ಬೆಂಗಳೂರು, ನ.22- ಅಕ್ರಮಗಳ ಕಾರಣಕ್ಕೆ ರದ್ದುಗೊಂಡಿರುವ ಪೊಲೀಸ್ ಇನ್ಸ್ ಪೆಕ್ಟರ್ ಗಳ ನೇಮಕಾತಿಗೆ ಕೋರ್ಟ್ ಆದೇಶದಂತೆ ಮರು ಪರೀಕ್ಷೆ ನಡೆಸಲಾಗುತ್ತಿದೆ ಇದೇ ಡಿಸೆಂಬರ್ 23 ರಂದು ಮರು ಪರೀಕ್ಷೆ ನಡೆಯುತ್ತಿದ್ದು ಬೆಂಗಳೂರಿನಲ್ಲಿ ಮಾತ್ರ ಪರೀಕ್ಷಾ ಕೇಂದ್ರಗಳು ಇರಲಿವೆ.
ಈ ಕುರಿತು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದು,ಈ ಹಿಂದೆ 545 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ನಡೆಸಿದ್ದ ಲಿಖಿತ ಪರೀಕ್ಷೆಗೆ ಅರ್ಹತೆ ಪಡೆದವರು ಈ ಮರು ಲಿಖಿತ ಪರೀಕ್ಷೆಗೆ ಅರ್ಹರು ಎಂದು ತಿಳಿಸಿದ್ದಾರೆ.
ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಸ್ವತಂತ್ರ ಸಂಸ್ಥೆಯಿಂದ ಹೊಸದಾಗಿ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ನವೆಂಬರ್ 10ರಂದು ನೀಡಿದ್ದ ತೀರ್ಪಿನ ಅನ್ವಯ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಈ ಮೊದಲು 2021ರ ಜನವರಿ 21ರಂದು 545 ಪಿಎಸ್‍ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಟಿಸಿತ್ತು. ಅದೇ ವರ್ಷದ ಅಕ್ಟೋಬರ್ 3 ರಂದು ಲಿಖಿತ ಪರೀಕ್ಷೆ ನಡೆದಿತ್ತು.ಸುಮಾರು 54 ಸಾವಿರ ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಅರ್ಹತೆ ಗಿಟ್ಟಿಸಿದ್ದರು.
2022ರ ಜ. 19ರಂದು ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಕಂಡುಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಸಿಐಡಿ ನೀಡಿದ್ದ ಮಧ್ಯಂತರ ವರದಿ ಆಧರಿಸಿ ಸರ್ಕಾರವು, 2021 ಅ. 3ರಂದು ನಡೆಸಿದ್ದ ಲಿಖಿತ ಪರೀಕ್ಷೆಯನ್ನು ರದ್ದುಪಡಿಸಿ, ಹೊಸತಾಗಿ ಪರೀಕ್ಷೆ ನಡೆಸಲು 2022 ಏಪ್ರಿಲ್ 29ರಂದು ಆದೇಶ ಹೊರಡಿಸಿತ್ತು.ಅದನ್ನು ಕೆಲವು ಅಭ್ಯರ್ಥಿಗಳು ಹೈಕೋರ್ಟ್‍ನಲ್ಲಿ ಪ್ರಶ್ನಿಸಿದ್ದರು.
ಪ್ರಕರಣ ಕುರಿತು ಸುದೀರ್ಘ ವಿಚಾರಣೆ ನಡೆದ ಬಳಿಕ ಹೈಕೋರ್ಟ್ ಇತ್ತೀಚೆಗಷ್ಟೇ ತೀರ್ಪು ಪ್ರಕಟಿಸಿದ್ದು, ಮರು ಪರೀಕ್ಷೆಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಮರು ಪರೀಕ್ಷೆಗೆ ತ್ವರಿತ ಕ್ರಮಗಳನ್ನು ಕೈಗೊಂಡಿದೆ.
ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸ್ವತಂತ್ರ ಸಂಸ್ಥೆಯಿಂದ ಮರು ಪರೀಕ್ಷೆ ನಡೆಸಬೇಕು ಎಂಬ ಕಾರಣಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮರು ಪರೀಕ್ಷೆಯನ್ನು ಆಯೋಜನೆ ಮಾಡಲಾಗುತ್ತಿದೆ.
4 ಪ್ರತಿಕ್ರಿಯೆಗಳು
Мультимедийный интегратор Мультимедийный интегратор .
карниз с электроприводом для штор купить https://provorota.su .
гадание на индийском пасьянсе indiyskiy-pasyans-online.ru .
вывод из запоя ростов на дону вывод из запоя ростов на дону .