Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಲಬುರಗಿ ಗೆಲ್ಲಬೇಕು ಓಕೆ, ಆದರೆ ರಾಧಾಕೃಷ್ಣ ಯಾಕೆ ? | Kalaburgi
    Viral

    ಕಲಬುರಗಿ ಗೆಲ್ಲಬೇಕು ಓಕೆ, ಆದರೆ ರಾಧಾಕೃಷ್ಣ ಯಾಕೆ ? | Kalaburgi

    vartha chakraBy vartha chakraಜನವರಿ 16, 2024Updated:ಜನವರಿ 16, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಜ,16: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ನಿಧಾನವಾಗಿ ತೀವ್ರಗೊಳ್ಳುತ್ತಾ ಸಾಗುತ್ತಿದೆ .ಈ ನಿಟ್ಟಿನಲ್ಲಿ ಕಾಂಗ್ರೆಸ್, ಕನಿಷ್ಠ 20 ಸಂಸದರನ್ನು ಆಯ್ಕೆ ಮಾಡಿ ಕಳುಹಿಸಬೇಕೆಂದು ರಣತಂತ್ರ ರೂಪಿಸುತ್ತಿದೆ.

    ರಾಜ್ಯದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ಅವರು ತವರು ರಾಜ್ಯ ಈ ಬಾರಿ ಅತ್ಯಧಿಕ ಸಂಖ್ಯೆಯಲ್ಲಿ ಕಾಂಗ್ರೆಸ್ ಸಂಸದರು ಹೊಂದಿರಬೇಕು ಎಂಬ ನಿಟ್ಟಿನಲ್ಲಿ ಕಾರ್ಯತಂತ್ರ ನಡೆದಿದೆ ಹೀಗಾಗಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಆಳಿತು ತೂಗಿ ಲೆಕ್ಕಾಚಾರ ಹಾಕಲಾಗುತ್ತಿದೆ.
    ಕಲಬುರಗಿ ಜಿಲ್ಲೆಯ ಅತ್ಯಂತ ಪ್ರಭಾವಿ ರಾಜಕಾರಣಿಯಾಗಿರುವ ಮಲ್ಲಿಕಾರ್ಜುನ ಖರ್ಗೆ ಸೋಲಿಲ್ಲದ ಸರದಾರ ಎಂಬ ಖ್ಯಾತಿ ಪಡೆದಿದ್ದರು. ಆದರೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎದುರು ಸೋಲು ಕಂಡರು.
    ನಂತರದಲ್ಲಿ ಹೈಕಮಾಂಡ್ ಅವರನ್ನು ರಾಜ್ಯಸಭೆಯ ಸದಸ್ಯರನ್ನಾಗಿ ನೇಮಿಸಿತು.

