ಬೆಂಗಳೂರು,ಜ.15-
ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು ನಾನಾ ಕಸರತ್ತು ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು ಇದೀಗ ಮಹಿಳೆಯರನ್ನು ಸೆಳೆಯುವ ದೃಷ್ಟಿಯಿಂದ ಯುವ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಅವರನ್ನು ಕರೆತರುತ್ತಿದೆ.
ಹಿಮಾಚಲ ಪ್ರದೇಶದಲ್ಲಿ ಪ್ರಿಯಾಂಕ ಗಾಂಧಿ ಪ್ರಯೋಗ ಯಶಸ್ವಿಯಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.ಹೀಗಾಗಿ ಕರ್ನಾಟಕದಲ್ಲೂ ಅವರನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರಯೋಗಿಸಲು ಸಿದ್ದತೆ ನಡೆಸಲಾಗಿದೆ.
ಇದಕ್ಕಾಗಿ ಬೆಂಗಳೂರಿನಲ್ಲಿ ನಡೆಯುವ ಮಹಿಳಾ ನಾಯಕಿಯರ ಸಮಾವೇಶ ನಾ ನಾಯಕಿಯಲ್ಲಿ ಪ್ರಿಯಾಂಕ ಗಾಂಧಿ ಭಾಗವಹಿಸಲಿದ್ದಾರೆ .
ಅರಮನೆ ಮೈದಾನದಲ್ಲಿ ಮಹಿಳಾ ನಾಯಕಿಯರ ಸಮಾವೇಶ ನಡೆಯುತ್ತಿದೆ.ಇದರಲ್ಲಿ ಗ್ರಾಮ ಪಂಚಾಯತ್, ಸಹಕಾರ ಸಂಘಗಳು ಸೇರಿದಂತೆ ಸಂಸತ್‍ವರೆಗೂ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವ ಹೆಣ್ಣುಮಕ್ಕಳು ಭಾಗವಹಿಸುತ್ತಿದ್ದಾರೆ.
ಈ ನಡುವೆ ನಾ ನಾಯಕಿ’ ಸಮಾವೇಶ ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತರಿಗೆ ಸೀಮಿತವಾಗಿದ್ದು, ಪುರುಷ ಕಾರ್ಯಕರ್ತರಿಗೆ ಅವಕಾಶವಿಲ್ಲ. ಪುರುಷ ಕಾರ್ಯಕರ್ತರು ಬಂದು ಸಮಯ ವ್ಯರ್ಥ ಮಾಡಿಕೊಳ್ಳಬೇಡಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಸೂಚನೆ ನೀಡಿದ್ದಾರೆ.
ಸಮಾವೇಶದಲ್ಲಿ ತಮ್ಮನ್ನೂ ಸೇರಿದಂತೆ ಪುರುಷ ನಾಯಕರೂ ವೇದಿಕೆಯ ಮೇಲೆ ಕೂರುವುದಿಲ್ಲ. ವೇದಿಕೆಯನ್ನು ಪೂರ್ಣ ಪ್ರಮಾಣದಲ್ಲಿ ಮಹಿಳೆಯರಿಗೆ ಮೀಸಲಿಟ್ಟು ನಾವು ವೇದಿಕೆ ಮುಂಭಾಗದಲ್ಲಿ ಕೂರಲು ನಿರ್ಧರಿಸಿದ್ದೇವೆ ಎಂದೂ ಹೇಳಿದರು.ಹಾಗೇ ಸೋಮವಾರ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರು ಬೆಂಗಳೂರಿಗೆ ಆಗಮಿಸುವಾಗ ಬ್ಯಾಟರಾಯಣಪುರದ ಸಾದಹಳ್ಳಿ ಟೋಲ್ ಗೇಟ್-ಗೆ ಅವರು ತಲುಪುತ್ತಿದ್ದಂತೆಯೇ ಬೆಳಿಗ್ಗೆ 10.30ಕ್ಕೆ ಅವರನ್ನು ಬೆಂಗಳೂರಿಗೆ ಸ್ವಾಗತ ಮಾಡಲು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸುತ್ತಿದ್ದಾರೆಂದು ಶಾಸಕ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
Previous Articleರಾಜ್ಯದಲ್ಲಿ BJPಗೆ ಬಹುಮತ- ಸಮೀಕ್ಷಾ ವರದಿ
Next Article BJP ವಿಜಯಸಂಕಲ್ಪ ಅಭಿಯಾನ