ಬೆಂಗಳೂರು: ಯೋಗ ದಿನದ ಪ್ರಯುಕ್ತ ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ.
ಐಎಎಫ್ ವಿಶೇಷ ವಿಮಾನದಲ್ಲಿ ಯಲಹಂಕ ವಾಯುನೆಲೆಗೆ ಆಗಮಿಸಿದ ಪ್ರಧಾನಿಗೆ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮಾಜಿ ಸಿಎಂ ಯಡಿಯೂರಪ್ಪ ಸ್ವಾಗತ ಕೋರಿದರು.
ಪ್ರಧಾನಿ ಮೋದಿ ಅವರನ್ನು ಶಾಲು ಹೊದಿಸಿ, ಪುಸ್ತಕ ನೀಡಿ ಸಿಎಂ ಆತ್ಮೀಯವಾಗಿ ಸ್ವಾಗತಿಸಿದರು. ಈ ವೇಳೆ ಕೇಂದ್ರ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಜರಿದ್ದರು.
Previous Articleಚಿಕ್ಕಮಗಳೂರಿನಲ್ಲಿ ಭಾರೀ ಅಪಘಾತ
Next Article ಪ್ರಾಂಶುಪಾಲರ ಮೇಲೆ ಉಪನ್ಯಾಸಕನಿಂದ ಹಲ್ಲೆ!