ಬೆಂಗಳೂರು – ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದು ಗೆದ್ದ ಅಭ್ಯರ್ಥಿಗಳು ವಿಜಯೋತ್ಸವ ಆಚರಿಸುವ ವೇಳೆ ಪಾಕಿಸ್ತಾನ ಪರ (Pakistan Zindabad) ಘೋಷಣೆ ಹಾಕಿದ ಆರೋಪ ಕೇಳಿ ಬಂದಿದೆ ರಾಜ್ಯಸಭೆಯ ಸದಸ್ಯರಾಗಿ ಆಯ್ಕೆಯಾದ ಕಾಂಗ್ರೆಸ್‌ನ ನಾಸಿರ್ ಹುಸೇನ್ ಅವರ ಬೆಂಬಲಿಗರ ಪೈಕಿ ಒಬ್ಬರು ಪಾಕಿಸ್ತಾನ್ ಜಿಂದಾಬಾದ್ ಎನ್ನುವ ಘೋಷಣೆ ಕೂಗಿದ್ದಾರೆ. ನಾಸಿರ್ ಹುಸೇನ್ ಅವರ ಪಕ್ಕದಲ್ಲೇ ಇದ್ದ ವ್ಯಕ್ತಿ ಪಾಕಿಸ್ತಾನ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಎಂಬ ಆರೋಪ ಕೇಳಿ ಬಂದಿದ್ದು ಇದೀಗ ಪೊಲೀಸರು ಈ ಸಂಬಂಧ ತನಿಖೆ ಆರಂಭಿಸಿದ್ದಾರೆ.
ಮತಗಳ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಚುನಾವಣಾ ಅಧಿಕಾರಿಯಾಗಿರುವ ವಿಧಾನಸಭೆಯ ಕಾರ್ಯದರ್ಶಿ ಮಹಾಲಕ್ಷ್ಮಿ ಅವರು ಗೆದ್ದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಈ ವೇಳೆ ವಿಜಯೀ ಅಭ್ಯರ್ಥಿಗಳ ಬೆಂಬಲಿಗರು ವಿಧಾನಸೌಧದಲ್ಲಿರುವ ಮತಗಟ್ಟೆ ಸಮೀಪ ಧಾವಿಸಿ ಬಂದಿದ್ದರು.
ತಮ್ಮ ಅಭ್ಯರ್ಥಿ ಗೆಲುವಿನ ಪ್ರಮಾಣ ಪತ್ರ ಪಡೆದು ಹೊರ ಬರುತ್ತಿದ್ದಂತೆ ಅವರ ಬೆಂಬಲಿಗರು ಜಯ ಘೋಷ ಮೊಳಗಿಸಿದರು ಅದರಲ್ಲೂ ಬಿಜೆಪಿ ಕಾರ್ಯಕರ್ತರು ಜೈ ಶ್ರೀ ರಾಮ್ ಮತ್ತು ಭಾರತ್ ಮಾತಾ ಕಿ ಜೈ ಎಂಬ ಘೋಷಣೆ ಮೊಳಗಿಸಿದರು ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ಭಾರತ ಮಾತಾ ಕಿ ಜೈ ಮತ್ತು ಜೈ ಭೀಮ್ ಎಂಬ ಘೋಷಣೆ ಹಾಕತೊಡಗಿದರು ಇದರಿಂದಾಗಿ ವಿಧಾನಸೌಧ ಆವರಣದಲ್ಲಿ ಕೆಲಕಾಲ ಗದ್ದಲದ ವಾತಾವರಣ ಸೃಷ್ಟಿಯಾಗಿತ್ತು.
ಇದರ ನಡುವೆ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಅವರ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು ನಾಸಿಕ್ ಹುಸೇನ್ ಪರವಾದ ಘೋಷಣೆಗಳನ್ನು ಮೊಳಗಿಸುತ್ತಿದ್ದರು ಇವರ ಮಧ್ಯದಿಂದ ಅನಾಮಿಕನೊಬ್ಬ ಜೈ ಪಾಕಿಸ್ತಾನ್ ಎಂಬ ಘೋಷಣೆ ಮೊಳಗಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ ಇಂತಹ ಘೋಷಣೆ ಮೊಳಗಿಸುತ್ತಿದ್ದವನನ್ನು ಆತನ ಪಕ್ಕದಲ್ಲಿಯೇ ಇದ್ದವರು ಆತನ ಬಾಯಿ ಮುಚ್ಚಿಸಿ ಹೊರಗೆ ಕರೆದುಕೊಂಡು ಹೋದರು ಎಂಬ ಆರೋಪ ಕೇಳಿಬಂದಿದೆ.

