ಬೆಂಗಳೂರು – ಹಲವು ಹಲವು ಸುತ್ತಿನ ಚರ್ಚೆ ಮಾತುಕತೆ, ಸಂತಾನದ ಬಳಿಕ ನೂತನ ಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ.
ನಿರೀಕ್ಷೆಯಂತೆ ಸಿದ್ದರಾಮಯ್ಯ ಅವರು ಹಣಕಾಸು, ವಾರ್ತಾ ಮತ್ತು ಪ್ರಸಾರ, ಗುಪ್ತಚರ ಇಲಾಖೆ ಸೇರಿದಂತೆ ಹಂಚಿಕೆಯಾಗದಿರುವ ಖಾತೆ ಗಳನ್ನು ತಮ್ಮ ಬಳಿ ಉಳಿಸಿಕೊಂಡಿದ್ದಾರೆ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಬೇಡಿಕೆಯಂತೆ ಜಲಸಂಪನ್ಮೂಲ ಹಾಗೂ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಪಡೆಯುವಲ್ಲಿ ಸಫಲರಾಗಿದ್ದಾರೆ.
ಜಿ ಪರಮೇಶ್ವರ್ ನಿರೀಕ್ಷೆಯಂತೆ ಗೃಹ ಸಚಿವರಾದರೆ, ಎಂಬಿ ಪಾಟೀಲ್ ಬೃಹತ್ ಮತ್ತು ಮಾಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಖಾತೆಗಳ ಜವಾಬ್ದಾರಿ ಪಡೆದುಕೊಂಡಿದ್ದಾರೆ ಕೆ ಜೆ ಚಾರ್ಜ್ ಅವರು ಇಂಧನ ಸಚಿವರಾಗಿದ್ದು ಎಚ್ ಕೆ ಪಾಟೀಲ್ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯ ಜೊತೆಗೆ ಪ್ರವಾಸೋದ್ಯಮ ಇಲಾಖೆಯ ಜವಾಬ್ದಾರಿ ಹೊಂದಿದ್ದಾರೆ.
ಖಾತೆಗಳ ಹಂಚಿಕೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜೊತೆಗೆ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಜವಾಬ್ದಾರಿ ನೀಡಲಾಗಿದೆ. ಈ ಮೂಲಕ ಪ್ರಿಯಾಂಕ ಖರ್ಗೆ ಅವರು ಖಾತೆಗಳ ಹಂಚಿಕೆಯಲ್ಲಿ ಬಂಪರ್ ಲಾಭ ಪಡೆದುಕೊಂಡಿದ್ದಾರೆ.
ಏಕೈಕ ಮಹಿಳಾ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜೊತೆಗೆ ಹಿರಿಯರ ಸಬಲೀಕರಣ ಖಾತೆ ಜವಾಬ್ದಾರಿ ನೀಡಲಾಗಿದೆ ಡಾ. ಎಂ ಸಿ ಸುಧಾಕರ್ ಅವರಿಗೆ ಉನ್ನತ ಶಿಕ್ಷಣ ಇಲಾಖೆ ನೀಡಿದ್ದು, ಡಾ.ಶರಣ ಪ್ರಕಾಶ್ ಪಾಟೀಲ್ ಅವರಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಡಿ ಸುಧಾಕರ್ ಅವರಿಗೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜವಾಬ್ದಾರಿ ನೀಡಲಾಗಿದೆ