ಕಾಂಗ್ರೆಸ್ ಯುವ ನಾಯಕ ಸಂಸದ ರಾಹುಲ್ ಗಾಂಧಿ ಅವರಿಗೆ ಬಂಧನದ ಭೀತಿ ಉಂಟಾಗಿದೆ. ಇಂದು ಸಂಜೆಯೊಳಗೆ ಅವರನ್ನು ಕೇಂದ್ರೀಯ ತನಿಖಾ ತಂಡ ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂಬ ಸುದ್ದಿಗಳು ದಟ್ಟವಾಗಿವೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಷೇರು ಖರೀದಿಯಲ್ಲಿ ಅಕ್ರಮ ಹಣಕಾಸು ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕಳೆದ ಸೋಮವಾರದಿಂದ ವಿಚಾರಣೆಗೆ ಒಳಪಡಿಸಿರುವ ಜಾರಿ ನಿರ್ದೇಶನಾಲಯ ಹೆಚ್ಚಿನ ವಿಚಾರಣೆಗಾಗಿ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಸೋಮವಾರದಿಂದ ಸತತ ವಿಚಾರಣೆ ನಡೆಸುತ್ತಿರುವ ಇ.ಡಿ.ಅಧಿಕಾರಿಗಳು ಪ್ರತಿನಿತ್ಯ ಬೆಳಿಗ್ಗೆ ಹಿಂದಿನ ದಿನ ವಿಚಾರಣೆ ವೇಳೆ ರಾಹುಲ್ ನೀಡಿದ್ದ ಹೇಳಿಕೆಯ ಲಿಖಿತ ಪ್ರತಿಯನ್ನು ನೀಡುತ್ತಿದ್ದಾರೆ. ಅವರು ಅದನ್ನು ಕೂಲಂಕಷವಾಗಿ ಪರಿಶೀಲಿಸಿ, ಸಹಿ ಮಾಡುತ್ತಿದ್ದಾರೆ.
ಈ ವೇಳೆ ಪ್ರತಿನಿತ್ಯದ ವಿಚಾರಣೆಯಲ್ಲಿ ಕೆಲವು ಅಂಶಗಳ ಬಗ್ಗೆ ಗೊಂದಲಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದ ಇ.ಡಿ. ಅಧಿಕಾರಿಗಳು ಹಲವು ಬಾರಿ, ಬಿಡುವು ಪಡೆದು ವಿಚಾರಣೆಗೆ ವಾಪಸಾಗುತ್ತಿರುವುದು ಇದಕ್ಕೆ ಕಾರಣ ಎಂದು ಮೂಲಗಳು ಮಾಹಿತಿ ನೀಡಿವೆ. ಹೀಗಾಗಿ ಈ ಸಂಬಂಧ ಮತ್ತಷ್ಟು ಮಾಹಿತಿ ಪಡೆಯಲು ಅವರನ್ನು ವಶಕ್ಕೆ ಪಡೆಯಲು ಸಿದ್ದತೆ ನಡೆಸಿದ್ದಾರೆ ಎನ್ನ ಲಾಗಿದೆ.
Previous Articleಜುಲೈ 1ಕ್ಕೆ ಬೈರಾಗಿ ಸೆಟ್ಟೇರಲಿದೆ
Next Article ಮೈಕ್ರೋಸಾಫ್ಟ್ ಎಕ್ಸ್‌ಪ್ಲೋರರ್ ಸೇವೆ ಸ್ಥಗಿತ