Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Sindhuri ವಿರುದ್ಧ ಗಂಭೀರ ಆರೋಪ – ತನಿಖೆಗೆ Roopa ಆಗ್ರಹ
    ರಾಜ್ಯ

    Sindhuri ವಿರುದ್ಧ ಗಂಭೀರ ಆರೋಪ – ತನಿಖೆಗೆ Roopa ಆಗ್ರಹ

    vartha chakraBy vartha chakraಫೆಬ್ರವರಿ 21, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.20-

    IPS ಅಧಿಕಾರಿ ಡಿ.ರೂಪಾ (D Roopa) ಮತ್ತು IAS  ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ.‌ ಇದೀಗ ಡಿ.ರೂಪಾ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸುದೀರ್ಘ ಪತ್ರವೊಂದನ್ನು ಬರೆದಿದ್ದು, ಸಿಂಧೂರಿ ವಿರುದ್ಧ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ‌

    ಅವರ ವಿರುದ್ಧ ತಾವು ಮಾಡಿರುವ ‌ಆರೋಪಗಳು‌ ಸಂಪೂರ್ಣ ಸತ್ಯವಾಗಿದ್ದು,ಈ ಬಗ್ಗೆ ತನಿಖೆಗೆ ಆದೇಶಿಸಬೇಕು. ತನಿಖೆಯ ಸಮಯದಲ್ಲಿ ತಮ್ಮ ಬಳಿ ಇರುವ ಎಲ್ಲಾ ಸಾಕ್ಷಿ ನೀಡುವೆ. ಒಂದು ವೇಳೆ ವಿಚಾರಣೆಗೆ ಆದೇಶಿಸಿದರೆ ಸಾಕ್ಷಿಯಾಗಿ ವಿವರಣೆ ನೀಡಲು ಸಿದ್ಧಳಿದ್ದೇನೆ ಎಂದು ತಿಳಿಸಿದ್ದಾರೆ.

    ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಉಂಟಾದ ಈಜುಕೊಳ ನಿರ್ಮಾಣ ವಿವಾದವನ್ನು ತಮ್ಮ ಪತ್ರದಲ್ಲಿ ಪ್ರಸ್ತಾಪಿಸಿರುವ ಡಿ.ರೂಪಾ, ಈ ಬಗ್ಗೆ IAS ಅಧಿಕಾರಿ ಡಾ.ರವಿಶಂಕರ್ (Dr. J. Ravishanka) ನೀಡಿರುವ ತನಿಖಾ ವರದಿ ಆಧರಿಸಿ ಶಿಸ್ತು ಕ್ರಮ ಜರುಗಿಸಬೇಕು. ಈ‌ ವರದಿಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ಸಿಂಧೂರಿ ಸರ್ಕಾರದ ನಿಯಮ ಉಲ್ಲಂಘನೆ ಮಾಡಿರುವುದು, ಅಧಿಕಾರ ದುರ್ಬಳಕೆ ಮಾಡಿರುವುದು‌ ಸಾಬೀತಾಗಿದೆ. ಹೀಗಿದ್ದರೂ ಇಲ್ಲಿಯವರೆಗೂ ಅವರ ಮೇಲೆ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ತನಿಖಾ ವರದಿ ಸಲ್ಲಿಸಲು, ಅದರ ಆಧಾರದಲ್ಲಿ ‌ಕ್ರಮ ಕೈಗೊಳ್ಳಲು ವಿಳಂಬವಾಗುವಂತೆ ಮಾಡುತ್ತಿರುವವರ ವಿರುದ್ಧವೂ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

    ಸಿಂಧೂರಿ ಅವರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ತನಿಖೆಗೆ ಅನುಮತಿ ನೀಡುವಂತೆ ಲೋಕಾಯುಕ್ತ ಅಧಿಕಾರಿಗಳು ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಆದರೆ ಇದಕ್ಕೆ ಅನುಮತಿ ನೀಡಲು ನಿರಾಕರಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇವರ ವಿರುದ್ಧ ಲೋಕಾಯುಕ್ತಕ್ಕೆ‌ ಸಲ್ಲಿಕೆಯಾಗಿರುವ ದೂರಿನಲ್ಲಿ ಕೆಲವು ಗಂಭೀರ ಆರೋಪಗಳಿದ್ದು ಇವುಗಳ ತನಿಖೆಯಾಗಬೇಕು ಎಂದಿದ್ದಾರೆ.

