ಬೆಂಗಳೂರು, ಮೇ.26-ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ನಡೆದ ಹಗರಣದ ಸಂಬಂಧ ತನಿಖೆ ತೀವ್ರಗೊಳಿಸಿರುವ ಸಿಸಿಬಿ ಪೊಲೀಸರಿಗೆ ಮತ್ತೆರಡು ವಿಷಯಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಮಾಹಿತಿಯು ಲಭ್ಯವಾಗಿದೆ.
ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ನಡೆದ ಹಗರಣದ ಸಂಬಂಧಿಸಿದ ತನಿಖೆಯನ್ನು ನಗರ ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾಯಿಸಿದ್ದು ತನಿಖೆಯನ್ನು ತೀವ್ರಗೊಳಿಸಿರುವ ಅಧಿಕಾರಿಗಳಿಗೆ ಮತ್ತೆರಡು ವಿಷಯಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಪತ್ತೆಯಾಗಿದ್ದು ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.
ಪ್ರಕರಣದ ಸಂಬಂಧ ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗಿದ್ದು,ಅವರ ಮೊಬೈಲ್ ರಿಟ್ರೀವ್ ಮಾಡಿ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.
ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಿಸಿಬಿ ಪತ್ರ ಬರೆದಿದೆ. ಕೆಇಎಯಿಂದ ಉತ್ತರ ಬಾರದ ಹಿನ್ನೆಲೆಯಲ್ಲಿ ನೋಟಿಸ್ ನೀಡುವ ಸಾಧ್ಯತೆಯೂ ಇದೆ.
ಕೆಲ ಶಂಕಿತ ಅಭ್ಯರ್ಥಿಗಳ ಒಎಂಆರ್ ಶೀಟ್ಗಳನ್ನು ನೀಡುವಂತೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷಾರ್ಥಿಗಳಿಗೆ ಸೂಚನೆ ನೀಡಲಾಗಿದೆ. ಒಎಂಆರ್ ಶೀಟ್ ಗಳನ್ನು ಪಡೆದು ಸಿಸಿಬಿ ಅಧಿಕಾರಿಗಳು ತಾಳೆ ಹಾಕಲಿದ್ದಾರೆ.
Previous Articleಸಕ್ಕರೆ ರಫ್ತಿನ ಮೇಲೂ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ
Next Article ಪಾಲಿಕೆ ಕಚೇರಿಯಲ್ಲಿ ಗಲಾಟೆ ‘ಕಾರಿನ ಗಾಜು ಪುಡಿ ಪುಡಿ