ಬೆಂಗಳೂರು: ಕರ್ನಾಟಕದಲ್ಲಿ ಅಮೂಲ್ ಹಾಲು-ಮೊಸರು ಮಾರಾಟದ ನಿರ್ಧಾರದ ವಿರುದ್ಧ ರೈತ ಸಂಘಟನೆಗಳು ಮತ್ತು ಕನ್ನಡಪರ ಸಂಘಟನೆಗಳ ಆಕ್ರೋಶ ಮುಗಿಲೆದ್ದಿದೆ ಬೆಂಗಳೂರಿನಲ್ಲಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿ ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಅಮುಲ್ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದವು.
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ,
ಅಮೂಲ್ ನ ಹಾಲು, ಮೊಸರು, ತುಪ್ಪ, ಬೆಣ್ಣೆ, ಚೀಜ್ ಇತ್ಯಾದಿ ಅ ಉತ್ಪನ್ನಗಳಾದ ಬೀದಿಗೆಸೆದು ಆಕ್ರೋಶ ವ್ಯಕ್ತಪಡಿಸಿದರು.
ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿಅಮೂಲ್ ಹಾಲು-ಮೊಸರು ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರವೇ ರಾಜ್ಯ ಉಪಾಧ್ಯಕ್ಷ ದಾ.ಪಿ.ಆಂಜನಪ್ಪ ಅಮೂಲ್ ಸಂಸ್ಥೆ ಕನ್ನಡಿಗರ ಭಾವನೆಗಳೊಂದಿಗೆ ಆಟವಾಡುತ್ತಿದೆ. ಕನ್ನಡಿಗರು ಕಟ್ಟಿದ ಹೆಮ್ಮೆಯ ಸಂಸ್ಥೆ ಕೆಎಂಎಫ್ (ನಂದಿನಿ). ಅದನ್ನು ನಾಶಪಡಿಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
ಕೇಂದ್ರ ಸರ್ಕಾರ ನಂದಿನಿಯನ್ನು ಅಮೂಲ್ ನೊಂದಿಗೆ ವಿಲೀನಗೊಳಿಸಲು ಯತ್ನಿಸುತ್ತಿದೆ. ಇಂಥದ್ದೇನಾದರೂ ನಡೆದರೆ ಕರ್ನಾಟಕದ ಜನತೆ ದಂಗೆ ಏಳುತ್ತಾರೆ ಎಂದು ಎಚ್ಚರಿಸಿದರು.
ಸರ್ವನಾಶ:
ರಾಜ್ಯದಲ್ಲಿ ಅಮುಲ್ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡುವ ಮೂಲಕ ಇಡೀ ದೇಶದಲ್ಲೇ ಹೈನುಗಾರಿಕೆ ಉತ್ಪಾದನೆ ಹಾಗೂ ಸಹಕಾರಿ ಸಂಸ್ಕರಣೆ ಅನುಪಾತ ಗರಿಷ್ಠ ಪ್ರಮಾಣದಲ್ಲಿರುವ ರಾಜ್ಯದ ರೈತಾಪಿ ಹೈನುಗಾರಿಕೆಯನ್ನು ಸರ್ವನಾಶ ಮಾಡಲು ಕುಮಾರ ನಡೆಸಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಆಪಾದಿಸಿದ ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಸಂಘದ ಅಧ್ಯಕ್ಷ ಬೈಯ್ಯಾರೆಡ್ಡಿ ಡೈರಿ ಕ್ಷೇತ್ರದ ಕಾರ್ಪೋರೇಟೀಕರಣ ಸಾಧಿಸಲು ,ಆಸ್ಟ್ರೇಲಿಯಾ, ಡೆನ್ಮಾರ್ಕ್, ನ್ಯೂಜಿಲೆಂಡ್ ಮುಂತಾದ ಯೂರೋಪಿಯನ್ ದೇಶಗಳ ಡೈರಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಅಮೂಲ್ ಹೆಸರಿನ ಮರೆಯಲ್ಲಿ ನಡೆಯುತ್ತಿರುವ ಬಹು ದೊಡ್ಡ ಹುನ್ನಾರವನ್ನು ಹಿಮ್ಮೆಟ್ಟಿಸಬೇಕೆಂದು ವಿನಂತಿಸಿದ್ದಾರೆ.
ಹಾಲಿನ ಉತ್ಪನ್ನಗಳಿಗೆ ಲಾಭದಾಯಕ ದರವನ್ನು ನಿಗದಿಪಡಿಸುವಂತೆ ,ಸಹಕಾರಿ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವಂತೆ ನಿರಂತರವಾಗಿ ರಾಜ್ಯದ ಹಾಲು ಉತ್ಪಾದಕರು ಪ್ರತಿಭಟನೆ-ಹೋರಾಟಗಳನ್ನು ನಡೆಸಿ ಆಗ್ರಹಿಸಿದ್ದರೂ ನಿರ್ಲಕ್ಷಿಸಿದ್ದ ಬಿಜೆಪಿ ನೇತೃತ್ವದ ಸರ್ಕಾರಗಳು ಕೆಎಂಎಫ್ ನ 16 ಜಿಲ್ಲಾ ಹಾಲು ಒಕ್ಕೂಟಗಳ ಮಾರುಕಟ್ಟೆ ಕಸಿಯಲು ಟೊಂಕ ಕಟ್ಟಿ ನಿಂತಿರುವುದು ಹಾಗೂ ಚುನಾವಣಾ ಸಂದರ್ಭದಲ್ಲೂ ನಿರ್ಲಜ್ಜವಾಗಿ ಸಮರ್ಥಿಸುತ್ತಿರುವುದು ಅತ್ಯಂತ ನಾಚೀಕೆಗೇಡು
ಎಂದು ಟೀಕಿಸಿದ್ದಾರೆ.