ಬೆಂಗಳೂರು,ಅ.22- ಕಳ್ಳ ಮನೆಗೆ ನುಗ್ಗಿ ಚಿನ್ನಾಭರಣ, ನಗದು,ಇನ್ನಿತರ ಬೆಲೆ ಬಾಳುವ ವಸ್ತುಗಳನ್ನು ದೋಚುವುದು ಸಾಮಾನ್ಯ ಆದರೆ ಇಲ್ಲೊಬ್ಬ ಕಳ್ಳ ಕಳ್ಳತನಕ್ಕೆಂದು ಬಂದ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಂದಿರಾನಗರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಕಳ್ಳನನ್ನು ದಿಲೀಪ್ ಬಹದ್ದೂರ್ ಎಂದು ಗುರುತಿಸಲಾಗಿದೆ.
ದಿಲೀಪ್ ಮನೆಗೆ ಬೀಗ ಹಾಕಿಕೊಂಡು ಯೂರೋಪ್ ಪ್ರವಾಸ ಹೋಗಿದ್ದ ಸಾಫ್ಟ್‌ವೇರ್ ಕಂಪನಿಯೊಂದರ ಉದ್ಯೋಗಿಯ ಮನೆಗೆ ನುಗಿದ್ದ.
ಅಲ್ಲೇ ಮುಂಜಾನೆಯಿಂದ ಸಂಜೆವರೆಗೂ ವಾಸ್ತವ್ಯ ಹೂಡಿ ಬಾತ್ ರೂಮ್‍ನಲ್ಲಿ ಸ್ನಾನ ಮಾಡಿ ಇಡೀ ಮನೆಯನ್ನು ಜಾಲಾಡಿದ್ದಾನೆ. ಸಂಜೆ ಆಗುತ್ತಿದ್ದಂತೆ ಯುರೋಪ್ ಪ್ರವಾಸ ಮುಗಿಸಿ ಸಾಫ್ಟ್‌ವೇರ್ ಕಂಪನಿ ಉದ್ಯೋಗಿ ಮನೆಗೆ ಮರಳಿದ್ದಾರೆ.
ಮನೆಯವರು ಒಳಬರುತ್ತಿದ್ದಂತೆ ಆತಂಕಗೊಂಡು ದೇವರ ಕೋಣೆ ಮುಂದೆ ಸೀಲಿಂಗ್ ಫ್ಯಾನ್‍ಗೆ ನೇಣು ಹಾಕಿಕೊಂಡು ದಿಲೀಪ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ದಿಲೀಪ್ ಬಹದ್ದೂರ್ 2006ರಲ್ಲಿ ಜೀವನ್ ಭೀಮಾನಗರದಲ್ಲಿ ಕಳ್ಳತನ ಕೃತ್ಯದಲ್ಲಿ ಬಂಧಿಯಾಗಿದ್ದ. ಈ ಸಂಬಂಧ ಇಂದಿರಾನಗರ ಪೊಲೀಸರು ಅನುಮಾನಸ್ಪದ ಸಾವು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

