ಬೆಂಗಳೂರು,ಜೂ.16- ಕಾಂಗ್ರೆಸ್ ರಾಜಭವನ ಚಲೋ ವೇಳೆ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಮುಂಭಾಗ ಕಾರು ಹಾಗು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರಿನ ಮುಂದಿನ ಚಕ್ರಕ್ಕೆ ಹಾನಿಯಾಗಿದೆ. ತಕ್ಷಣ ಸಂಚಾರ ಪೊಲೀಸರು ಧಾವಿಸಿ ಕಾರನ್ನು ಪಕ್ಕಕ್ಕೆ ಸರಿಸಿ, ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ರಾಜಭವನ ಚಲೋ ಹಿನ್ನೆಲೆಯಲ್ಲಿ ಕ್ವಿನ್ಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಟ ನಡೆಸಿದರು.
ಚಲೋ ಕ್ವೀನ್ಸ್ ರಸ್ತೆ- ಇಂಡಿಯನ್ ಎಕ್ಸ್ ಪ್ರೆಸ್, ಜಿಪಿಓ ಸಿಗ್ನಲ್, ಇಂಡಿಯನ್ ಎಕ್ಸ್ ಪ್ರೆಸ್, ವಸಂತನಗರ, ಶಿವಾಜಿನಗರ, ಕೋಲ್ಸ್‌ಪಾರ್ಕ್, ನಂದಿದುರ್ಗ ರಸ್ತೆ, ವಿಧಾನಸೌಧ, ಕೆ ಆರ್ ಸರ್ಕಲ್ ಸೇರಿದಂತೆ ನಗರದ ಹೃದಯ ಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿತ್ತು.
ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜಭವನದ ಎದುರು ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿತ್ತು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸ್ಥಳದಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಪ್ರತಿಭಟನೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು
Previous ArticleFacebook ನಿಂದ ಸಿಕ್ಕಿಬಿದ್ದ ಕಳ್ಳರು.. !!
Next Article ಉಪಾಧ್ಯಕ್ಷನಾಗೋಕೆ ಹೊರಟ ಚಿಕ್ಕಣ್ಣ!