ಕೋಲಾರ-
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಳ್ಳುತ್ತಿದೆ.
ಮತ್ತೊಂದೆಡೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಕ್ಷೇತ್ರದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಕೋಲಾರ ಪ್ರವಾಸ ಕೈಗೊಂಡಿದ್ದು, ಇಡೀ ದಿನದ ವಿದ್ಯಮಾನ ಗಮನ ಸೆಳೆಯಿತು.
ವಿಶೇಷವಾಗಿ ರೂಪಿಸಲಾಗಿರುವ ವಿಶೇಷ ಬಸ್‍ನಲ್ಲಿ ಇಂದು ಬೆಳಗ್ಗೆ ಕೋಲಾರಕ್ಕೆ ಆಗಮಿಸಿದ ಅವರು ಸುಮಾರು 10ಕ್ಕೂ ಹೆಚ್ಚು ಆಯಕಟ್ಟಿನ ಸ್ಥಳಗಳಿಗೆ ಭೇಟಿ ನೀಡಿದರು. ಕೋಲಾರ ನಗರದ ಕೋಲಾರಮ್ಮ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ನಂತರ ಮೆಥೋಡಿಸ್ಟ್ ಚರ್ಚ್‍ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ನಂತರ ಕಾಲೇಜು ವೃತ್ತದಲ್ಲಿ ವಾಲ್ಮಿಕಿ ಮಹರ್ಷಿ ಪ್ರತಿಮೆ, ನಂತರ ಇಟಿಸಿಎಂ ಸರ್ಕಲ್‍ನಲ್ಲಿರುವ ಸಂಗೋಳ್ಳಿರಾಯಣ್ಣ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಮಹಾತ್ಮಗಾಂಧಿ ಹಾಗೂ ಅಂಬೇಡ್ಕರ್ ಪ್ರತಿಮೆಗಳಿಗೂ ಮಾಲಾರ್ಪಣೆ ಮಾಡಿದ ಬಳಿಕ ಕ್ಲಾಕ್‍ಟವರ್ ಬಳಿ ಕುತುಬ್ ಶಾ ದರ್ಗಾಕ್ಕೆ ಭೇಟಿ ನೀಡಿ ನಂತರ ಕೈವಾರ ತಾತಯ್ಯ ವಿಗ್ರಹಕ್ಕೂ ಮಾಲಾರ್ಪಣೆ ಮಾಡಿದರು. ನಂತರ ಕೆ.ಸಿ.ವ್ಯಾಲಿ ಯೋಜನೆಯಿಂದ ಸೃಷ್ಟಿಯಾದ ನರಸಾಪುರ ಕೆರೆಗೆ ಭೇಟಿ ನೀಡಿ ಪರಿಶೀಲಿಸಿದರು.
ಸಿದ್ದರಾಮಯ್ಯ ಅವರೊಂದಿಗೆ .ಆರ್.ಸೀತಾರಾಮ್, ಶಾಸಕ ಬೈರತಿ ಸುರೇಶ್, ಮಾಜಿ ಶಾಸಕರಾದ ಸುಧಾಕರ್, ವಿ.ಮುನಿಯಪ್ಪ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರುಹಾಲಿ ಶಾಸಕರಾಗಿರುವ ಶ್ರೀನಿವಾಸ್‍ಗೌಡ ಅವರು ಮುಂದಿನ ಚುನಾವಣೆಯಲ್ಲಿ ಸ್ರ್ಪಧಿಸುವುದಿಲ್ಲ ಎಂದು ಹೇಳಿದ್ದಾರೆ. ಅವರು ಕಾಂಗ್ರೆಸ್‍ಗೆ ಬರಲಿದ್ದಾರೆ. ಅಭ್ಯರ್ಥಿಗಳ ಕೊರತೆ ಇರುವುದರಿಂದ ತಮಗೆ ಆಹ್ವಾನ ನೀಡುತ್ತಿದ್ದು, ಅಲ್ಲಿಂದಲೇ ಸ್ರ್ಪಧಿಸುವಂತೆ ಒತ್ತಡ ಹೇರಲಾಗುತ್ತಿದೆ. ಆದರೆ ತಾವಿನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದರು
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

