Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » JDS-BJP ಮೈತ್ರಿಗೆ ಆಘಾತ-NDA ಅಭ್ಯರ್ಥಿ ಸೋಲು
    ಸುದ್ದಿ

    JDS-BJP ಮೈತ್ರಿಗೆ ಆಘಾತ-NDA ಅಭ್ಯರ್ಥಿ ಸೋಲು

    vartha chakraBy vartha chakraಫೆಬ್ರವರಿ 20, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ತೀವ್ರ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ.
    ಈ ಚುನಾವಣೆಯಲ್ಲಿ ಎನ್.ಡಿ.ಎ. ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ವಕೀಲ ಎ.ಪಿ.ರಂಗನಾಥ್ ಸೋಲುವ ಮೂಲಕ ‌ಮುಖಭಂಗ ಅನುಭವಿಸಿದ್ದಾರೆ.
    ಕಾಂಗ್ರೆಸ್ ನ ಪುಟ್ಟಣ್ಣ ಅವರು ಬಿಜೆಪಿ–ಜೆಡಿಎಸ್‌ ಮೈತ್ರಿಯ ಅಭ್ಯರ್ಥಿಯಾಗಿದ್ದ ಎ.ಪಿ. ರಂಗನಾಥ್‌ ಅವರನ್ನು 1,507 ಮತಗಳ ಅಂತರದಿಂದ ಸೋಲಿಸಿದ್ದಾರೆ. ಪುಟ್ಟಣ್ಣ 8,260 ಮತಗಳನ್ನು ಪಡೆದರೆ, ರಂಗನಾಥ್‌ 6,753 ಮತಗಳನ್ನು ಗಳಿಸಿದ್ದಾರೆ.

    ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆ ವ್ಯಾಪ್ತಿಯ ಮತದಾರರು ಫೆ.16ರಂದು ಮತದಾನ ಮಾಡಿದ್ದರು. ಒಟ್ಟು 19,152 ಮತಗಳ ಪೈಕಿ 16,544 ಮಂದಿ (ಪುರುಷರು 6,504, ಮಹಿಳೆಯರು 10,040) ಮತ ಚಲಾಯಿಸಿದರು.
    ಈ ಹಿಂದೆ ಇದೇ ಕ್ಷೇತ್ರದಿಂದ ಆಯ್ಕೆಯಾಗಿದ್ದ ಪುಟ್ಟಣ್ಣ ಅವರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾರ್ಚ್‌ನಲ್ಲಿ ರಾಜೀನಾಮೆ ನೀಡಿದ್ದರು. ಅಂದಿನಿಂದ ಖಾಲಿ ಉಳಿದಿದ್ದ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು. ಇದೀಗ ಮತ್ತೆ ಪುಟ್ಟಣ್ಣ ಗೆಲುವು ಸಾಧಿಸಿದ್ದು, ಈ ಸ್ಥಾನದ ಅವಧಿ 2026 ನವೆಂಬರ್ 11ರವರೆಗಿದೆ.
    ‌ಮತದಾರರ ಒಪ್ಪಿಗೆ ಇಲ್ಲ:
    ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಮೈತ್ರಿಯಾಗಿದೆಯೇ ವಿನಃ ಇದಕ್ಕೆ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ವಿಧಾನ ಪರಿಷತ್ ಉಪಚುನಾವಣೆ ಫಲಿತಾಂಶ ಸ್ಪಷ್ಟಪಡಿಸಿದೆ ಎಂದು ಹೇಳಿದ್ದಾರೆ.
    ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನ ಜಾತ್ಯತೀತ ಮುಖವಾಡ ಕಳಚಿದೆ, ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ ಎಂದಿದ್ದಾರೆ.

    ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ ಅಭಿನಂದನೆಗಳು. ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವಾಗಿದೆ ಎಂದು ಬಣ್ಣಿಸಿದ್ದಾರೆ
    ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ತಮ್ಮ‌ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಹೊರತಾಗಿಯೂ ಸೋಲು ಕಂಡಿವೆ. ಇದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಕುಮಾರಸ್ವಾಮಿ ಹಾಗೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ನಡುವಿನ ಮೈತ್ರಿಯೇ ಹೊರತು ಎರಡೂ ಪಕ್ಷಗಳ ಮತದಾರರ ನಡುವಿನ ಮೈತ್ರಿಯಲ್ಲ ಎಂಬುದು ಸಾಬೀತಾಗಿದೆ ಎಂದು ಹೇಳಿದ್ದಾರೆ.

    ಕುಟುಂಬದ ಹಿತಕ್ಕಾಗಿ‌ ಕೋಮುವಾದಿಗಳ ಜೊತೆ ಕೈಜೋಡಿಸಿರುವ ಜೆಡಿಎಸ್ ಪಕ್ಷವನ್ನು ಹಾಗೂ ಸದಾಕಾಲ ಕುಟುಂಬ ರಾಜಕಾರಣದ ವಿರುದ್ಧ ಟೀಕೆ ಮಾಡಿ, ಒಂದು ಕುಟುಂಬವೇ ರಾಜಕೀಯ ಪಕ್ಷದಂತಿರುವ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಬಿಜೆಪಿಯನ್ನು ಮತದಾರ ಬಂಧುಗಳ ಸಾರಾಸಗಟಾಗಿ ತಿರಸ್ಕರಿಸಿದ್ದಾರೆ ಎಂದು ತಿಳಿಸಿದ್ದಾರೆ
    ಸ್ವಾರ್ಥ ಸಾಧನೆಯೊಂದೇ ಗುರಿಯಾಗಿರುವ ಈ ಅಪವಿತ್ರ ಮೈತ್ರಿಗೆ ಗ್ಯಾರಂಟಿ, ವಾರೆಂಟಿ ಯಾವುದೂ ಇಲ್ಲ.ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.

    BJP JDS JDS-BJP NDA ಕಾಂಗ್ರೆಸ್ ಚುನಾವಣೆ ನರೇಂದ್ರ ಮೋದಿ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪಕ್ಷೇತರರ ಶಾಸಕರಿಗೆ ಬೆದರಿಕೆ ಹಾಕಿದರಾ…? | BJP
    Next Article ಮಿಯಾಂವ್ ಮಿಯಾಂವ್ ಡ್ರಗ್ಸ್ ಜಾಲ | Meow Meow
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    ಅಕ್ಟೋಬರ್ 4, 2025

    1 ಟಿಪ್ಪಣಿ

    1. promokodjmPl on ನವೆಂಬರ್ 13, 2025 5:52 ಫೂರ್ವಾಹ್ನ

      промокоды на сегодня

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bouclier Apextrail Review ರಲ್ಲಿ ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.
    • Bouclier Apextrail ರಲ್ಲಿ ಸಂಕಷ್ಟಕ್ಕೆ ಸಿಲುಕಿದ ಹೈಕೋರ್ಟ್ ನ್ಯಾಯಮೂರ್ತಿ.
    • QThomasAlkargo ರಲ್ಲಿ ಪ್ರಜ್ವಲ್ ರೇವಣ್ಣನಿಗೆ ಎಸ್ಐಟಿ ಕುಣಿಕೆ | Prajwal Revanna
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe