ಬೆಂಗಳೂರು,ಏ.24: ಲೋಕಸಭೆ ಚುನಾವಣೆಯ ಪ್ರಚಾರದ ಕಾವು ತೀವ್ರಗೊಂಡಿರುವ ಬೆನ್ನಲ್ಲೇ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ (Raghvendra Bank) ಮತ್ತು ವಸಿಷ್ಠ ಬ್ಯಾಂಕ್ ಹಗರಣದ ಬಗ್ಗೆ ಸಿಬಿಐ ಅಥವಾ ತನಿಖೆಗೆ ವಿಶೇಷ ತನಿಖಾ ದಳ ರಚಿಸಿ ಠೇವಣಿದಾರರಿಗೆ ನ್ಯಾಯ ದೊರಕಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.
ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆಗೆ ಬಂದಿರುವ ಅವರನ್ನು ಭೇಟಿ ಮಾಡಿದ ಎರಡು ಬ್ಯಾಂಕುಗಳ ಠೇವಣಿದಾರರು ತಮಗೆ ನ್ಯಾಯ ದೊರಕಿಸಿ ಕೊಡುವಂತೆ ಮನವಿ ಸಲ್ಲಿಸಿದರು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಪ್ರಿಯಾಂಕಾ ಗಾಂಧಿ ಸಲಹೆ ನೀಡಿದ್ದಾರೆ.
ಪ್ರಿಯಾಂಕಾ ಅವರ ಸೂಚನೆಯ ಹಿನ್ನೆಲೆಯಲ್ಲಿ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಮತ್ತು ವಸಿಷ್ಠ ಬ್ಯಾಂಕ್ ಹಗರಣದ ತನಿಖೆಗೆ ವಿಶೇಷ ತನಿಖಾ ದಳ ರಚಿಸಿ ಠೇವಣಿದಾರರಿಗೆ ನ್ಯಾಯ ದೊರಕಿಸಲು ಕ್ರಮ ಕೈಗೊಳ್ಳುವುದಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕಟಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುರಾಘವೇಂದ್ರ ಸಹಕಾರ ಬ್ಯಾಂಕ್‍ನಲ್ಲಿ 3 ಲಕ್ಷಕ್ಕೂ ಹೆಚ್ಚು ಜನ ತಮ್ಮ ಖಾತೆಯಲ್ಲಿ ಉಳಿತಾಯಕ್ಕೆ ಹಣವನ್ನಿಟ್ಟಿದ್ದರು. ಅದು ಬಿಜೆಪಿ ನಾಯಕರ ಪಾಲಾಗಿದೆ. ಹೀಗಾಗಿ ತೊಂದರೆಗೆ ಸಿಲುಕಿದ ಬಹಳಷ್ಟು ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಟ್ಟು 300 ಕ್ಕೂ ಹೆಚ್ಚು ಪ್ರಾಣಹಾನಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಹಗರಣವನ್ನು ರಾಜ್ಯಸರ್ಕಾರ ಈಗಾಗಲೇ ಸಿಬಿಐ ತನಿಖೆಗೆ ಒಪ್ಪಿಸಿದೆ. ಆದರೆ ಹಗರಣದಲ್ಲಿ ಬಿಜೆಪಿ ನಾಯಕರೇ ಹೆಚ್ಚು ಭಾಗಿಯಾಗಿರುವುದರಿಂದಾಗಿ ಸಿಬಿಐ ಈವರೆಗೂ ತನಿಖೆ ಕೈಗೆತ್ತಿಕೊಂಡಿಲ್ಲ. ಬೇರೆಬೇರೆ ಪ್ರಕರಣಗಳಲ್ಲಿ ನಮ್ಮಂಥವರಿಗೆ ಕಿರುಕುಳ ಕೊಡುವುದರಲ್ಲಿ ಸಿಬಿಐ ತೊಡಗಿದೆ ಎಂದು ಆರೋಪಿಸಿದರು.
ಬ್ಯಾಂಕ್ ಠೇವಣಿದಾರರು ಇಂದು ಕಾಂಗ್ರೆಸ್‍ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಯವರನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡರು.ಈ ವೇಳೆ ಠೇವಣಿದಾರರಿಗೆ ಭರವಸೆ ನೀಡಿರುವ ಪ್ರಿಯಾಂಕ ಗಾಂ ಸಿಬಿಐ ಸೂಕ್ತ ತನಿಖೆ ನಡೆಸಿ ನ್ಯಾಯ ಕೊಡಿಸುವುದಾದರೆ ಕೊಡಿಸಿ. ಇಲ್ಲವಾದರೆ, ರಾಜ್ಯಸರ್ಕಾರವೇ ವಿಶೇಷ ತನಿಖಾ ದಳ ರಚನೆ ಮಾಡಿ ಸಂತ್ರಸ್ತರ ನೆರವಿಗೆ ಬರಬೇಕು ಎಂದು ಸೂಚನೆ ನೀಡಿದ್ದಾರೆ.
ಈ ವಿಷಯವಾಗಿ ತಮ್ಮೊಂದಿಗೂ ಚರ್ಚಿಸಿದ್ದು, ಮುಖ್ಯಮಂತ್ರಿಯವರಿಗೆ ಪತ್ರ ಬರೆಯುವುದಾಗಿ ಪ್ರಿಯಾಂಕ ಗಾಂಧಿ ಹೇಳಿರುವುದಾಗಿ ಡಿ.ಕೆ.ಶಿವಕುಮಾರ್ ವಿವರಿಸಿದರು.ಲೋಕಸಭಾ ಚುನಾವಣೆ ಬಳಿಕ ಕಾನೂನು ರೀತಿಯಲ್ಲಿ ಎಸ್‍ಐಟಿ ರಚಿಸಿ ನ್ಯಾಯ ಕೊಡಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

1 ಟಿಪ್ಪಣಿ
Your winning era begins the second you join – https://xglimepiride.com , Your pulse races faster than the reels .