    ಈ ಬಾರಿ ಅವರು ಮತ್ತೆ ಕಲಬುರ್ಗಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಮೂಲಕ ಸೋಲಿನ ಅಪವಾದದಿಂದ ಹೊರ ಬರಲಿದ್ದಾರೆ ಎಂದು ಹೇಳಲಾಗಿತ್ತು
    ಆದರೆ, ಹೈಕಮಾಂಡ್ ಅವರ ಸ್ಪರ್ಧೆಗೆ ಸಮ್ಮತಿಸಿಲ್ಲ ಎನ್ನಲಾಗಿದೆ ಎಐಸಿಸಿ‌ ಅಧ್ಯಕ್ಷರಾಗಿರುವ ಅವರು ದೇಶಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಬೇಕಾಗಿದೆ ಈ ಹಿನ್ನೆಲೆಯಲ್ಲಿ ಅವರು ಕಲಬುರ್ಗಿಯಿಂದ ಕಣಕ್ಕಿಳಿದಿದ್ದೆ ಆದಲ್ಲಿ ಹೆಚ್ಚಿನ ಸಮಯವನ್ನು ತಮ್ಮ ಕ್ಷೇತ್ರದಲ್ಲೇ ವಿನಿಯೋಗಿಸಬೇಕು ಹೀಗಾಗಿ ಖರ್ಗೆ ಅವರು ಚುನಾವಣೆ ಕಣಕ್ಕೆ ಇಳಿಯುವುದು ಬೇಡ ಎಂಬ ನಿರ್ಧಾರಕ್ಕೆ ಹೈಕಮಾಂಡ್ ಬಂದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಸದ್ಯ ಖರ್ಗೆ‌ ಅವರ ರಾಜ್ಯಸಭಾ ಸದಸ್ಯತ್ವದ ಅವಧಿ 2026 ರವರೆಗೆ ಇದೆ.ಈ ಹಿನ್ನೆಲೆಯಲ್ಲಿ ಅವರು ರಾಜ್ಯ ಸಭೆಯ ಸದಸ್ಯರಾಗಿ ಮುಂದುವರೆಯುವುದು ಸೂಕ್ತ ಎಂಬ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದೆ.
    ಈ ಹಿನ್ನೆಲೆಯಲ್ಲಿ ಕಲಬುರಗಿ ಕ್ಷೇತ್ರದಲ್ಲಿ ಸೂಕ್ತ ಅಭ್ಯರ್ಥಿಗಾಗಿ ಕಾಂಗ್ರೆಸ್ ಹುಡುಕಾಟ ನಡೆಸಿದೆ. ಇದರ ನಡುವೆ ಖರ್ಗೆ ಅವರು ಅಥವಾ ಅವರ ಕುಟುಂಬ ಸದಸ್ಯರು ಈ ಕ್ಷೇತ್ರದಿಂದ ಕಣಕ್ಕಿಳಿಯುವುದು ಸೂಕ್ತ ಎಂಬ ಮಾತುಗಳು ಕೇಳಿಬರುತ್ತಿವೆ.
    ಇಂತಹ ‌ಅಭಿಪ್ರಾಯ ಕೇಳುತ್ತಿರುವ ನಡುವೆ ಖರ್ಗೆ ಅವರ ಅಳಿಯ ರಾಧಾಕೃಷ್ಣ ಅವರನ್ನು ಕಣಕ್ಕಿಳಿಸಲು ಕುಟುಂಬ ಸದಸ್ಯರು ಉತ್ಸುಕರಾಗಿದ್ದಾರೆ. ರಾಧಾಕೃಷ್ಣ ಅವರೂ ಕೂಡಾ ಈ ಕುರಿತಂತೆ ಕಾರ್ಯಕರ್ತರ ಸಭೆ ನಡೆಸುತ್ತಿದ್ದು ಕ್ಷೇತ್ರದ ಹಲವೆಡೆ ಪ್ರವಾಸ ಮಾಡುತ್ತಿದ್ದಾರೆ ಆದರೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ಪ್ರಮುಖ ನಾಯಕರು ರಾಧಾಕೃಷ್ಣ ಅವರ ಸ್ಪರ್ಧೆಗೆ ಒಲವು ಹೊಂದಿಲ್ಲ ಅವರು ಕಣಕ್ಕಿಳಿದಿದ್ದೆ ಆದಲ್ಲಿ ಮತದಾರರ ಮೇಲೆ ಬೇರೆ ರೀತಿಯ ಪರಿಣಾಮ ಉಂಟಾಗಲಿದೆ ಹೀಗಾಗಿ ಅದು ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ಹೇಳತೊಡಗಿದ್ದಾರೆ. ಅಲ್ಲದೆ ರಾಧಾಕೃಷ್ಣ ಅವರನ್ನು ಕಣಕ್ಕಿಳಿಸುವ ಕುರಿತಂತೆ ಈಗಾಗಲೇ ಎರಡು ಬಾರಿ ಆಂತರಿಕ ಸಮೀಕ್ಷೆ ನಡೆಸಲಾಗಿದೆ.ಈ ಎರಡೂ ವರದಿಗಳು ಕೂಡ ಅವರಿಗೆ ಪೂರಕವಾದ ಮಾಹಿತಿಯನ್ನು ನೀಡಿಲ್ಲ ಹೀಗಾಗಿ ಸ್ಥಳೀಯ ಕಾಂಗ್ರೆಸ್ ನಾಯಕರು ತಲೆ ಕೆಡಿಸಿಕೊಂಡಿದ್ದಾರೆ.

    ಒಂದು ವೇಳೆ ಕಲಬುರ್ಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲು ಕಂಡರೆ ಅದು ಖರ್ಗೆ ಅವರ ಹಿನ್ನಡೆ ಎಂದು ಭಾವಿಸಬೇಕಾಗುತ್ತದೆ ಹೀಗಾಗಿ ಇದೊಂದು ಪ್ರತಿಷ್ಠೆಯ ವಿಷಯವಾಗಿ ಪರಿಣಮಿಸಿದೆ.ಹೀಗಾಗಿ ಖರ್ಗೆ ಅವರನ್ನೇ ಕಣಕ್ಕಿಳಿಸಲು‌ ಸ್ಥಳೀಯ ನಾಯಕರು ಒತ್ತಾಯಿಸುತ್ತಿದ್ದಾರೆ ಆದರೆ ಖರ್ಗೆ ಅವರು ಇನ್ನೂ ಈ ಬಗ್ಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.
    ಇನ್ನೊಂದು ಮೂಲಗಳ ಪ್ರಕಾರ ಸ್ವತಃ ಖರ್ಗೆ ಅವರೇ ರಾಧಾಕೃಷ್ಣ ಅವರ ಸ್ಪರ್ಧೆಗೆ ಒಲವು ಹೊಂದಿದ್ದಾರೆ ಎನ್ನಲಾಗಿದೆ. ಆದರೆ ಅದು ಅನುಕೂಲಕರ ಅಲ್ಲ ಎಂಬ ವರದಿಗಳು ಅವರನ್ನು ತಲುಪಿವೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಿಂದ ಯಾರನ್ನು ಕಣಕ್ಕಿಳಿಸಬೇಕು ಎಂಬ ಚಿಂತೆಯಲ್ಲಿ ಬಿದ್ದಿದ್ದಾರೆ.

    Verbattle
    Verbattle
    Verbattle
    #kalaburgi Karnataka News Politics ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous ArticleKYC ಪೂರ್ಣಗೊಳಿಸದ FASTag ನಿಷ್ಕ್ರಿಯ ಆಗುತ್ತೆ
    Next Article ಸೀನ್ ಅಫ್ ಕ್ರೈಂ ಅಧಿಕಾರಿಗಳ ಕೆಲಸ ಗೊತ್ತಾ | Scene Of Crime Officer
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • Tracymix ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • LinwoodGah ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.