ ಈ ನಾಯಕರು ಬಿಟ್ಟು ಕೊಡುವುದಿಲ್ಲ.

    ಶಿವಕುಮಾರ್ ಅವರನ್ನು ಮಣಿಸುವ ಈ ಕಾರ್ಯತಂತ್ರದ ಭಾಗವಾಗಿ ಅವರ ಮತ್ತೊಬ್ಬ ರಾಜಕೀಯ ಎದುರಾಳಿ ಮಾಜಿ ಮಂತ್ರಿ ಹಾಗೂ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಎಂಬ ಅಸ್ತ್ರವನ್ನು ಪ್ರಯೋಗಿಸಲು ಕುಮಾರಸ್ವಾಮಿ ಮುಂದಾಗಿದ್ದಾರೆ.
    ಎನ್.ಡಿ.ಎ.ಮೈತ್ರಿ ಕೂಟ ಸೇರುವ ಮೂಲಕ ಈಗಾಗಲೇ ‌ಜೆಡಿಎಸ್,ಬಿಜೆಪಿಯ ಮಿತ್ರ ಪಕ್ಷವಾಗಿದೆ.ಇದೇ ಅವಕಾಶ ಬಳಸಿಕೊಂಡು ಶಿವಕುಮಾರ್ ಅವರಿಗೆ ಎದಿರೇಟು ನೀಡಲು ಕುಮಾರಸ್ವಾಮಿ ರಣತಂತ್ರ ರೂಪಿಸುತ್ತಿದ್ದಾರೆ.
    ಇದರ ಭಾಗವಾಗಿ ಶಿವಕುಮಾರ್ ಅವರ ರಾಜಕೀಯ ಶಕ್ತಿ ಎಂದೇ ಪರಿಗಣಿಸಲ್ಪಡುವ ಅವರ ಸೋದರ ಹಾಗೂ ಸಂಸದ ಡಿ.ಕೆ.ಸುರೇಶ್ ಅವರನ್ನು ಮಣಿಸಲು ತಂತ್ರ ಹೆಣೆದಿದ್ದಾರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಅವರನ್ನು ಸೋಲಿಸಲು ಯೋಗೇಶ್ವರ್‌ ಅವರನ್ನು ‌ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದಾರೆ.
    ವಾಸ್ತವವಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಗಿಂತಲೂ ಜೆಡಿಎಸ್ ಸಂಘಟನಾತ್ಮಕವಾಗಿ ಹೆಚ್ಚು ಪ್ರಾಬಲ್ಯ ಹೊಂದಿದೆ.ಅದರೆ,ಇದು ಸುರೇಶ್ ಅವರನ್ನು ಮಣಿಸುವಷ್ಟರ‌ಮಟ್ಟಿಗೆ ಬಲಶಾಲಿಯಲ್ಲ. ಹೀಗಾಗಿ ಕುಮಾರಸ್ವಾಮಿ ಅವರು ‌ಈ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟು ಯೋಗೇಶ್ವರ್ ಅವರನ್ನು ಅಭ್ಯರ್ಥಿಯಾಗಿ ಮಾಡುವಂತೆ ಬಿಜೆಪಿ ನಾಯಕರಿಗೆ ಮನವಿ ಮಾಡಲು ಸಿದ್ಧತೆ ನಡೆಸಿದ್ದಾರೆ.

