ಬೆಂಗಳೂರು,ಏ.4- ಪ್ರಬಲ ಹಿಂದುತ್ವ ಪ್ರತಿಪಾದನೆಯ ಮೂಲಕ ಇತ್ತೀಚಿನ ದಿನಗಳಲ್ಲಿ ಗಮನ ಸೆಳೆಯುತ್ತಿರುವ ಸಾಮಾಜಿಕ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneet Kerehalli) ಇದೀಗ ಕೊಲೆ ಆರೋಪವೊಂದರಲ್ಲಿ ಸಿಲುಕಿದ್ದು,ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕನಕಪುರದ ಏಸುಬೆಟ್ಟ ವಿವಾದ,ಟಿಪ್ಪು ಸುಲ್ತಾನ್, ಸಲಾಂ ಆರತಿ,ಹಿಜಾಬ್, ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳ ನಿಷೇಧ ಸೇರಿದಂತೆ ಹಲವಾರು ವಿವಾದಾಸ್ಪದ ವಿಷಯಗಳನ್ನು ಪ್ರತಿಪಾದಿಸುವ ಮೂಲಕ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದರು.
ಇದೀಗ ಜಾನುವಾರು ಸಾಗಿಸುತ್ತಿದ್ದ ವಾಹನದ ಸಹಾಯಕ ಚಾಲಕ ಇದ್ರೀಸ್ ಪಾಷಾ ನನ್ನು ಹತ್ಯೆ ಮಾಡಿರುವ ಆರೋಪದಲ್ಲಿ ಸಿಲುಕಿದ್ದಾರೆ.
ಈ ಘಟನೆ ನಂತರ ನಾಪತ್ತೆಯಾಗಿದ್ದಾರೆಂದು ಹೇಳಲಾದ ಪುನಿತ್ ಕೆರೆಹಳ್ಳಿಯನ್ನು ಬಂಧಿಸಲು ರಾಮನಗರ ಜಿಲ್ಲಾ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದಾರೆ.
ಇಲ್ಲಿಯವರೆಗೆ ಪ್ರಕರಣದ ಸಂಬಂಧಿಸಿದಂತೆ ಯಾವುದೇ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಫೋರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ತಂಡ ಮರಣೋತ್ತರ ಪರೀಕ್ಷೆಯನ್ನು ನಡೆಸಿದೆ ಮತ್ತು (ಪಾಶಾ) ಸಾವಿಗೆ ನಿಖರವಾದ ಕಾರಣ ತಿಳಿಯಲು ವರದಿಗಾಗಿ ಕಾಯುತ್ತಿದ್ದೇವೆ. ಮರಣೋತ್ತರ ಪರೀಕ್ಷೆಯ ವರದಿಯಿಂದ ಸಾವಿಗೆ ನಿಖರವಾದ ಕಾರಣ ತಿಳಿದುಬರಲಿದೆ ಎಂದು ರಾಮನಗರ ಜಿಲ್ಲಾ ಪೊಲೀಸ್ ಕಳೆದ ಏ.1ರ ಮುಂಜಾನೆ ಕನಕಪುರದ ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಾಲಕ ಇದ್ರೀಸ್ ಪಾಷಾ (39)ನ ಶಂಕಾಸ್ಪದ ಕೊಲೆಯಾಗಿದ್ದು ಪ್ರಕರಣದ ಪತ್ತೆಗೆ 4 ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಕೇಂದ್ರ ವಲಯದ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ.
ಸಾತನೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಒಂದು ತಂಡ ರಚನೆಯಾಗಿದ್ದರೆ ರಾಮನಗರ ಉಪವಿಭಾಗದ ಡಿವೈಎಸ್ಪಿ ಮತ್ತೊಂದು ತಂಡದ ನೇತೃತ್ವ ವಹಿಸಿದ್ದಾರೆ. ಉಪ ವಿಭಾಗದ ಪೊಲೀಸರು ನೇತೃತ್ವದಲ್ಲಿ ಮತ್ತೇರಡು ತಂಡ ರಚಿಸಲಾಗಿದೆ. ಸಾತನೂರು ಪೊಲೀಸ್ ಠಾಣೆಯಿಂದ ಸ್ವಲ್ಪ ದೂರದಲ್ಲಿ ಪಾಷಾ ಶವ ಪತ್ತೆಯಾದ ನಂತರ ಕೆರೆಹಳ್ಳಿ ಸೇರಿ ನಾಲ್ವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.
2 ಲಕ್ಷಕ್ಕೆ ಬೇಡಿಕೆ:
ಇರ್ಫಾನ್ (37) ಮತ್ತು ಚಾಲಕ ಸೈಯದ್ ಜಹೀರ್ (40) ಅವರೊಂದಿಗೆ ಇದ್ರೀಸ್ ಪಾಷಾ ಮಾ.31 ಮಧ್ಯರಾತ್ರಿ 12.30 ರ ಸುಮಾರಿಗೆ ಸಂತೆಮಾಳ ವೃತ್ತದ ಬಳಿ 15 ಜಾನುವಾರುಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದಾಗ ಕೆರೆಹಳ್ಳಿ ಮತ್ತು ಅವರ ಸಂಗಡಿಗರು ವಾಹನ ಅಡ್ಡಗಟ್ಟಿದ್ದಾರೆ.
