ಬೆಂಗಳೂರು, ಏ.23- ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಡಿ ಪೋಕ್ಸೋ ಪ್ರಕರಣದ ತನಿಖೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಶರಣರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದ ಆರೋಪಗಳಿಗೆ ಸಂಬಂಧಿಸಿದಂತೆ ಶರಣರಿಗೆ ನೀಡಲಾಗಿದ್ದಜಾಮೀನಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಹುಕ್ಸು ಕಾಯ್ದೆ ಅಡಿಯಲ್ಲಿ ಗಂಭೀರ ಸ್ವರೂಪದ ಪ್ರಕರಣ ಎದುರಿಸುತ್ತಿರುವ ಶರಣರಿಗೆ ಜಾಮೀನು ನೀಡಿರುವ ಹೈಕೋರ್ಟ್ ಕ್ರಮವನ್ನು ಪ್ರಶ್ನಿಸಿ ಡಿ.ರಾಜಪ್ಪ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠ ಜಾಮೀನು ಆದೇಶಕ್ಕೆ ತಡೆಯಾಗನೆ ನೀಡಿದೆ.
ಅಲ್ಲದೆ ಶಿವಮೂರ್ತಿ ಶರಣರು ವಿಚಾರಣಾ ನ್ಯಾಯಾಲಯದ ಎದುರು ಒಂದು ವಾರದೊಳಗೆ ಹಾಜರಾಗುವಂತೆಯೂ ಸೂಚಿಸಿದೆ. ಜತೆಗೆ ನಾಲ್ಕು ತಿಂಗಳ ಒಳಗಾಗಿ ವಿಚಾರಣೆ ಪೂರ್ಣಗೊಳಿಸುವಂತೆಯೂ ಚಿತ್ರದುರ್ಗ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಪ್ರಕರಣದ ಸಾಕ್ಷಿಗಳ ವಿಚಾರಣೆ ಮುಗಿಯುವವರೆಗೂ ಶಿವಮೂರ್ತಿ ಶರಣರು ನ್ಯಾಯಾಂಗ ಬಂಧನದಲ್ಲಿರಬೇಕು. ಪ್ರಾಸಿಕ್ಯೂಷನ್ ಮತ್ತು ಆರೋಪಿ ಎಲ್ಲರೂ ವಿಚಾರಣೆಗೆ ಸಹಕರಿಸಬೇಕು. ವಿಚಾರಣೆಗೆ ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಿದ್ದಲ್ಲಿ, ಅದನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತರಬೇಕು’ ಎಂದು ಪೀಠ ನಿರ್ದೇಶಿಸಿದೆ.


1 ಟಿಪ್ಪಣಿ
This is where broke becomes folklore – https://gntopama.com/starburst-slot-netent-classic-gameplay-rtp-winning-tips-2026/ , Every reel turn whispers your name louder than luck itself .