    ಕ್ಷೇತ್ರದಾದ್ಯಂತ ಜೆಡಿಎಸ್ ತನ್ನ ನೆಲೆ ಹೊಂದಿದೆ. ಕನಕಪುರ ಹೊರತುಪಡಿಸಿ ಉಳಿದೆಡೆ ಬಿಜೆಪಿ ಸಹ ತನ್ನದೇ ಆದ ಮತ ಬ್ಯಾಂಕ್ ಹೊಂದಿದೆ. ಕ್ಷೇತ್ರದ ವ್ಯಾಪ್ತಿಗೆ ಬರುವ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ರಾಮನಗರ ಜಿಲ್ಲೆಯ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಬೆಂಗಳೂರಿನ ದಕ್ಷಿಣ, ರಾಜರಾಜೇಶ್ವರಿ ನಗರ, ಆನೇಕಲ್ ಹಾಗೂ ತುಮಕೂರು ಜಿಲ್ಲೆಯ ಕುಣಿಗಲ್ ಕ್ಷೇತ್ರಗಳ ಪೈಕಿ ಎರಡು ಕಡೆ ಬಿಜೆಪಿ, ಒಂದು ಕಡೆ ಜೆಡಿಎಸ್ ಗೆದ್ದಿದ್ದರೆ, ಐದು ಕಡೆ ಕಾಂಗ್ರೆಸ್ ಗೆದ್ದಿದೆ.
    ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರರಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆದ್ದಿದ್ದಾರೆ. ಅದರಲ್ಲೂ ಕುಮಾರಸ್ವಾಮಿ ಅವರ ಭದ್ರಕೋಟೆ ರಾಮನಗರದಲ್ಲಿ ತಮ್ಮ ಕಟ್ಟಾ ಬೆಂಬಲಿಗ ಎಚ್‌.ಎ. ಇಕ್ಬಾಲ್ ಹುಸೇನ್ ಅವರನ್ನು ಡಿ.ಕೆ. ಸಹೋದರರು ಗೆಲ್ಲಿಸಿಕೊಂಡು ಬಂದಿದ್ದಾರೆ. ಇಡೀ ಜಿಲ್ಲೆಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.
    ಚನ್ನಪಟ್ಟಣದಲ್ಲಿ ಯೋಗೇಶ್ವರ್ ಸಹ ಸತತ ಸೋಲಿನಿಂದ ಕಂಗೆಟ್ಟಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆ ಜಿಲ್ಲೆಯಲ್ಲಿ ತಮ್ಮ ಅಸ್ತಿತ್ವ ಮತ್ತು ಸಾಮರ್ಥ್ಯ ಸಾಬೀತುಪಡಿಸಲು ಸಿಕ್ಕಿರುವ ಅವಕಾಶ ಎಂದು ಕುಮಾರಸ್ವಾಮಿ ಮತ್ತು ಯೋಗೇಶ್ವರ್ ಭಾವಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಮತ್ತು ಯೋಗೇಶ್ವರ್ ತಮ್ಮ ರಾಜಕೀಯ ವೈಷಮ್ಯ ಮರೆತು ಒಂದಾಗಿದ್ದಾರೆ.ಹಲವು ಬಾರಿ ಇಬ್ಬರೂ ನಾಯಕರು ಒಟ್ಟಾಕಿ ಕುಳಿತು ಮಾತುಕತೆ ನಡೆಸಿ, ಈ ವಿಷಯದಲ್ಲಿ ಒಮ್ಮತಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಮೈತ್ರಿ ಬಳಿಕ ರಾಜಕೀಯ ವೈಷಮ್ಯ ಮರೆತು ಒಂದಾಗಿರುವ ಇಬ್ಬರೂ ಲೋಕಸಭಾ ಚುನಾವಣೆಯಲ್ಲಿ ಸುರೇಶ್ ಅವರನ್ನು ಸೋಲಿಸುವ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜಕೀಯವಾಗಿ ಕಟ್ಟಿ ಹಾಕಲು ಮುಂದಾಗಿದ್ದಾರೆ.
    ಇದರ ಭಾಗವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ವಿಜಯೇಂದ್ರ ಅವರೊಂದಿಗೆ ಕುಮಾರಸ್ವಾಮಿ ಸುಧೀರ್ಘ ಮಾತುಕತೆ ನಡೆಸಿದ್ದಾರೆ. ಬಿಡದಿಯ ತಮ್ಮ ತೋಟದ ಮನೆಯಲ್ಲಿ ನಡೆದ ಮಾತುಕತೆ ಸಮಯದಲ್ಲಿ ಈ ಇಬ್ಬರೂ ನಾಯಕರು ಲೋಕಸಭಾ ಚುನಾವಣೆಯಲ್ಲಿ ಶಿವಕುಮಾರ್ ಗೆ‌ ತಕ್ಕ ಪಾಠ ಕಲಿಸಲೇಬೇಕು ಎಂದು ನಿರ್ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
    ಈ ಮಾತುಕತೆಯಲ್ಲಿ ಡಿ.ಕೆ. ಸುರೇಶ್‌ ಅವರಿಗೆ ಪ್ರಬಲ ಪೈಪೋಟಿ ನೀಡಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಸಿ.ಪಿ. ಯೋಗೇಶ್ವರ್ ಅವರನ್ನು ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವುದು ಬಹುತೇಕ ಅಂತಿಮಗೊಂಡಿದೆ ಎಂದು ತಿಳಿದು ಬಂದಿದೆ.

