ಬೆಂಗಳೂರು,ಏ.28: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಷ್ಟ ಹೇಳಿಕೊಂಡು ಬಂದಂತಹ ಹೆಣ್ಣುಮಕ್ಕಳ ಕಷ್ಟವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಾಗಲಿ, ನಾನಾಗಲೀ ಪರಿಹರಿಸಿ ಕಳುಹಿಸಿದ್ದೇವೆ. ಹೆಣ್ಣು ಮಕ್ಕಳಿಗೆ ಹೆಚ್ಚಿನ ಗೌರವ ಕೊಟ್ಟಿದ್ದೇವೆ ಎಂದರು.
ಹಾಸನ ಚುನಾವಣಾ ಸಂದರ್ಭದಲ್ಲಿ ಕೇಳಿಬಂದಿರುವ ಆರೋಪದ ಬಗ್ಗೆ ಎಸ್‌ಐಟಿ ತನಿಖೆ ವಹಿಸಲಾಗಿದೆ. ಈ ನೆಲದಲ್ಲಿ ಯಾರೇ ತಪ್ಪು ಮಾಡಿದರೂ ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು, ತಪ್ಪು ಮಾಡಿದವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ಮುರಿದಂತೆ ನುಡಿದರು.
ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ ಎಂಬ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಅವರು, ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಲ್ಲೇ ಇದ್ದರೂ ಕರೆದುಕೊಂಡು ಬರುವ ಜವಾಬ್ದಾರಿ ಅವರದು ಎಂದರು.
ಜಿ ಟಿ ಡಿ ಸ್ವಾಗತ:
ಮತ್ತೊಂದೆಡೆ, ಸಂಸದ ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ಲೈಂಗಿಕ ದೌರ್ಜನ್ಯದ ಆರೋಪದ ಬಗ್ಗೆ ರಾಜ್ಯಸರ್ಕಾರ ವಿಶೇಷ ತನಿಖಾದಳಕ್ಕೆ ವಹಿಸಿರುವುದನ್ನು ಸ್ವಾಗತಿಸುವುದಾಗಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಎದುರಾಳಿಗಳನ್ನು ಸೋಲಿಸಲು ಎಲ್ಲಾ ರೀತಿಯ ಪ್ರಯತ್ನ ನಡೆಯುತ್ತವೆ. ಅದರ ಭಾಗ ಇದೂ ಆಗಿರಬಹುದು. ಲೈಂಗಿಕ ದೌರ್ಜನ್ಯದ ಆರೋಪದ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ.
ರಾಜ್ಯಸರ್ಕಾರ ಎಸ್‌ಐಟಿಗೆ ವಹಿಸಿರುವುದನ್ನು ಸ್ವಾಗತಿಸುತ್ತೇವೆ. ಆರೋಪಕ್ಕೆ ಸಂಬಂಧಿಸಿದಂತೆ ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ. ಪೆನ್‌ಡ್ರೈವ್ ವಿಚಾರ ಅಥವಾ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿರುವ ವಿಚಾರ ತಮ್ಮ ಗಮನಕ್ಕೆ ಬಂದಿಲ್ಲ. ತಾವು ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದು, ಆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು.
4 ಪ್ರತಿಕ್ರಿಯೆಗಳು
i-tec.ru https://multimedijnyj-integrator.ru/ .
Мультимедийный интегратор Мультимедийный интегратор .
Начните экономить с нашим промокодом прямо сейчас! free-promocode.ru .
Autonomo в Испании https://www.klaipedatours.ru .