ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿಗಳು ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದು ಇಲ್ಲಿಯೂ ಹಿನ್ನಡೆ ಅನುಭವಿಸಿದ್ದಾರೆ.
ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ ಸಂದೇಶ್ ನೇತೃತ್ವದ ಪೀಠ, ಶಶಿಧರ್, ಸೂರ್ಯನಾರಾಯಣ್, ನವೀನ್ ಪ್ರಸಾದ್, ರಘುವೀರ್ ಸೇರಿದಂತೆ ಐವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.