ರಾಂಚಿ(ಜಾರ್ಖಂಡ್): ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ಅವಹೇಳಕಾರಿ ಹೇಳಿಕೆಯಿಂದ ಉಂಟಾದ ವಿವಾದವು ದೇಶದ ಹಲವೆಡೆ ಹಿಂಸಾಚಾರದ ರೂಪ ಪಡೆದುಕೊಂಡಿದೆ.
ವಿವಿಧೆಡೆ ಕಲ್ಲುತೂರಾಟ ಸಾರ್ವಜನಿಕ ಆಸ್ತಿಗಳಿಗೆ ಹಾನಿ, ಪೊಲೀಸರೊಂದಿಗೆ ಘರ್ಷಣೆಗಳು ನಡೆದ ಬಗ್ಗೆ ವರದಿಯಾಗಿದೆ.
ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹತ್ತು ಜನರು ಗಾಯಗೊಂಡಿದ್ದಾರೆ.
ಪ್ರತಿಭಟನೆ ವೇಳೆ ನಡೆದ ಗುಂಡೇಟಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ರಾಂಚಿ ನಗರ ಪೊಲೀಸ್ ಮುಖ್ಯಸ್ಥ ಅಂಶುಮನ್ ಕುಮಾರ್ ಖಚಿತಪಡಿಸಿದ್ದಾರೆ. ಘಟನೆಯಲ್ಲಿ ಎಂಟು ಗಲಭೆಕೋರರು ಮತ್ತು ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಶುಕ್ರವಾರ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿ ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಜಾರ್ಖಂಡ್ ರಾಜಧಾನಿ ರಾಂಚಿಯ ಹಲವಾರು ಭಾಗಗಳಲ್ಲಿ ಕರ್ಫ್ಯೂ ವಿಧಿಸಲಾಗಿತ್ತು. ಪ್ರವಾದಿ ಮಹಮ್ಮದ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿವಾದ ಎಬ್ಬಿಸಿದ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ವೇಳೆ ಕಲ್ಲು ತೂರಾಟ ಆರಂಭಿಸಿದ ಗುಂಪನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಲಾಠಿ ಚಾರ್ಜ್ ನಡೆಸಿದರು.
ರಾಂಚಿಯ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ದೊಡ್ಡ ಜನಸಮೂಹ ನೂಪುರ್ ಶರ್ಮಾ ಮತ್ತು ದೆಹಲಿ ಬಿಜೆಪಿಯ ಮಾಧ್ಯಮ ಘಟಕದ ಮಾಜಿ ಮುಖ್ಯಸ್ಥ ನವೀನ್ ಜಿಂದಾಲ್ ವಿರುದ್ಧ ಘೋಷಣೆಗಳನ್ನು ಕೂಗಿದರು.
ಹಿಂಸಾಚಾರಕ್ಕೆ ತಿರುಗಿದ ನೂಪುರ್ ಶರ್ಮಾ ವಿರುದ್ಧದ ಪ್ರತಿಭಟನೆ: ಗುಂಡೇಟಿನಿಂದ ಇಬ್ಬರ ಸಾವು
Previous Articleಬಿಸಿಯೂಟ ಸೇವನೆ: 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
Next Article ಸುಲಿಗೆಕೋರರ ಬಂಧನ..