ಸಿಡಿಮಿಡಿ:
ತಮ್ಮ ಬೆಂಬಲಿಗ ಪಾಕಿಸ್ತಾನ ಪರ ಘೋಷಣೆ ಮೊಳಗಿಸಿದ ಕುರಿತಂತೆ ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆಗೆ ಮುಂದಾದಾಗ ಸಿಡಿಮಿಡಿ ಗೊಂಡ ಅವರು ಮಾಧ್ಯಮ ಪ್ರತಿನಿಧಿಗಳ ವಿರುದ್ಧವೇ ಹರಿಹಾಯ್ದಿದ್ದಾರೆ.
ಮತ್ತೊಂದೆಡೆ ಪ್ರತಿಕ್ರಿಯಿಸಿದ ವಿಜಯೀ ಅಭ್ಯರ್ಥಿ ಜಿ ಸಿ ಚಂದ್ರಶೇಖರ್ ಇದೊಂದು ಅಕ್ಷಮ್ಯ ಇಂತಹ ಘಟನೆ ನಡೆದಿದ್ದೆ ಆದರೆ ಅದನ್ನು ಯಾರೂ ಕ್ಷಮಿಸಲು ಸಾಧ್ಯವಿಲ್ಲ ಇಂತಹ ಘೋಷಣೆ ಮೊಳಗಿಸಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿಯ ಮುಖಂಡ ರವಿಕುಮಾರ್ ಘಟನೆಯ ಬಗ್ಗೆ ಅಘಾತ ವ್ಯಕ್ತಪಡಿಸಿದ್ದಾರೆ. ದೇಶದ್ರೋಹಿಗಳು ವಿಧಾನಸೌಧೊಳಗೆ ಪ್ರವೇಶಿಸಿದ್ದಾರೆ ಇಂತಹ ಘಟನೆಗೆ ಕಾರಣವಾದ ರಾಜ್ಯ ಸಭೆ ಸದಸ್ಯ ನಾಸೀರ್ ಹುಸೇನ್ ವಿರುದ್ಧವು ಕ್ರಮ ಕೈಗೊಳ್ಳಬೇಕು ಘೋಷಣೆ ಮೊಳಗಿಸಿದ ವ್ಯಕ್ತಿಯನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಇದನ್ನು ಬಲವಾಗಿ ಖಂಡಿಸುತ್ತಿದ್ದು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ದೂರು ನೀಡಲು ಸಿದ್ಧತೆ ನಡೆಸಿದ ಎಂದು ಹೇಳಿದರು. ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಪ್ರತಿಕ್ರಿಯಿಸಿ ತಮಗೆ ಈ ಘಟನೆಯ ಬಗ್ಗೆ ಮಾಹಿತಿ ಬಂದಿದೆ ಘೋಷಣೆ ಮೊಳಗಿಸಿರುವುದು ನಿಜವಾ ಎಂಬ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಅದರ ನಂತರವಷ್ಟೇ ನಿಖರವಾಗಿ ಹೇಳಬಹುದು ಎಂದು ತಿಳಿಸಿದರು.
ಬಿಜೆಪಿ ಧರಣಿ:
ಇದರ ಬೆನ್ನಲ್ಲೇ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಧಾನಸೌಧದ ದ್ವಾರದಲ್ಲಿ ಕೆಲಕಾಲ ಧರಣಿ ನಡೆಸಿ ಘೋಷಣೆ ಮೊಳಗಿಸಿದ ವ್ಯಕ್ತಿಯ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆ ಗ್ರಹಿಸಿದರು.
ಬಳಿಕ ಪಕ್ಷದ ಮುಖಂಡರೊಂದಿಗೆ ತೆರಳಿ ವಿಧಾನಸೌಧ ಠಾಣೆ ಪೊಲೀಸರಿಗೆ ದೂರು ಸಲ್ಲಿಸಿದರು.

