ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಜಾರಿ ನಿರ್ದೇಶನಾಲಯವು (ಇ.ಡಿ.)
ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ಮುಖಂಡರಾದ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ಬೆಂಗಳೂರಿನ ಕೆಂಗಲ್ ಹನುಮಂತಯ್ಯ ರಸ್ತೆಯ ಲಾಲ್ ಬಾಗ್ ಗೇಟ್ ಬಳಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಆರ್.ವಿ. ದೇಶಪಾಂಡೆ, ಶಾಸಕರಾದ ಹ್ಯಾರಿಸ್, ರಂಗನಾಥ್, ಎಂಎಲ್ಸಿ ಯು.ಬಿ. ವೆಂಕಟೇಶ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.