ಉಚಿತ ವಿದ್ಯಾರ್ಥಿ ನಿಲಯದಲ್ಲಿ ಕಲಿಯುತ್ತಿದ್ದ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಕೂಡಲೇ ಬಂಧಿಸಬೇಕು ಎಂದು ರಾಜ್ಯದಬವಿವಿಧ ಮಹಿಳಾ ಸಂಘಟನೆಗಳು ಒತ್ತಾಯಿಸಿವೆ.
ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್.ವಿಮಲಾ ನೇತೃತ್ವದಲ್ಲಿ ಸ್ತ್ರೀ ಜಾಗೃತಿ ಸಮಿತಿ, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘ, ಜನವಾದಿ ಮಹಿಳಾ ಸಂಘಟನೆ, ಕರ್ನಾಟಕ ಲೈಂಗಿಕ ಕಾರ್ಯಕರ್ತೆಯರ ಸಂಘ, ಕರ್ನಾಟಕ ಜನ ಶಕ್ತಿ ಸೇರಿದಂತೆ ಹಲವು ಮಹಿಳಾ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ.
ಈ ಸಂಘಟನೆಗಳ ಮುಖಂಡರು ನಿಯೋಗದಲ್ಲಿ
ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
‘ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಗಂಭೀರ ಆರೋಪ ಇದಾಗಿದೆ,ಶರಣರು ಇರುವ ಸ್ಥಳ ಗೊತ್ತಿದ್ದರೂ ಪೊಲೀಸರು ಅವರನ್ನು ಇಲ್ಲಿಯವರೆಗೆ ಬಂಧಿಸದಿರುವುದು ಅನ್ಯಾಯ. ಮಕ್ಕಳು ಬಹಳ ಕಾಲ ಆರೋಪಿಗಳ ಅಧೀನದಲ್ಲಿದ್ದು, ಬೆದರಿಕೆಗೆ ಒಳಗಾಗುವ ಸ್ಥಿತಿ ಇದೆ. ಆರೋಪಿ ಪ್ರಭಾವ ಬಳಸಿ ಸಾಕ್ಷ್ಯಗಳನ್ನು ನಾಶ ಮಾಡುವ ಸಾಧ್ಯತೆಯೂ ಇದೆ. ಈ ಎಲ್ಲಾ ಕಾರಣಗಳಿಂದ ಶರಣರನ್ನು ಕೂಡಲೇ ಬಂಧಿಸಬೇಕು’ ಎಂದು ಸಂಘಟನೆಗಳು ಒತ್ತಾಯಿಸಿವೆ.
ಸಂತ್ರಸ್ತರಲ್ಲಿ ಒಬ್ಬರು ಪರಿಶಿಷ್ಟ ಸಮುಯದಾಯಕ್ಕೆ ಸೇರಿದವರು ಎಂದು ವರದಿಯಾಗಿದೆ. ಹೀಗಾಗಿ ಆರೋಪಿ ಶರಣರ ವಿರುದ್ಧ ಕೂಡಲೇ ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲೂ ಕ್ರಮ ಜರುಗಿಸಬೇಕು. ಮಕ್ಕಳಿಗೆ ರಕ್ಷಣೆ ಮತ್ತು ಪುನರ್ವಸತಿ ಕಲ್ಪಿಸಬೇಕು’ ಎಂದು ಮನವಿ ಮಾಡಿವೆ.
Previous Articleಮಾಜಿ ಸಚಿವ ಲಕ್ಷ್ಮಣ ಸವದಿ ಕಾರು ಅಪಘಾತ..
Next Article ನೆಮ್ಮದಿಯ ನಾಳೆಗೆ ಬಿಜೆಪಿ ಬೇಡವಂತೆ