ಬೆಂಗಳೂರು,ಜೂ.30- ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕುತೂಹಲ ಮೂಡಿಸಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರಿಗೆ ಅಚ್ಚರಿಯ ಆಹ್ವಾನವನ್ನು ನೀಡಿದೆ.
ಈ ಸಂಬಂಧ ಟ್ವಿಟ್ ಮಾಡಿರುವ ಕಾಂಗ್ರೆಸ್ ಬಿಜೆಪಿ ಹಿರಿಯ ನಾಯಕ ಬಿಎಲ್ ಸಂತೋಷ್ ಅವರನ್ನು ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸುವಂತೆ ಮನವಿ ಮಾಡಿದೆ.
ಬಿಜೆಪಿ ರಾಜ್ಯ ಘಟಕದಲ್ಲಿ ನಡೆದಿರುವ ವಿದ್ಯಮಾನಗಳ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮಂತ್ರಿ ಮತ್ತು ಹಿರಿಯ ನಾಯಕ ರೇಣುಕಾಚಾರ್ಯ ಅವರು ಪಕ್ಷದ ಸೋಲಿಗೆ ಕಾರಣವಾದ ಅಂಶಗಳನ್ನು ಉಲ್ಲೇಖಿಸಿ ಕೆಲವು ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಹಲವು ಚುನಾವಣೆಗಳಲ್ಲಿ ಸ್ಪರ್ಧಿಸಿ ನಾಲ್ಕೈದು ಬಾರಿ ವಿಧಾನಸಭೆಗೆ ಆಯ್ಕೆಯಾಗಿರುವ ನಮ್ಮಂತವರು ಗ್ರಾಮ ಪಂಚಾಯಿತಿ ಚುನಾವಣೆಯನ್ನು ಗೆಲ್ಲಲಾಗದ ವ್ಯಕ್ತಿಯ ಮುಂದೆ ಕೈಕಟ್ಟಿ ನಿಲ್ಲುವ ಪರಿಸ್ಥಿತಿ ಇದೆ, ಇಂತಹ ಧೋರಣೆಯಿಂದಾಗಿ ಬಿಜೆಪಿ ಸೋಲು ಅನುಭವಿಸಿತು ಎಂದು ರೇಣುಕಾಚಾರ್ಯ ವಿವರಿಸಿದ್ದರು.
ರೇಣುಕಾಚಾರ್ಯ ಅವರ ಈ ಹೇಳಿಕೆಯನ್ನು ಟ್ವೀಟ್ ನಲ್ಲಿ ಉಲ್ಲೇಖಿಸಿರುವ ಕಾಂಗ್ರೆಸ್ ಹಿರಿಯ ನಾಯಕ
ಬಿ.ಎಲ್ ಸಂತೋಷ್ ಅವರೇ, ರೇಣುಕಾಚಾರ್ಯರ ಈ ಮಾತನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ಗ್ರಾಂ.ಪಂ ಚುನಾವಣೆಗೆ ಸ್ಪರ್ದಿಸಿ ಗೆದ್ದು ತೋರಿಸಿ! ನಿಮ್ಮ ದಮ್ಮು ತಾಕತ್ತು ನಿರೂಪಿಸಿ’ ಎಂದು ಕಾಂಗ್ರೆಸ್ ಸವಾಲು ಹಾಕಿದೆ.
ಗ್ರಾಮ ಪಂಚಾಯಿತಿ ಚುನಾವಣೆಗೆ ಬಿ.ಎಲ್. ಸಂತೋಷ್ ಸ್ಪರ್ಧೆ!
Previous Articleತಹಶಿಲ್ದಾರ್ ಬಳಿ ಸಾವಿರ ಕೋಟಿ ಸಂಪತ್ತು
Next Article ರಾಜ್ಯ BJPಗೆ ದಾರಿ ತೋರಿಸುವರಾರು?


2 ಪ್ರತಿಕ್ರಿಯೆಗಳು
Продажа тяговых АКБ https://faamru.com для складской техники любого типа: вилочные погрузчики, ричтраки, электрические тележки и штабелеры. Качественные аккумуляторные батареи, долгий срок службы, гарантия и профессиональный подбор.
дивитися фільми безкоштовно дивитися аніме без реклами