    ಇದಕ್ಕೆ ಪೂರಕವೆಂಬಂತೆ ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ಸಿನ ಏಕೈಕ ಸಂಸದ ಸುರೇಶ್ ಅವರನ್ನು ಈ ಬಾರಿಯ ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳುಹಿಸಲಾಗುವುದು ಇದಕ್ಕಾಗಿಯೇ ಕುಮಾರಸ್ವಾಮಿ ಅವರ ಜೊತೆಗೂಡಿ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಕಾರ್ಯತಂತ್ರ ರೂಪಿಸಲಾಗಿದೆ ಎಂದು ಹೇಳಿದರು.
    ಈ‌ ತಂತ್ರದ ಹಿಂದೆ ಮತ್ತೊಂದು ಲೆಕ್ಕಾಚಾರವೂ ಇದೆ.ಲೋಕಸಭೆ ಚುನಾವಣೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಬಲಗೈ ಆಗಿರುವ ಸುರೇಶ್ ಅವರನ್ನು ಸೋಲಿಸಿ ಯೋಗೇಶ್ವರ್ ಅವರನ್ನು ಸಂಸತ್ತಿಗೆ ಕಳಿಸುವುದರಿಂದ ಮುಂದೆ ಚನ್ನಪಟ್ಟಣದಲ್ಲಿ ಜೆಡಿಎಸ್‌ ಹಾದಿ ಮತ್ತಷ್ಟು ಸುಗಮವಾಗಲಿದೆ.ಕುಮಾರಸ್ವಾಮಿ ಅವರಿಗೆ ಇಲ್ಲಿ ಪ್ರಬಲ ಎದುರಾಳಿಯೇ‌ ಇಲ್ಲದಂತಾಗುತ್ತದೆ.

    Verbattle
    Verbattle
    Verbattle
    DK. Shivakumar m shiva ಕಾಂಗ್ರೆಸ್ ಚುನಾವಣೆ ತುಮಕೂರು ರಾಜಕೀಯ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleಎಲ್‌.ಕೆ. ಅತೀಕ್‌ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ | LK Atheeq
    Next Article ಭಿನ್ನಮತ ಶಮನಕ್ಕೆ ವರಿಷ್ಠರ ಮೊರೆ | BJP Karnataka
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Bwlitz on ಮಾರ್ಚ್ 17, 2026 7:38 ಅಪರಾಹ್ನ

      Kasinets fremtid er Betano. Ta €500 velkomstbonus https://betanogame.org/no/ og opplev førsteklasses slots og live dealere. Uttak på minutter.

      Reply
    2. Ejgbri on ಮಾರ್ಚ್ 22, 2026 2:49 ಫೂರ್ವಾಹ್ನ

      No Mostbet cada aposta carrega a promessa de momentos incrГ­veis – https://mostbetpt.pro/como-se-registrar/ , No Mostbet vocГЄ recebe 125% de bГґnus + 300 free spins para arrasar nos jogos .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • humanlove.stream ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • SteveRhymn ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.