Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಮಾಧಾನಗೊಂಡ ರಮೇಶ್ ಜಾರಕಿಹೊಳಿ | Ramesh Jarkiholi
    Trending

    ಸಮಾಧಾನಗೊಂಡ ರಮೇಶ್ ಜಾರಕಿಹೊಳಿ | Ramesh Jarkiholi

    vartha chakraBy vartha chakraನವೆಂಬರ್ 23, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.23- ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಹಾಗೂ ಪ್ರತಿಪಕ್ಷ ನಾಯಕನ ಆಯ್ಕೆ ಕುರಿತ ವರಿಷ್ಠರ ತೀರ್ಮಾನದಿಂದ ಅಸಮಾಧಾನಗೊಂಡಿರುವ ಹಿರಿಯ ನಾಯಕ ರಮೇಶ್ ಜಾರಕಿಹೊಳಿ (Ramesh Jarkiholi) ಅವರನ್ನು ಸಮಧಾನ ಪಡಿಸುವ ಕೆಲಸಕ್ಕೆ ನೂತನ ಅಧ್ಯಕ್ಷ ವಿಜಯೇಂದ್ತ ಮುಂದಾಗಿದ್ದಾರೆ.
    ಪ್ರತಿಪಕ್ಷ ನಾಯಕನ ಆಯ್ಕೆಗಾಗಿ ಕರೆದಿದ್ದ ಬಿಜೆಪಿ ಶಾಸಕಾಂಗ ಸಭೆಯಿಂದ ಅರ್ಧಕ್ಕೆ ಹೊರನಡೆದಿದ್ದ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ವಿಜಯೇಂದ್ರ ಉಪಹಾರ ಸೇವಿಸಿ ಸುದೀರ್ಘ ಮಾತುಕತೆ ನಡೆಸಿದರು.

    ಇದಕ್ಕೂ ಮುನ್ನ ಜಾರಕಿಹೊಳಿ (Ramesh Jarkiholi) ಅವರಿಗೆ ಕರೆ‌ ಮಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಪುತ್ರನಿಗೆ ಸಹಕಾರ ಕೊಡುವಂತೆ ಮನವಿ ಮಾಡಿದರು. ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಸಮರ್ಥವಾಗಿ ಸಂಘಟಿಸಬೇಕು ಇದಕ್ಕೆ ನಿಮ್ಮ ಸಹಕಾರಬೇಕಿದೆ ಎಂದು ಕೋರಿದರೆನ್ನಲಾಗಿದೆ.
    ಇದಾದ ನಂತರ ವಿಜಯೇಂದ್ರ ಅವರನ್ನು ಭೇಟಿಯಾದರು. ಈ ವೇಳೆ ತಾವು ಹಿರಿಯರು ನನಗೆ ತಮ್ಮ ಮಾರ್ಗದರ್ಶನ ಅಗತ್ಯ ಏನೇ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಮರೆತು ಪಕ್ಷದ ಹಿತದೃಷ್ಟಿಯಿಂದ ತಮ್ಮೊಂದಿಗೆ ಸಹಕರಿಸುವಂತೆ ವಿಜಯೇಂದ್ರ ಕೋರಿದರೆನ್ನಲಾಗಿದೆ.
    ವಿಧಾನಸಭೆ ಚುನಾವಣೆ ಸೋಲು ಹಲವರನ್ನು ಧೃತಿಗೆಡುವಂತೆ ಮಾಡಿದೆ.ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ಹೊಸ ಉತ್ಸಾಹ ಮೂಡಿಸಬೇಕು.ಈ ವಿಷಯದಲ್ಲಿ ತಮ್ಮ ಸಹಕಾರ ಅಗತ್ಯ ನೀವು ಹೇಳಿದಂತೆ ಕೇಳುತ್ತೇನೆ ಒಟ್ಟಿಗೆ ಕೆಲಸ‌ ಮಾಡೋಣಾ ಎಂದು ಹೇಳಿದರೆನ್ನಲಾಗಿದೆ.

    ವರಿಷ್ಠರು ಈ ಹಿಂದೆ ನಮಗೆ ಇಷ್ಟವಿಲ್ಲದಿದ್ದರೂ ಕೆಲವು ನಿರ್ಧಾರಗಳನ್ನು ಕೈಗೊಂಡಾಗ ನಾವು ಕೂಡ ಒಪ್ಪಿಕೊಂಡಿದ್ದೇವೆ. ನನ್ನನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದರಿಂದ ವರಿಷ್ಠರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಪಕ್ಷ ಸಂಘಟನೆ ಮಾಡುತ್ತೇನೆ. ಒಂದು ಪಕ್ಷವೆಂದ ಮೇಲೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಇರುತ್ತವೆ. ಎಲ್ಲವನ್ನು ಬದಿಗೊತ್ತಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸೋಣ ಎಂದು ಮನವಿ ಮಾಡಿರುವುದಾಗಿ ತಿಳಿದು ಬಂದಿದೆ.
    ಇದಕ್ಕೆ ಸ್ಪಂದಿಸಿದ ಜಾರಕಿಹೊಳಿ,ನನಗೆ ನಿಮ್ಮನ್ನು ಅಧ್ಯಕ್ಷರನ್ನಾಗಿ ಮಾಡಿರುವುದಕ್ಕೆ ವಿರೋಧವಿಲ್ಲ. ಆದರೆ ರಾಜ್ಯ ನಾಯಕರ ಬಳಿ ಒಂದು ಬಾರಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಬೇಕೆಂಬುದು ನನ್ನ ಒತ್ತಾಸೆಯಾಗಿತ್ತು. ಹಿಂದೆ ಕಷ್ಟಕಾಲದಲ್ಲಿದ್ದಾಗಲೂ ಯಡಿಯೂರಪ್ಪನವರ ಜೊತೆ ಇದ್ದೆ. ಮುಂದೆಯೂ ಇರುತ್ತೇನೆ ಎಂದು ಭರವಸೆ ನೀಡಿದರೆನ್ನಲಾಗಿದೆ.

