ಬೆಂಗಳೂರು, ಮಾ.21- ಲೋಕಸಭೆ ಚುನಾವಣೆ ಕಾವು ತೀವ್ರಗೊಂಡಿರುವ ಬೆನ್ನಲ್ಲೇ ಬಿಜೆಪಿಯ ಇಬ್ಬರು ಶಾಸಕರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಮತ್ತೊಂದೆಡೆ ವಿಧಾನಪರಿಷತ್ತಿನ ಜೆಡಿಎಸ್ ಸದಸ್ಯ ಮರಿ ತಿಬ್ಬೇಗೌಡ ಅವರು, ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದ ಡಿಕೆ ಶಿವಕುಮಾರ್ ಅವರು ಬೆಂಗಳೂರಿಗೆ ಬರುತ್ತಿದ್ದಂತೆ ಬಿಜೆಪಿ ಶಾಸಕರಾದ ಶಿವರಾಂ ಹೆಬ್ಬಾರ್ ಮತ್ತು ಎಸ್ ಟಿ ಸೋಮಶೇಖರ್ ಅವರು ಶಿವಕುಮಾರ್ ಅವರನ್ನು ಭೇಟಿ ಮಾಡಿ ಸುಧೀರ್ಘ ಮಾತುಕತೆ ನಡೆಸಿದರು.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡುವ ಕುರಿತಂತೆ ಈ ಇಬ್ಬರು ಶಾಸಕರ ನಡುವೆ ಮಾತುಕತೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಸೋಮಶೇಖರ್ ರವರು ಬೆಂಗಳೂರು ಉತ್ತರ ಮತ್ತು ಶಿವರಾಂ ಹೆಬ್ಬಾರ್ ಅವರು ಕಾರವಾರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ಸಜ್ಜುಗೊಂಡಿದ್ದರು ಈ ಹಿನ್ನೆಲೆಯಲ್ಲಿ ಇಬ್ಬರೂ ಬಿಜೆಪಿ ತೊರೆಯುತ್ತಾರೆ ಎಂದು ಹೇಳಲಾಗಿತ್ತು ಆದರೆ ಇಬ್ಬರೂ ಬಿಜೆಪಿಯಲ್ಲೇ ಉಳಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಕೆಲಸ ಮಾಡಲು ನಿರ್ಧರಿಸಿದ್ದು ಈ ಕುರಿತಂತೆ ಶಿವಕುಮಾರ್ ಅವರ ಜೊತೆ ಮಾತುಕತೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಬೆಂಕಿ ಹಚ್ಚುವ ಶೋಭಾ:
ಈ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್. ಟಿ. ಸೋಮಶೇಖರ್ ತಮ್ಮ ಕ್ಷೇತ್ರ ವ್ಯಾಪ್ತಿಯ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಇಲ್ಲಿವರೆಗೆ ಸಂಸದರಾಗಿದ್ದ ಸದಾನಂದ ಗೌಡ ಮತ್ತು ದಿವಂಗತ ಚಂದ್ರೇಗೌಡ ಅವರು ಅತ್ಯುತ್ತಮ ರೀತಿಯಲ್ಲಿ ಕೆಲಸ ಮಾಡಿದ್ದಾರೆ ಆದರೆ ಈಗ ಅಭ್ಯರ್ಥಿಯಾಗಿ ಬಂದಿರುವ ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ ಅವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.
ಕ್ಷೇತ್ರ ವ್ಯಾಪ್ತಿಯಲ್ಲಿ ಇವರು ಎಲ್ಲೆಲ್ಲಿ ಬೆಂಕಿ ಹಚ್ಚುತ್ತಾರೋ ಗೊತ್ತಿಲ್ಲ ಅವರ ಮಾತುಗಳೆಲ್ಲ ಬೆಂಕಿ ಹಚ್ಚುವ ಕಡೆ ಇರುತ್ತದೆ ಹೀಗಾಗಿ ಕುರಿತಂತೆ ನಾನು ಮುಖ್ಯ ಚುನಾವಣಾ ಆಯುಕ್ತರನ್ನು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಲಿದ್ದೇನೆ ಎಂದು ತಿಳಿಸಿದರು.
ಸುಧೀರ್ಘ ಉತ್ತರ:
ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿದ ಕಾರಣಕ್ಕೆ ತಮಗೆ ನೀಡಿರುವ ನೋಟಿಸ್ ಗೆ ಸುದೀರ್ಘವಾದ ಉತ್ತರ ನೀಡಿದ್ದೇನೆ ಬಿಜೆಪಿ ನಾಯಕರು ಅದನ್ನು ಅವಲೋಕಿಸಿ ಷೋಕಾಸ್ ವಾಪಸ್ ಪಡೆಯಬೇಕು ಎಂದು ಇದೆ ವೇಳೆ ಶಿವರಾಂ ಹೆಬ್ಬಾರ್ ತಿಳಿಸಿದರು.
ಕ್ಷೇತ್ರದ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವಾರು ವಿಷಯಗಳ ಕುರಿತಂತೆ ಉಪಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಈ ವೇಳೆ ಯಾವುದೇ ರೀತಿಯ ರಾಜಕೀಯ ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾರವಾರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯುತ್ತಾರೆ ಎನ್ನುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಅಭ್ಯರ್ಥಿ ಆಯ್ಕೆ ಪ್ರಕಟವಾದ ನಂತರ ತಮ್ಮ ನಿಲುವು ತಿಳಿಸುವುದಾಗಿ ಹೇಳಿದರು.
4 ಪ್ರತಿಕ್ರಿಯೆಗಳು
поставить капельницу от запоя на дому https://snyatie-zapoya-na-domu11.ru/ .
онлайн казино онлайн казино .
купить семена почтой россии http://semenaplus74.ru .
Denk je aan de goede oude tijd toen er home buttons en bubble icons waren? Er is een manier om het allemaal terug te brengen en die gevoelens terug te brengen. Een app genaamd OldOS (via the Verge) herstelt iOS 4 naar de nieuwe iPhone. Bijzonderheden https://mashable.com/article/iphone-3g-oldos