ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಯಲ್ಲಿ ಮತ್ತೊಮ್ಮೆ ಬಂಡಾಯದ ಬೇಗುದಿ | BJP
    Viral

    ಬಿಜೆಪಿಯಲ್ಲಿ ಮತ್ತೊಮ್ಮೆ ಬಂಡಾಯದ ಬೇಗುದಿ | BJP

    vartha chakraBy vartha chakraಮಾರ್ಚ್ 9, 2024ಯಾವುದೇ ಟಿಪ್ಪಣಿಗಳಿಲ್ಲ3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.9- ರಾಜ್ಯದಲ್ಲಿ ಅತ್ಯಧಿಕ ಕ್ಷೇತ್ರದಲ್ಲಿ ಗೆಲ್ಲಬೇಕೆಂದು ರಣತಂತ್ರ ರೂಪಿಸುತ್ತಿರುವ ಬಿಜೆಪಿ (BJP) ಅಭ್ಯರ್ಥಿಗಳ ಆಯ್ಕೆಗೆ ಪ್ರಕ್ರಿಯೆ ಆರಂಭಿಸುತ್ತಿದ್ದಂತೆ ಹಿರಿಯ ನಾಯಕರ ಭಿನ್ನಮತದ ಬೆದರಿಕೆ ತಲೆ ನೋವಾಗಿ ಪರಿಣಮಿಸಿದೆ.
    ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿ ಈಗಾಗಲೇ ನಿವೃತ್ತಿ ಪೋಷಿಸಿರುವ ಶ್ರೀನಿವಾಸಪ್ರಸಾದ್, ಬಚ್ಚೇಗೌಡ, ಜಿ.ಎಸ್. ಬಸವರಾಜ್, ಶಿವಕುಮಾರ ಉದಾಸಿ, ಎ. ನಾರಾಯಣಸ್ವಾಮಿ ಅವರ ಕ್ಷೇತ್ರಗಳಿಗೆ ಬೇರೆ ಅಭ್ಯರ್ಥಿಗಳ ಹುಡುಕಾಟ ನಡೆದಿದ್ದು ಇಲ್ಲಿ ಟಿಕೆಟ್ ಗಾಗಿ ಪೈಪೋಟಿ ಆರಂಭವಾಗಿದೆ.

    ಅದರಲ್ಲೂ ಶಿವಕುಮಾರ್ ಉದಾಸಿ ಕಣಕ್ಕೆ ಇಳಿಯುವುದಿಲ್ಲ ಎಂದು ಹೇಳಿರುವ ಹಾವೇರಿ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
    ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪಕ್ಷದ ಹೈಕಮಾಂಡ್ ಈ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ ಆದರೆ ಈ ಕ್ಷೇತ್ರದಿಂದ ಕಣಕ್ಕಿಳಿಯಲು ನಿರ್ಧರಿಸಿದ್ದ ಮಾಜಿ ಸಚಿವ ಬಿ ಸಿ ಪಾಟೀಲ್ ಮತ್ತು ತಮ್ಮ ಪುತ್ರವನ್ನು ಕಣಕ್ಕಿಳಿಸಲು ಪ್ರಯತ್ನ ನಡೆಸಿದ್ದ ಮಾಜಿ ಸಚಿವ ಈಶ್ವರಪ್ಪ ಅವರು ಹೈಕಮಾಂಡ್ ವಿರುದ್ಧ ಬಂಡಾಯದ ಬಾವುಟ ಹಾರಿಸಲು ಸಜ್ಜುಗೊಂಡಿದ್ದಾರೆ.

    ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಸಿ ಪಾಟೀಲ್ ಕಾಂಗ್ರೆಸ್ ತೊರೆದು ಬಂದ ತಮ್ಮಿಂದಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು ಈಗ ನಾವುಗಳು ಸೋತು ಮನೆಯಲ್ಲಿ ಕುಳಿತಿದ್ದೇವೆ ಹೀಗಾಗಿ ನನಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಹಾವೇರಿಯಿಂದ ಟಿಕೆಟ್ ಕೊಡಬೇಕು ಎಂದು ಬೇಡಿಕೆ ಮಂಡಿಸಿದ್ದೇನೆ ಎಂದು ತಿಳಿಸಿದರು.
    ಹೈಕಮಾಂಡ್ ಈ ಕ್ಷೇತ್ರದಿಂದ ಸ್ಪರ್ಧಿಸಲು ತಮಗೆ ಟಿಕೆಟ್ ನೀಡಲಿದೆ ಎಂಬ ವಿಶ್ವಾಸವಿದೆ ಒಂದು ವೇಳೆ
    ಅವರು ಟಿಕೆಟ್ ಕೊಡದೆ ಹೋದರೆ ಅವರ ದಾರಿ ಅವರಿಗೆ ನಮ್ಮ ದಾರಿ ನಮಗೆ ಎಂದು ಎಂದು ಹೇಳಿದರು.

