ಬೆಂಗಳೂರು, ಅ,22: ಕರ್ನಾಟಕದಲ್ಲಿ ಅನರ್ಹ ಬಿಪಿಎಲ್ ಪಡಿತರ ಕಾರ್ಡ್ದಾರರು ಸರ್ಕಾರದಿಂದ ಬಡವರಿಗೆ ದೊರೆಯುವ ಅನೇಕ ಸವಲತ್ತುಗಳನ್ನು ಅಕ್ರಮವಾಗಿ ಪಡೆಯುತ್ತಿರುವುದನ್ನು ಗಮನಿಸಿರುವ ಆಹಾರ ಇಲಾಖೆ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ ಇಲ್ಲಿಯವರೆಗೂ ಒಟ್ಟು 14 ಲಕ್ಷ ಕಾರ್ಡ್‌ಗಳನ್ನು ಗುರುತಿಸಿ ಅನರ್ಹರ ಕಾರ್ಡ್‌ಗಳನ್ನು ರದ್ದುಗೊಳಿಸುತ್ತಿರುವ ಬಗ್ಗೆ ಆಹಾರ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯದಲ್ಲಿ ಇಲ್ಲಿಯವರೆಗೂ ಒಟ್ಟು 14 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಲಾಗಿರುವ ಬಗ್ಗೆ ಮಾನ್ಯ ಆಹಾರ ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ. ಇವರ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ಒಟ್ಟು 4.35 ಕೋಟಿ ಫಲಾನುಭವಿಗಳು 1.51 ಕೋಟಿ ಪಡಿತರ ಕಾರ್ಡ್ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆಯುತ್ತಿದ್ದು ಅದರಲ್ಲಿ ಇಲಾಖಾ ಅಧಿಕಾರಿಗಳು 13.87 ಲಕ್ಷ ಅನರ್ಹ ಕಾರ್ಡ್‌ಗಳನ್ನು ಗುರುತಿಸಿದ್ದು, ಅವುಗಳಲ್ಲಿ 3.64 ಲಕ್ಷ ರದ್ದುಗೊಳಿಸಲಾಗಿದೆ. ಇದರಲ್ಲಿ ಸರ್ಕಾರಿ ನೌಕರರ 2,964 ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ.
ಅಹರ್ನತೆಗೆ ಮಾನದಂಡವೇನು?
6 ತಿಂಗಳವರೆಗೆ ಪಡಿತರ ಪಡೆಯದಿರುವವರು, ಒಂದು ವರ್ಷದವರೆಗೆ ನೇರ ನಗದು ವರ್ಗಾವಣೆ ಸೌಲಭ್ಯ ಪಡೆಯದಿರುವವರು ಮತ್ತು ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯ ಹೊಂದಿರುವವರನ್ನು ಅನರ್ಹರೆಂದು ಪರಿಗಣಿಸಲಾಗುತ್ತಿದೆ. ಅನರ್ಹ ಪಡಿತರ ಚೀಟಿಗಳ ಸಂಖ್ಯೆ 20 ಲಕ್ಷಕ್ಕಿಂತ ಹೆಚ್ಚಿರಬಹುದು ಎಂದು ಸಚಿವರು ಅಂದಾಜಿಸಿದ್ದಾರೆ.
ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯದೇ ಕಾರ್ಡ್ ರದ್ದಾದಲ್ಲಿ ಮುಂದಿನ ದಿನಗಳಲ್ಲಿ ಹೊಸ ಕಾರ್ಡ್‌ಗಳನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದು ಮುಂದುವರೆದು ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ಅನ್ನಭಾಗ್ಯ ಫಲಾನುಭವಿಗೆ ಐದು ಕೆಜಿ ಅಕ್ಕಿ ಬದಲಿಗೆ 170 ರೂ.ಗಳ ನೇರ ನಗದು ವರ್ಗಾವಣೆ (ಡಿಬಿಟಿ) ಎಂದಿನಂತೆ ಮುಂದುವರಿಯಲಿದೆ ಎಂದು ಮುನಿಯಪ್ಪ ತಿಳಿಸಿದರು.


7 ಪ್ರತಿಕ್ರಿಯೆಗಳು
Betano kallar på dig. Få en enorm €500 bonus plus free spins nu https://betanogame.org/sv/. Mobiloptimerat, säkert och fullt av dagliga kampanjer.
Your casino upgrade is one click away — hello Betano. https://tikitakagm.org/it/ More payment options, less waiting — Betano gets it.
Mostbet: o seu prГіximo destino para noites Г©picas e recompensas incrГveis – https://mostbetpt.pro/ , No Mostbet o bГґnus Г© insano: 100% + 270 free spins na hora do cadastro .
Д°ndi qoЕџul, Mostbet-dЙ™ 125% bonusla oyuna gГјclГј baЕџla – Qeydiyyat 30 saniyЙ™ , Mostbet ilЙ™ hЙ™r gГјn udmaq daha asandД±r .
Mostbet – diversГЈo garantida e recompensas que vГЈo te surpreender – https://mostbetpt.pro/como-se-registrar/ , No Mostbet cada novo dia traz mais emoГ§ГЈo e mais recompensas .
Play like someone already owes you a fortune – https://atamsulosin.com/tikitaka-casino-review-2026-expert-insights/ , Play like the universe already said yes .
lengvi pyragu receptai