ಶಿವಮೊಗ್ಗ,ಅ.25- ಜಿಲ್ಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ ನಿಲ್ಲುವಂತೆ ಕಾಣುತ್ತಿಲ್ಲ. ತಡರಾತ್ರಿ ಬೈಕ್‌ನಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಂದ ಅನ್ಯಕೋಮಿನ ದುಷ್ಕರ್ಮಿಗಳು ಕೊಲೆಯಾದ ಹರ್ಷನ ಸಹೋದರಿ ಹಾಗೂ ಕುಟುಂಬಸ್ಥರಿಗೆ ಜೀವ ಬೆದರಿಕೆ ಹಾಕಿ ಓರ್ವ ಯುವಕನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಲಾಗಿದೆ.
ಇದರಿಂದಾಗಿ ಶಾಂತವಾಗಿದ್ದ ಜಿಲ್ಲೆಯಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣಕ್ಕೆ ತಿರುಗಿದಂತಾಗಿದೆ. ಸ್ಥಳೀಯರು ಬೆನ್ನಟ್ಟಲು ಆರಂಭಿಸಿದಾಗ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು, ಗಾಯಾಳು ಪ್ರಕಾಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ..ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದು, ಎಸ್ಪಿ ಮಿಥುನ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ನಿಗಾ ವಹಿಸಿದ್ದಾರೆ.
ಹಿಜಾಬ್ ನಂತರ ಉಂಟಾದ ಕಲಹ ಹರ್ಷನ ಕೊಲೆಯಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಬಳಿಕ ಶಾಂತ ಸ್ಥಿತಿಗೆ ಮರಳಿದ್ದ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸಲು ದುಷ್ಕರ್ಮಿಗಳು ಮುಂದಾಗಿದ್ದಾರೆ. ತಡರಾತ್ರಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್‌ನಲ್ಲಿ ಕೂಗುತ್ತಾ ಓಡಾಡಿದ ಅನ್ಯಕೋಮಿನ ಯುವಕರ ಗುಂಪೊಂದು ಮೃತ ಹರ್ಷನ ಸಹೋದರಿ ಹಾಗೂ ಕುಟುಂಬಸ್ಥರಿಗೆ ಬೆದರಿಕೆ ಹಾಕಿದ್ದಾರೆ.
ಮಾಹಿತಿ ತಿಳಿದ ಸ್ಥಳೀಯರು ದುಷ್ಕರ್ಮಿಗಳನ್ನು ಹಿಂಬಾಲಿಲು ಆರಂಭಸಿದರೂ ಅಷ್ಟರಲ್ಲಾಗಲೇ ಪರಾರಿಯಾಗಿದ್ದರು. ಈ ವೇಳೆ ಭರಮಪ್ಪ ನಗರದಲ್ಲಿ ಪ್ರಕಾಶ್ (25) ಎಂಬ ಯುವಕನಿಗೆ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಕೂಡಲೇ ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸೀಗೆಹಟ್ಟಿ ಭಾಗದಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.
ಘಟನೆಗೆ ಸಂಬಂಧಿಸಿ ಹರ್ಷನ ಸಹೋದರಿ ಅಶ್ವಿನಿ ಸೇರಿ 10-15 ಜನರ ವಿರುದ್ಧ ಎಫ್‍ಐಆರ್ ದಾಖಲಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.
ಅನ್ಯಕೋಮಿನ ಯುವಕರಿಂದ ಹಲ್ಲೆಗೊಳಗಾದ ಪ್ರಕಾಶ್ ಸಹೋದರ ಮಾತನಾಡಿ ಭಜರಂಗದಳ ಮತ್ತು ಆರ್‌ಎಸ್‌ಎಸ್ ವಿರುದ್ದ ರಸ್ತೆಯಲ್ಲಿ ಬೈದುಕೊಂಡು ಹೋಗತ್ತಿದ್ದರು. ಲಾಂಗ್ ಮಚ್ಚು ಹಿಡಿದುಕೊಂಡು ಗಲಾಟೆ ಮಾಡಿಕೊಂಡು ಹೋಗುತ್ತಿದ್ದರು.
ರಾತ್ರಿ ಮೂರು ಬೈಕ್‌ಗಳಲ್ಲಿ ಸುಮಾರು 9 ಮಂದಿ ಮಾಸ್ಕ್ ಹಾಕಿಕೊಂಡು ಹೋಗುತ್ತಿದ್ದರು. ನಮ್ಮ ಪ್ರದೇಶದ ಜನರು ಎಲ್ಲಾರು ಅವರನ್ನು ನೋಡಿದ್ದಾರೆ. ಈ ಹಿಂದೆ ಗಣೇಶ ಹಬ್ಬ ಸೇರಿದಂತೆ ಕೆಲವು ಹಿಂದೂ ಕಾರ್ಯಕ್ರಮಗಳಲ್ಲಿ ನನ್ನ ಸಹೋದರ ಭಾಗಿಯಾಗಿದ್ದ ಎಂದರು.