    ಪಕ್ಷೇತರ ಸ್ಪರ್ಧೆ:
    ಮತ್ತೊಂದೆಡೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ಕಟ್ಟು ಬಿತ್ತು, ಚುನಾವಣೆಯ ಅಖಾಡದಿಂದ ದೂರ ಉಳಿದಿದ್ದ ಮಾಜಿ ಸಚಿವ ಈಶ್ವರಪ್ಪ ಈ ಬಾರಿ ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಪತ್ರ ಕಾಂತೇಶ್ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
    ಕಳೆದ ಆರು ತಿಂಗಳಿಂದ ತಮ್ಮ ಪುತ್ರ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಹೀಗಾಗಿ ಅವರಿಗೆ ಪಕ್ಷದ ಟಿಕೆಟ್ ನೀಡಬೇಕು ಎಂದು ಬೇಡಿಕೆ ಮಂಡಿಸಿದ್ದರು. ಆದರೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸುತ್ತಿದ್ದಾರೆ ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಆಕ್ರೋಶ ಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
    ರಾಜ್ಯ ರಾಜಕಾರಣದಲ್ಲಿ ಉನ್ನತ ಸ್ಥಾನಕ್ಕೆ ಇರುವ ತಮ್ಮ ಪುತ್ರನಿಗೆ ಇರುವ ಅಡ್ಡಿಗಳನ್ನು ನಿವಾರಿಸಲು ಮುಂದಾಗಿರುವ ಯಡಿಯೂರಪ್ಪ ಇದಕ್ಕಾಗಿ ಬಸವರಾಜ ಬೊಮ್ಮಾಯಿ ಅವರನ್ನು ಸಂಸದರನ್ನಾಗಿ ಆಯ್ಕೆ ಮಾಡುವ ತಂತ್ರ ಹೆಣದಿದ್ದಾರೆ ಎಂದು ಈಶ್ವರಪ್ಪ ಆಪಾದಿಸಿದ್ದಾರೆ.

    ಯಡಿಯೂರಪ್ಪ ಅವರಿಗೆ ತಮ್ಮ ಪುತ್ರನಹಿತ ಮುಖ್ಯವಾದರೆ ಅವರ ಜೊತೆಯಲ್ಲಿ ರಾಜಕಾರಣ ಆರಂಭಿಸಿದ ನಮಗೂ ಕೂಡ ತಮ್ಮ ಪುತ್ರನ ರಾಜಕೀಯ ಭವಿಷ್ಯ ಮುಖ್ಯವಾಗಿದೆ ಹೀಗಾಗಿ ಲೋಕಸಭೆಯ ಟಿಕೆಟ್ ಕೊಡಬೇಕು ಒಂದು ವೇಳೆ ಪಕ್ಷ ಟಿಕೆಟ್ ನಿರಾಕರಿಸಿದರೆ ತಾವೇ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ ಎಂದು ಬೆದರಿಕೆ ಹಾಕಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
    ಅದೇ ರೀತಿಯಲ್ಲಿ ಬಿಜೆಪಿ ಹೈಕಮಾಂಡ್ ಗೆ ಚಿಕ್ಕೋಡಿ ದಾವಣಗೆರೆ ವಿಜಯಪುರ ಬಾಗಲಕೋಟೆ ಬೀದರ್ ಮತ್ತು ಮೈಸೂರು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಇಲ್ಲಿ ಹಾಲಿ ಸಂಸದರ ಜೊತೆಗೆ ಇತರೆ ಆಕಾಂಕ್ಷಿಗಳು ಪಟ್ಟು ಹಿಡಿದಿರುವುದು ಬಿಕ್ಕಟ್ಟಾಗಿ ಪರಿಣಮಿಸಿದೆ.

    ಎರಡು ದಿನದಲ್ಲಿ ಪಟ್ಟಿ:
    ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಅಭ್ಯರ್ಥಿಗಳ ಆಯ್ಕೆಗೆ ಹೈಕಮಾಂಡ್ ಪ್ರಕ್ರಿಯೆ ಆರಂಭಿಸಿದೆ ನಾಳೆ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುತ್ತಿದ್ದು ಒಂದೆರಡು ದಿನಗಳಲ್ಲಿ ರಾಜ್ಯದ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.
    ಬಿಜೆಪಿ ಟಿಕೇಟಿಗಾಗಿ ರಾಜ್ಯದಲ್ಲಿ ಸಾಕಷ್ಟು ಬೇಡಿಕೆ ಇದೆ ಹಲವಾರು ಮಂದಿ ಹಿರಿಯ ನಾಯಕರು ಕಣಕ್ಕೆ ಇಳಿಯಲು ಬಯಸಿದ್ದಾರೆ ಆದರೆ ಇದರಿಂದ ಯಾವುದೇ ಬಿಕ್ಕಟ್ಟು ನಿರ್ಮಾಣವಾಗಿಲ್ಲ ಎಲ್ಲರೂ ಕೂಡ ನರೇಂದ್ರ ಮೋದಿ ಅವರನ್ನು ಮತ್ತೊಂದು ಅವರಿಗೆ ಪ್ರಧಾನಿ ಮಾಡಲು ಪಣ ತೊಟ್ಟಿದ್ದಾರೆ ಎಂದು ಹೇಳಿದರು.
    ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕು ಎನ್ನುವುದು ನಮ್ಮ ಕಾರ್ಯತಂತ್ರವಾಗಿದೆ ಈ ನಿಟ್ಟಿನಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಸುಮಾರು 20 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಾದ ಚರ್ಚೆ ಪೂರ್ಣಗೊಂಡಿದ್ದು ಒಂದೆರಡು ದಿನಗಳಲ್ಲಿ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಿದರು.

    Verbattle
    Verbattle
    Verbattle
    BJP Karnataka News Politics ಈಶ್ವರಪ್ಪ ಕಾಂಗ್ರೆಸ್ ಚುನಾವಣೆ ನರೇಂದ್ರ ಮೋದಿ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleರಿಪಬ್ಲಿಕ್ ಆಫ್ ಬಳ್ಳಾರಿ ಆಯ್ತು ಈಗ ಐಎಸ್ ಆಫ್ ಬಳ್ಳಾರಿ | Bellary
    Next Article ದಲಿತ ಮುಖ್ಯಮಂತ್ರಿ ಅಪ್ರಸ್ತುತ | Dalit CM
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.