ಬೆಂಗಳೂರು.ಜ,10: ವಿಧಾನಸಭೆ ಚುನಾವಣೆಗೆ ಮುನ್ನ ರಾಜ್ಯದ ಜನತಗೆ ನೀಡಿದ ಗ್ಯಾರಂಟಿ ಭರವಸೆಗಳನ್ನು ಯೋಜನೆಗಳ ಮೂಲಕ ಜಾರಿಗೊಳಿಸಿರುವ ರಾಜ್ಯ ಸರ್ಕಾರ ಇವುಗಳ ಅನುಷ್ಠಾನಕ್ಕೆ ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದೆ.
ಲೋಕಸಭಾ ಚುನಾವಣೆ ಸಿದ್ಧತೆಗಾಗಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ (Congress) ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು
ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು.ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದೆ ಎಂದು ತಿಳಿಸಿದರು.
ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು. ಸುಮಾರು 31 ಜನ ಸದಸ್ಯರು ಇರಲಿದ್ದು ಅವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವ ಧನ ನೀಡುವ ವ್ಯವಸ್ಥೆ ಮಾಡಲಾಗುವುದು.ಹಾಗೂ ಪ್ರತಿ ತಿಂಗಳು 50 ಸಾವಿರ ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯಲ್ಲಿ ಅಧ್ಯಕ್ಷರ ಜೊತೆಗೆ 21 ಸದಸ್ಯರು ಇರಲಿದ್ದಾರೆ. ಎಲ್ಲಾ 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ. ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ ಒದಗಿಸಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು ಎಂದು ವಿವರಿಸಿದರು.
ಸರ್ಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ ₹16 ಕೋಟಿ ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದರು.
ಕಾರ್ಯಕರ್ತರಿಗೆ, ಶಾಸಕರಲ್ಲದವರಿಗೆ ಸಂಸದರಲ್ಲದವರಿಗೆ, ಸಮಿತಿ ಸದಸ್ಯತ್ವ ದೊರೆಯಲಿದೆ. ವಿವಿಧ ಇಲಾಖೆಗಳ ಸಮಿತಿಗಳನ್ನು ಕೂಡಲೇ ರಚಿಸಲು ಆಯಾ ಇಲಾಖೆಗಳ ಸಚಿವರ ವಿವೇಚನೆಗೆ ಬಿಡಲಾಗಿದೆ. ಹೆಸರುಗಳನ್ನು ಪಡೆಯುವಾಗ, ನಮ್ಮ ಶಾಸಕರು, ಸಂಸದರ ಸಲಹೆ ಪಡೆಯಲಾಗುವುದು. ವಿಧಾನಸಭೆ ಟಿಕೆಟ್ ದೊರೆಯದವರಿಗೆ ಹಾಗೂ ಕೆಲವು ಮಾಜಿ ಶಾಸಕರಿಗೂ ಅವಕಾಶ ಕಲ್ಪಿಸಲಾಗುವುದು.ಈ ಸಮಿತಿಗಳಿಗೆ ಎರಡು ವರ್ಷಗಳ ಅಧಿಕಾರಾವಧಿ ಇರಲಿದೆ ಈ ಮೂಲಕ ಕಾರ್ಯಕರ್ತರಿಗೆ ಸರ್ಕಾರದ ಅಧಿಕಾರ ಸಿಗುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.
ಕಾರ್ಯಕರ್ತರ ಶ್ರಮದಿಂದ ಪಕ್ಷ ಗಟ್ಟಿಯಾಗಿದೆ. ಹೀಗಾಗಿ ಅವರ ಶ್ರಮವನ್ನು ಗುರುತಿಸಿ ಗೌರವಿಸಬೇಕಾಗಿದೆ.ಲೋಕಸಭಾ ಚುನಾವಣೆಯನ್ನು ನಾವು ಗೆಲ್ಲಲೇ ಬೇಕು. ಇಷ್ಟೆಲ್ಲಾ ಮಾಡಿಯೂ ನಾವು ಗೆಲ್ಲದೆ ಹೋದರೆ ಅದು ನಮಗೆ ಹಿನ್ನಡೆಯಾಗಲಿದೆ. ನಾವು ಗೆಲ್ಲಲೇಬೇಕು. 28 ಕ್ಕೆ 28 ಸೀಟನ್ನು ಗೆಲ್ಲಬೇಕು. ಕನಿಷ್ಠ 26 ಸೀಟು ಗೆಲ್ಲಬೇಕು. ಜನರ ನಾಡಿ ಮಿಡಿತ ನಮ್ಮ ಪರವಾಗಿರುವುದರಿಂದ ಅಪಪ್ರಚಾರದಿಂದ ನಾವು ಯಾರೂ ಹತಾಶರಾಗಬಾರದು. ಸಕಾರಾತ್ಮಕವಾಗಿರಬೇಕು ಎಂದು ಮುಖ್ಯಮಂತ್ರಿ ಹೇಳಿದರು.
13 ಪ್ರತಿಕ್ರಿಯೆಗಳು
cheap clomid without rx where can i get cheap clomid tablets can i buy clomiphene no prescription generic clomid walmart can i get clomid for sale how can i get generic clomiphene no prescription how to get generic clomid
More articles like this would remedy the blogosphere richer.
More peace pieces like this would insinuate the web better.
buy inderal without a prescription – how to buy plavix methotrexate pill
cost zithromax – zithromax without prescription bystolic drug
augmentin 625mg cheap – https://atbioinfo.com/ acillin usa
order esomeprazole online – https://anexamate.com/ purchase nexium pill
warfarin 2mg over the counter – cou mamide losartan 25mg for sale
order mobic 7.5mg generic – relieve pain meloxicam 15mg canada
where to buy ed pills – site male ed pills
generic forcan – https://gpdifluca.com/# buy generic forcan online
order cenforce 100mg generic – https://cenforcers.com/ cenforce usa
cialis erection – ciltad genesis tadalafil generic 20 mg ebay