ಸೂಕ್ತ ರಕ್ಷಣೆಗೆ ಆಗ್ರಹ:
ದುಷ್ಕರ್ಮಿಗಳಿಂದ ಭಯ ಹುಟ್ಟಿಸುವ ಕೃತ್ಯದ ಹಿನ್ನೆಲೆಯಲ್ಲಿ ಆತಂಕಗೊಂಡಿರುವ ನಮಗೆ ಸೂಕ್ತ ರಕ್ಷಣೆ ಬೇಕು ಎಂದು ಹಿಂದೂ ಕಾರ್ಯಕರ್ತ ದಿ. ಹರ್ಷ ಸಹೋದರಿ ಅಶ್ವಿನಿ ಆಗ್ರಹಿಸಿದ್ದಾರೆ.
ಹರ್ಷ ತಾಯಿ ಪದ್ಮಾವತಿ ಹಾಗೂ ಹರ್ಷ ಸಹೋದರಿ ಅಶ್ವಿನಿ ಮಾತನಾಡಿ, ರಾತ್ರಿ 11.15 ರ ಸಮಯಕ್ಕೆ 3-4 ಬೈಕ್ ನಲ್ಲಿ ಯುವಕರು ಬಂದಿದ್ದರು. ಮಾರಕಾಸ್ತ್ರ ಹಿಡಿದುಕೊಂಡು ಓಡಾಡುತ್ತಿದ್ದರು ಎಂದು ಹೇಳಿದರು.
ಕಠಿಣ ಶಿಕ್ಷೆಗೆ ಒತ್ತಾಯ:
ಹರ್ಷನ ತೆಗೆದಿದ್ದು ಸಾಲದಾ, ನಿಮ್ಮನ್ನೂ ತೆಗೆಯಬೇಕಾ. ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಯುವಕರ ಗುಂಪು ಅವಾಜ್ ಹಾಕಿದ್ದಾರೆ. ಇನ್ನು ಎಷ್ಟು ಮಂದಿ ಹಿಂದೂ ಯುವಕರ ಬಲಿಯಾಗಬೇಕು..?. ನನ್ನ ಸಹೋದರ ಹರ್ಷ ಹೋದ, ಪ್ರವೀಣ್ ನೆಟ್ಟಾರ್ ಹೋದ. ಆದರೂ ಅವರ ದಾಹ ಇನ್ನೂ ತೀರಿಲ್ಲ. ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ನಮಗೆ ಸೂಕ್ತ ರಕ್ಷಣೆ ಕೊಡಬೇಕು ಎಂದು ತಿಳಿಸಿದರು.
ಕೊಲೆ ಯಾಕಾಯ್ತು:
ಶಿವಮೊಗ್ಗದಲ್ಲಿ ಹರ್ಷನ ಹತ್ಯೆ ನಡೆಯುವ ಹಿಂದಿನ ಉದ್ದೇಶ ಹಿಂದೂಗಳಲ್ಲಿ ಭಯ ಹುಟ್ಟಿಸುವುದಾಗಿದೆ. ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ವಾಹನಗಳನ್ನು ಭಜರಂಗದಳದ ಕಾರ್ಯಕರ್ತರು ತಡೆಯುತ್ತಿದ್ದರು. ಕಸಾಯಿ ಖಾನೆಗೆ ಹೋಗುತ್ತಿದ್ದ ಗೂಡ್ಸ್ ವಾಹನಗಳನ್ನು ಭಜರಂಗದಳದ ಕಾರ್ಯಕರ್ತರು ತಡೆಯುತ್ತಿದ್ದರು. ಕಸಾಯಿ ಖಾನೆಗೆ ಹೋಗುತ್ತಿದ್ದ ಗೂಡ್ಸ್ ವಾಹನಗಳನ್ನು ಅಡ್ಡಗಟ್ಟಲಾಗಿತ್ತು. ಇದರಿಂದಾಗಿ ಮುಸ್ಲಿಮರ ಆದಾಯಕ್ಕೆ ತೊಂದರೆ ಆಗಿತ್ತು. ಹಾಗಾಗಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ಹಿಂದೂವನ್ನು ಹತ್ಯೆ ಮಾಡಿ ಅವರಲ್ಲಿ ಮುಸ್ಲಿಮರ ಬಗ್ಗೆ ಭಯ ಹುಟ್ಟುತ್ತದೆ ಎಂಬ ಭಾವಿಸಿದ್ದರು. ಈ ಬಗ್ಗೆ ಚರ್ಚೆ ನಡೆಸಿದಾಗ ಮುನ್ನಲೆಗೆ ಬಂದ ಹೆಸರು ಹರ್ಷ. ಈತ ಜಾಲತಾಣದಲ್ಲಿ ಸಕ್ರಿಯನಾಗಿದ್ದಲ್ಲದೆ ಮುಸ್ಲಿಮರನ್ನು ಬಗ್ಗೆ ಟೀಕಿಸಿ ಪೋಸ್ಟ್ ಹಾಕುತ್ತಿದ್ದನು. ಹೀಗಾಗಿ ಈತನ ಹೆಸರನ್ನೇ ಅಂತಿಮಗೊಳಿಸಿದ್ದಾರೆ. ಬಳಿಕ ಸಂಚು ರೂಪಿಸಿ ರಾತ್ರಿ ವೇಳೆ ದಾಳಿ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದರು.
Previous Articleಕಿರಣ್ ಮಜುಂದಾರ್ ಪತಿ ಇನ್ನಿಲ್ಲ
Next Article ನ್ಯಾಯಾಧೀಶರಿಗೆ ಬೆದರಿಕೆ: ಇಬ್ಬರು ಆರೋಪಿಗಳಿಗೆ ಜಾಮೀನು