    ಮೈಸೂರಿನ ಜಿಲ್ಲಾಧಿಕಾರಿ ನಿವಾಸದಿಂದ ಇವರು ಸರ್ಕಾರದ ಕೆಲವು ಪೀಠೋಪಕರಣಗಳನ್ನು ತೆಗೆದುಕೊಂಡು ಬಂದಿರುವ ಬಗ್ಗೆ ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ನೀಡಿರುವ ವರದಿ ಆಧರಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

    ಬೆಂಗಳೂರಿನ ಜಾಲಹಳ್ಳಿಯಲ್ಲಿ ಇವರ ಪತಿ‌ ಮತ್ತು ಮಾವ ನಿರ್ಮಿಸುತ್ತಿರುವ ಐಷಾರಾಮಿ ಮನೆಗೆ ಪೀಠೋಪಕರಣ ಹಾಗೂ ಒಳಾಂಗಣ ವಿನ್ಯಾಸಕ್ಕೆ ಮಾಡಿರುವ ವೆಚ್ಚ, ಅದಕ್ಕೆ ಇವರು ‌ನೀಡಿರುವ ಕೋಟಿ, ಕೋಟಿ ‌ಹಣದ ಬಗ್ಗೆ ತಮ್ಮ ಬಳಿ ಮಾಹಿತಿಯಿದೆ.‌ ಇದು ನಿಗದಿತ ಆದಾಯದ ಮೂಲ ಮೀರಿ ನಿರ್ಮಿಸುತ್ತಿರುವ‌ ಕಟ್ಟಡವಾಗಿದ್ದು ಈ ಆದಾಯದ ಮೂಲದ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

    ಇದಷ್ಟೇ ಅಲ್ಲ‌ ಮುಜರಾಯಿ ಇಲಾಖೆಯ ವತಿಯಿಂದ ತಿರುಪತಿಯಲ್ಲಿ ನಿರ್ಮಾಣ ಮಾಡುತ್ತಿರುವ ಕರ್ನಾಟಕ ಭವನದ ನಿರ್ಮಾಣ ನಕ್ಷೆಗೆ ಒಂದು ಕೋಟಿ ರೂಪಾಯಿ ನೀಡಲಾಗಿದೆ, ಇದಕ್ಕೆ ಯಾವುದೇ ಟೆಂಡರ್ ಕರೆದಿಲ್ಲ. ಆಹಾರ ಇಲಾಖೆಯಲ್ಲಿದ್ದ ವೇಳೆ ಎರಡು ಕೋಟಿ ಟನ್ ಸಕ್ಕರೆ ಕಣ್ಮರೆ‌ ಕುರಿತು ಹಿರಿಯ ಅಧಿಕಾರಿ ಹರ್ಷಗುಪ್ತ (Harsha Gupta) ನೀಡಿರುವ ವರದಿಯ ಬಗ್ಗೆ ತನಿಖೆಯಾಗಬೇಕು ಎಂದಿದ್ದಾರೆ.

    ಇದಷ್ಟೇ ಅಲ್ಲದೆ ಶಾಸಕ ಸಾ.ರಾ. ಮಹೇಶ್ (Sa Ra Mahesh) ಜೊತೆಗಿನ ರಾಜಿ ಸಂಧಾನ ಸಂಪೂರ್ಣ ನಿಯಮ ಬಾಹಿರ, ಸರ್ಕಾರದ ಸೇವಾ ನಿಯಮಗಳಿಗೆ ವಿರುದ್ಧವಾಗಿದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಸಿಂಧೂರಿ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

    Verbattle
    Verbattle
    Verbattle
    Bangalore d roopa Dr. J. Ravishankar Harsha Gupta IAS IAS - IPS IAS - IPS conflicts Karnataka m rohini sindhuri Sa Ra Mahesh ನಿಯಮ ಉಲ್ಲಂಘನೆ
    Share. Facebook Twitter Pinterest LinkedIn Tumblr Email WhatsApp
    Previous Articleಸೋನು ನಿಗಮ್ ಮೇಲೆ ಹಲ್ಲೆ
    Next Article ಜಗಳ ಬಗೆಹರಿಸಲು Modi – Amit Shah ಬರಬೇಕಾ?
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    1 ಟಿಪ್ಪಣಿ

    1. Kdfxgm on ಫೆಬ್ರವರಿ 13, 2026 3:55 ಅಪರಾಹ್ನ

      betmgm IL https://betmgm-play.com/ mgm bet va

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://www.thexboxhub.com/the-ultimate-guide-to-xbox-game-reviews-what-to-look-for/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • LinwoodGah ರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • LarryCax ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.