    ಯಾವುದೇ ನಿರ್ಧಾರವನ್ನು ಪಕ್ಷದ ವೇದಿಕೆಯಲ್ಲೇ ತೀರ್ಮಾನವಾಗಬೇಕು. ಆತುರದ ಇಲ್ಲವೇ ಯಾರದೋ ಒತ್ತಡಕ್ಕೆ ಮಣಿದು ತೀರ್ಮಾನಿಸಬೇಡಿ. ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. ಪಕ್ಷ ಸಂಘಟನೆಗೆ ಒತ್ತು ಕೊಡಿ. ನಿಮ್ಮೊಂದಿಗೆ ನಾವು ಕೂಡ ಇರುತ್ತೇವೆ ಎಂದು ಸಲಹೆ ಮಾಡಿದರು ಎಂದು ಗೊತ್ತಾಗಿದೆ.

    ಸಂಪೂರ್ಣ ಸಹಕಾರ:
    ಇದಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ, ಏನೇ ಅಸಮಾಧಾನವಿದ್ದರೂ ವರಿಷ್ಠರು ತೆಗೆದುಕೊಂಡ ನಿರ್ಧಾರಕ್ಕೆ ನಾವೆಲ್ಲರೂ ಬದ್ದರಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆ ಸೇರಿದಂತೆ ಎಲ್ಲ ಹಂತದಲ್ಲೂ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಸಹಕಾರ ನೀಡುವುದಾಗಿ ತಿಳಿಸಿದ್ದೇನೆ ಎಂದು ಹೇಳಿದರು.
    ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಚರ್ಚಿಸಿ ಪರಿಹರಿಸಿಕೊಳ್ಳಲಾಗುವುದು. ವರಿಷ್ಠರ ತೀರ್ಮಾನವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ. ಅದಕ್ಕೆ ನಾನು ಕೂಡ ಹೊರತಾಗಿಲ್ಲ. ಬುಧವಾರ ನಾನು ಮಾಜಿ ಸಚಿವರಾದ ವಿ.ಸುನೀಲ್‍ಕುಮಾರ್ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಮನೆಯಲ್ಲೇ ಸಭೆ ಸೇರಿ ಪಕ್ಷದ ಬೆಳವಣಿಗೆ ಕುರಿತಂತೆ ಮಾತುಕತೆ ನಡೆಸಿದ್ದೇವೆ. ಅಸಮಾಧಾನವೆಂಬುದು ಮುಗಿದ ಅಧ್ಯಾಯ, ವಿಜಯೇಂದ್ರ ಇನ್ನು ಮುಂದೆ ನಮ್ಮ ಹುಡುಗ. ಅವರಿಗೆ ಸಹಕಾರ ನೀಡಲಿದ್ದೇವೆ ಎಂದು ಸ್ಪಷ್ಟಪಡಿಸಿದರು.

    ಪಕ್ಷದ ಕೆಲವು ತೀರ್ಮಾನಗಳಿಂದ ಬೇಸರವಾಗಿದ್ದು ನಿಜ. ಇದನ್ನೇ ವಿವಾದ ಮಾಡಿದರೆ ಪ್ರತಿಪಕ್ಷಗಳಿಗೆ ಇದು ಅಸ್ತ್ರವಾಗಲಿದೆ. ಬರುವ ದಿನಗಳಲ್ಲಿ ಇದಕ್ಕೆ ಅವಕಾಶ ಕಲ್ಪಿಸಿಕೊಡಬಾರದು. ಇನ್ನು ಮುಂದೆ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಲಿದ್ದೇವೆ ಎಂದು ಆಶ್ವಾಸನೆ ನೀಡಿದರು.
    ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಮುನ್ನಡೆಸಲು ವಿಜಯೇಂದ್ರಗೆ ಸಲಹೆ ಕೊಟ್ಟಿದ್ದೇನೆ. ಅವರು ಎಲ್ಲವನ್ನು ಸಹನೆಯಿಂದ ಕೇಳಿದ್ದಾರೆ. ಬರುವ ದಿನಗಳಲ್ಲಿ ಬಿಜೆಪಿಗೆ ಖಂಡಿತವಾಗಿಯೂ ಒಳ್ಳೆಯ ದಿನಗಳು ಬರಲಿವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

    Verbattle
    Verbattle
    Verbattle
    Government Jarkiholi Karnataka m News Politics Ramesh Jarkiholi Trending ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleನಾಲ್ವರ ಹತ್ಯೆಯ ನಿಜವಾದ ಕಾರಣ ಪತ್ತೆ | Nejar Murder Case
    Next Article ಗೊಂದಲ, ಗೋಜಲಾದ ಜಾತಿಗಣತಿ‌ ವರದಿ ಸ್ವೀಕಾರ ವಿಚಾರ | Karnataka Caste Census
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    ಜನವರಿ 21, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Daviddek ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • kvartira-borisovpoisk ರಲ್ಲಿ ನವಜಾತ ಶಿಶುಗಳ ಮಾರಾಟ ಜಾಲದಲ್ಲಿ ನಕಲಿ ವೈದ್ಯ | Child Trafficking Racket
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.