ಬೆಂಗಳೂರು: ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣಾ ಸಮಿತಿಗೆ ರೋಹಿತ್ ಚಕ್ರತೀರ್ಥರನ್ನು ನೇಮಿಸಿದ್ದಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ರೋಹಿತ್ ಚಕ್ರತೀರ್ಥರ ನೇಮಕಕ್ಕೆ ಸಾಲು ಸಾಲು ವಿವಾದಗಳು ಎದುರಾದ ಹಿನ್ನೆಲೆಯಲ್ಲಿ ಅವರನ್ನು ಸಮಿತಿಯಿಂದ ಕೈ ಬಿಡಲಾಗಿದೆ. ಈ ಸಂಬಂಧ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅಧಿಕೃತ ಮಾಹಿತಿ ನೀಡಿದ್ದಾರೆ.
ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯು ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ ಈ ಸಮಿತಿಯ ವರದಿಯನ್ನು ಪಠ್ಯ ಪರಿಷ್ಕರಣೆಗೆ ಬಳಕೆ ಮಾಡುವುದಿಲ್ಲ ಎಂದು ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ
ಪಿಯು ಪಠ್ಯಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥಗೆ ಗೇಟ್‌ಪಾಸ್
Previous Articleಹಳೆಯ ಟ್ವೀಟ್ ವೈರಲ್: ಭಾವುಕರಾದ ಅಪ್ಪು ಅಭಿಮಾನಿಗಳು
Next Article ಕೊಲೆಗಾರರ ಬಂಧನ