ಈ ವೇಳೆ ಅಪಾಯವನ್ನು ಅರಿತ ಪಾಷಾ ಮತ್ತು ಇರ್ಪಾನ್ ಅಲ್ಲಿಂದ ಪರಾರಿಯಾಗಿದ್ದು, ಜಹೀರ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.ಈ ವೇಳೆ ತಾವು ಈ ಜಾನುವಾರುಗಳನ್ನು ಖರೀದಿಸಿ ತಮಿಳುನಾಡಿನ ಕೃಷ್ಣಗಿರಿಗೆ ಮಾರಾಟ ಮಾಡಲು ಕೊಂಡೊಯ್ಯಲಾಗುತ್ತಿದ್ದೇವೆ ಎಂದು ಜಹೀರ್ ತನ್ನನ್ನು ಥಳಿಸಿದ ಪುನೀತ್ ಕೆರೆಹಳ್ಳಿ ಮತ್ತು ಇತರ ನಾಲ್ವರಿಗೆ ವಿವರಿಸಲು ಪ್ರಯತ್ನಿಸಿದರೂ, ಕೇಳದೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ 2 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಕೊಡದಿದ್ದರೆ ಮುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಈ ಘಟನೆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ವಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಎರಡೂ ಕಡೆಯವರನ್ನು ಠಾಣೆಗೆ ಕರೆದೊಯ್ದಿದ್ದು, ಅಕ್ರಮ ದನ ಸಾಗಾಟ ಆರೋಪದ ಪ್ರಕರಣ ದಾಖಲಿಸಿದರು ಜೊತೆಗೆ ಹಲ್ಲೆ ಮಾಡಿದ ಆರೋಪದಡಿ ಕೆರೆಹ ದೂರು ಕೆರೆಹಳ್ಳಿ ವಿರುದ್ಧವೂ ಪ್ರತಿದೂರು ದಾಖಲಾಗಿತ್ತು.
ಆದರೆ, ಮರುದಿನ ಬೆಳಿಗ್ಗೆ, ಪಾಷಾ ಅವರ ಮೃತದೇಹ ಪತ್ತೆಯಾಗಿತ್ತು.ಪೊಲೀಸ್ ಠಾಣೆಯಿಂದ ಕೆಲವು ನೂರು ಮೀಟರ್ ದೂರದಲ್ಲಿ ಪತ್ತೆಯಾದ ದೇಹದ ಮೇಲೆ ಚಿತ್ರಹಿಂಸೆಯ ಗುರುತುಗಳಿದ್ದವು.
ಈ ಹಲ್ಲೆ ಯಾರು ಮಾಡಿದ್ದಾರೆ ಎಂಬ ಬಗ್ಗೆ ಇನ್ನೂ ಖಚಿತ ಮಾಹಿತಿ ಸಿಕ್ಕಿಲ್ಲ.ದನಗಳನ್ನು ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿದ ಕೆರೆಹಳ್ಳಿ ಮತ್ತು ಆತನ ಸಹಚರರು ಪಾಷಾ ಅವರನ್ನು ಹಿಂಬಾಲಿಸಿದ್ದಾರೆಯೇ ಎಂಬುದನ್ನು ತನಿಖೆ ಮಾಡಲಾಗುತ್ತಿದೆ.
ಈ ನಡುವೆ ಹಂತಕರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಪಾಷಾ ಕುಟುಂಬಸ್ಥರು ಠಾಣೆ ಎದುರು ಪ್ರತಿಭಟನೆ ನಡೆಸಿದ್ದು, ಪುನೀತ್ ಕೆರೆಹಳ್ಳಿ ಮತ್ತವರ ಸಹಚರರು ಈ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಜೊತೆ ಮಾತನಾಡಿದ್ದು ಜಿಲ್ಲೆಯಲ್ಲಿ ಕೋಮು ದಳ್ಳುರಿ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದ್ದು ಅದಕ್ಕೆ ಅವಕಾಶ ಕೊಡದಂತೆ ಕ್ರಮ ಕೈಗೊಳ್ಳಬೇಕೆಂದು ಸಲಹೆ ಮಾಡಿದ್ದಾರೆ ಅಲ್ಲದೆ ಪುನೀತ್ ಕೆರೆಹಳ್ಳಿ ಮತ್ತು ಅವರ ಸಹಚರರು ರಾಮನಗರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳುಗೆಡವಲು ಪ್ರಯತ್ನ ನಡೆಸಿದ್ದು ಅದನ್ನು ಹತ್ತಿಕ್ಕುವಂತೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ
2 ಪ್ರತಿಕ್ರಿಯೆಗಳು
Транснациональные перевозки играет ключевую роль в обеспечении стабильных поставок в страны СНГ. Это сложный процесс, включающий доставку товаров, разрешительные процедуры и оптимизацию логистики. Точное управление и работа с проверенными компаниями минимизируют риски и гарантируют своевременную доставку.
Одной из центральных задач в международных поставках является выбор вида транспорта – https://mezhdunarodnaya-logistika-ved.ru/ . Для импорта в страну используются альтернативные подходы: морские перевозки подходят для больших объемов, воздушные перевозки — груза высокой стоимости, а автомобильные и железнодорожные — оптимальны для гибкости. Территориальные особенности нередко требует мультимодальные подходы.
Не менее важным этапом является работа с таможней. Грамотная обработка таможенным требованиям, соблюдение законодательства и осведомленность о рисках минимизируют проблемы. Привлечение специалистов учитывает все нюансы, гарантирует эффективность.
Инновации в логистике активно изменяют работу с импортом. Технологии мониторинга, управленческие платформы и инструменты анализа способствуют эффективность поставок. Предприятия с этим реагировать на вызовы, учитывать новые условия и сохранять стабильность.
Транснациональные поставки зависит от грамотного управления, высокой компетенции и налаженных отношений. Это ключевой инструмент, позволяющий фирмам страны развивать свои процессы и работать на международном уровне.
hash delivery in prague https://sale-weed-prague.com