ಬೆಂಗಳೂರು,ಡಿ.18- ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ (Female Feticide) ಸುಳಿವು ನೀಡಿದವರಿಗೆ 1 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ.
ಇದಲ್ಲದೇ ಸುಳಿವು ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಆರೋಗ್ಯ ಇಲಾಖೆಯು ತಿಳಿಸಿದೆ.
ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಡೆಯುವ ಬಗ್ಗೆ ಸಾರ್ವಜನಿಕರು ಆರೋಗ್ಯ ಇಲಾಖೆಗೆ ಸುಳಿವು ನೀಡಿದರೆ ಬರೋಬ್ಬರಿ ಒಂದು ಲಕ್ಷ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ.
ಯಾವುದೇ ಭಾಗದಲ್ಲಿ ಆಸ್ಪತ್ರೆಯಲ್ಲಿ ಭ್ರೂಣಲಿಂಗ ಪತ್ತೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಸ್ಪಷ್ಟವಾಗಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದರೆ ಸಾಕು. ಸುಳಿವು ನೀಡಿದವರಿಗೆ ಒಂದು ಲಕ್ಷ ಬಹುಮಾನ ಹಣ ನೀಡುತ್ತೇವೆ. ಮಾಹಿತಿ ನೀಡಿದವರ ಮಾಹಿತಿಯನ್ನು ಕೂಡಾ ಗೌಪ್ಯವಾಗಿ ಇಡಲಾಗುತ್ತೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಸಾರ್ವಜನಿಕರ ಸಹಾಯಕ್ಕಾಗಿ ಆರೋಗ್ಯ ಇಲಾಖೆ ಹೆಲ್ಪ್ ಲೈನ್ ತೆರೆದಿದ್ದು 080- 25202264/65 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದೆ. ಸರಿಯಾದ ಮಾಹಿತಿ ನೀಡಿದ್ರೆ ಒಂದ ಲಕ್ಷ ಬಹುಮಾನ ನೀಡುವುದರ ಜೊತೆಗೆ ಯಾವುದೇ ಮಾಹಿತಿ ಬಹಿರಂಗ ಪಡಿಸದೇ ಇರಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಇನ್ನು ಹೆಣ್ಣು ಭ್ರೂಣ ಹತ್ಯೆ ತಡೆಗೆ ರಾಜ್ಯ ಸರ್ಕಾರ ಕಾನೂನು ತಿದ್ದುಪಡಿ, ಹೊಸ ನೀತಿ ರೂಪಿಸುವುದು, ರಾಜ್ಯಮಟ್ಟದ ಕಾರ್ಯಪಡೆ ರಚನೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ, ಲಿಂಗ ಪತ್ತೆ ಬಗ್ಗೆ ಆರೋಗ್ಯ ಸಚಿವರು ಕಳವಳ ವ್ಯಕ್ತಪಡಿಸಿದರು. “ಅಂಕಿಅಂಶಗಳನ್ನು ನೋಡಿದರೆ, ಕಳೆದ ವರ್ಷ 1,000 ಪುರುಷರಿಗೆ 947 ಮಹಿಳೆಯರಿದ್ದರು, ಈ ವರ್ಷ 929 ಇದ್ದಾರೆ. ಮಹಿಳೆಯರ ಸಂಖ್ಯೆ ಕಡಿಮೆಯಾಗಿದೆ ಎಂದರು.