ಬೆಳಗಾವಿ, ಡಿ.12- ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಆಯ್ಕೆ ನಂತರ ಪಕ್ಷದ ನಾಯಕತ್ವದ ವಿರುದ್ಧ ಸಮರ ಸಾರಿರುವ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಪಕ್ಷದ ಅಧ್ಯಕ್ಷ ವಿಜಯೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿ.ಸೋಮಣ್ಣ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರನ್ನು ಸೋಲಿಸಲು ಹಣ ಕಳುಹಿಸುವ ಮೂಲಕ ಬಿ.ವೈ. ವಿಜಯೇಂದ್ರ ಷಡ್ಯಂತ್ರ ನಡೆಸಿದ್ದರು ಎಂದು ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರೇ ತಮ್ಮನ್ನು ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದಾರೆ ಎಂದು ನನಗೆ ಹೇಳಿದ್ದರು. ಸತ್ಯ ಹೊರ ಬರಬೇಕು. ರಾಜ್ಯದಲ್ಲಿ ಅಪ್ಪ-ಮಕ್ಕಳು ಏನು ಮಾಡಿದ್ದಾರೆ ಎಂಬುದು ಗೊತ್ತಾಗಬೇಕು ಎಂದು ಹೇಳಿದರು.
ಮಾಜಿ ಸಚಿವ ಸೋಮಣ್ಣ ಅವರನ್ನು ಸೋಲಿಸಿದ್ದು ಯಾರು, ವಿಜಯೇಂದ್ರ ತಮ್ಮ ಆಪ್ತರಾದ ಕೆಲವರನ್ನು ಚಾಮರಾಜನಗರಕ್ಕೆ ಕಳುಹಿಸಿ ಸೋಮಣ್ಣ ಅವರನ್ನು ಬಲಿ ಕೊಟ್ಟರು. ಯಡಿಯೂರಪ್ಪ ತಮ್ಮ ಪುತ್ರರ ವಿರುದ್ಧ ವಿಧಾನಸಭೆಯಲ್ಲಿ ದುರ್ಬಲ ಅಭ್ಯರ್ಥಿಯನ್ನಾಕಿಸಿಕೊಂಡು ವರುಣಾದಲ್ಲಿ ಸಿದ್ಧರಾಮಯ್ಯಗೆ ಬೆಂಬಲ ನೀಡಿದರು.
ಕನಕಪುರದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳಲಾಗಿತ್ತು. ಹೀಗೆಲ್ಲಾ ಮಾಡಿ ನಮ್ಮ ಹೆಸರು ಕೆಡಿಸುವ ಪ್ರಯತ್ನ ಮಾಡಿದ್ದರು. ಅಪ್ಪ-ಮಕ್ಕಳ ಬಗ್ಗೆ ವರಿಷ್ಠರಿಗೆ ಎಲ್ಲವನ್ನೂ ತಿಳಿಸುತ್ತೇನೆ ಎಂದು ಹೇಳಿದರು ಯಡಿಯೂರಪ್ಪ ವರಿಷ್ಠರನ್ನು ಬ್ಲಾಕ್‌ಮೇಲ್ ಮಾಡಿ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ. ತಮ್ಮ ಮಗನನ್ನು ರಾಜ್ಯಾಧ್ಯಕ್ಷ ಮಾಡದಿದ್ದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಲ್ಲಿಯೂ ಪ್ರಚಾರಕ್ಕೆ ಹೋಗಲ್ಲ. ಶಿವಮೊಗ್ಗ ಕ್ಷೇತ್ರದಲ್ಲಿ ಮಾತ್ರ ಪ್ರಚಾರ ಮಾಡುತ್ತಿನೆ ಎಂದು ವರಿಷ್ಠರನ್ನು ಬಲವಂತ ಮಾಡಿ ವಿಜೇಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿಕೊಂಡರು ಎಂದು ಯತ್ನಾಳ್ ಹೇಳಿದರು.
5 ಪ್ರತಿಕ್ರಿಯೆಗಳು
услуги озвучивания https://www.ozvuchivanie-pomeshhenij.ru .
капельницы на дому от запоя http://snyatie-zapoya-na-domu11.ru .
выведение из запоя спб выведение из запоя спб .
снятие ломки нарколог снятие ломки нарколог .
¡Hola buscadores de emociones !
ВїTe interesa jugar sin gastar? Los spins gratis sin depГіsito son la respuesta. Solo crea tu cuenta y empieza a girar. ВЎSin compromiso!
Visita 100girosgratissindepositoespana.guru y gana sin pagar – https://100girosgratissindepositoespana.guru.
¡Que tengas magníficas jugadas !