Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BBMP ಅಕ್ರಮ ತನಿಖೆಗೆ S.I.T. | Latest Kannada News
    ಬೆಂಗಳೂರು

    BBMP ಅಕ್ರಮ ತನಿಖೆಗೆ S.I.T. | Latest Kannada News

    vartha chakraBy vartha chakraಆಗಷ್ಟ್ 7, 2023Updated:ಆಗಷ್ಟ್ 7, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.7- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ 2019 ರಿಂದ ಈವರೆಗೆ ನಡೆದಿರುವ ಹಲವು ಕಾಮಗಾರಿಗಳ ಬಗ್ಗೆ ಕೇಳಿ ಬಂದಿರು ಅಕ್ರಮ ಆರೋಪಗಳ ಕುರಿತು ತನಿಖೆಗೆ ನಾಲ್ವರು ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ದಳಗಳನ್ನು ರಚಿಸಲಾಗಿದೆ.
    ಹಿರಿಯ ಐಎಎಸ್ ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಲೋಕೋಪಯೋಗಿ ಇಲಾಖೆಯ ನಿವೃತ್ತ ಮುಖ್ಯ ಅಭಿಯಂತರರಾದ ದೊಡ್ಡಿಹಾಳ್, ಬಸವರಾಜ ಕೋಟಿ, ಕೆಪಿಟಿಸಿಎಲ್‍ನ ನಿವೃತ್ತ ಸಹಾಯಕ ಕಾರ್ಯಪಾಲಕ ಅಭಿಯಂತರ ಟಿ.ಪ್ರಭಾಕರ್ ಅನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

    ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಘನತ್ಯಾಜ್ಯ ನಿರ್ವಹಣೆ, ರಸ್ತೆ ಅಭಿವೃದ್ಧಿ ಓಎಫ್‍ಸಿ ಕೇಬಲ್ ಅಳವಡಿಕೆ, ಬೃಹತ್ ನೀರು ಕಾಲುವೆ ಕಾಮಗಾರಿ, ಕೇಂದ್ರ ವಲಯ ನಗರ ಯೋಜನೆಗಳ ನಕ್ಷೆ ಮಂಜೂರಾತಿ, ಸ್ವಾಧಿನಾನುಭವ ಪತ್ರ ನೀಡುವಿಕೆ,ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿನ ಕಾಮಗಾರಿಗಳು, ವಾರ್ಡ್ ಮಟ್ಟದ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ದೂರುಗಳನ್ನು ತನಿಖೆ ನಡೆಸಲು ಸೂಚಿಸಲಾಗಿದೆ.
    ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಒಎಫ್‍ಸಿ ಕೇಬಲ್ ಅಳವಡಿಕೆಗೆ ಅನುಮತಿ ನೀಡುವ ಬಗ್ಗೆ ಐಎಎಸ್ ಅಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ತನಿಖಾ ಸಮಿತಿ ರಚನೆಯಾಗಿದ್ದು, ಲೋಕೋಪಯೋಗಿ ನಿವೃತ್ತ ಪ್ರಧಾನ ಅಭಿಯಂತರ ಪ್ರಭಾಕರ್ ಡಿ.ಹಮ್ಮಿಗೆ, ನಿವೃತ್ತ ಮುಖ್ಯ ಅಭಿಯಂತರ ಕೆ.ಮೋಹನ್, ನಿವೃತ್ತ ಕಾರ್ಯಪಾಲಕ ಅಭಿಯಂತರರಾದ ಬಸವರಾಜ್ ಶಂಸಿ ಮಠ್, ಎನ್.ಎಸ್.ಮೋಹನ್ ಸದಸ್ಯರಾಗಿದ್ದಾರೆ.

    ಬೃಹತ್ ನೀರುಗಾಲುವೆ ಕಾಮಗಾರಿಗಳು ಹಾಗೂ ಕೇಂದ್ರ, ವಲಯ, ನಗರ ಯೋಜನೆ ವಿಭಾಗಗಳಲ್ಲಿ ನಕ್ಷೆ ಮಂಜೂರಾತಿ, ಸ್ವಾಧಿನಾನುಭವ ಪತ್ರ ನೀಡಿರುವ ಕುರಿತು ಐಎಎಸ್ ಅಧಿಕಾರಿ ಪಿ.ಸಿ.ಜಾಫರ್ ಅಧ್ಯಕ್ಷತೆಯಲ್ಲಿ ಮೂವರ ಸಮಿತಿ ರಚನೆಯಾಗಿದ್ದು, ಇಐಸಿಆರ್‍ ನ ನಿವೃತ್ತ ಕಾರ್ಯದರ್ಶಿ ಎಚ್.ಬಿ.ಸಿದ್ದಗಂಗಪ್ಪ, ಲೋಕೋಪಯೋಗಿ ಇಲಾಖೆಯ ನಿವೃತ್ತ ಮುಖ್ಯ ಅಭಿಯಂತರ ಎಚ್.ಆರ್.ರಾಮಕೃಷ್ಣ, ನಿವೃತ್ತ ಕಾರ್ಯಪಾಲಕ ಅಭಿಯಂತರ ಮಲ್ಲೇಶ್ ಸಮಿತಿಯಲ್ಲಿದ್ದಾರೆ.
    ಕೆರೆ ಅಭಿವೃದ್ಧಿ ಕಾಮಗಾರಿಗಳು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳು ಹಾಗೂ ವಾರ್ಡ್ ಮಟ್ಟದ ಕಾಮಗಾರಿಗಳ ತನಿಖಾ ಸಮಿತಿಗೆ ಐಎಎಸ್ ಅಧಿಕಾರಿ ಡಾ.ವಿಶಾಲ್ ಅವರು ಅಧ್ಯಕ್ಷರಾಗಿದ್ದು, ಲೋಕೋಪಯೋಗಿ ಇಲಾಖೆಯ ನಿವೃತ್ತ ಮುಖ್ಯ ಅಭಿಯಂತರ ಬೀಸೇಗೌಡ, ನಿವೃತ್ತ ಕಾರ್ಯಪಾಲಕ ಅಭಿಯಂತರರಾದ ಎಚ್.ಪಿ.ಪ್ರಕಾಶ್, ಶ್ರೀಕಾಂತ್, ಎಚ್.ಕುಮಾರ್, ಜಿ.ಎಸ್.ಗೋಪಿನಾಥ್ ಸದಸ್ಯರಾಗಿದ್ದಾರೆ ಈಗಾಗಲೇ ತನಿಖೆಗೆ ಒಳಪಡಿಸಿರುವ ಕಾಮಗಾರಿಗಳನ್ನು ಹೊರತುಪಡಿಸಿ ಉಳಿದವುಗಳನ್ನು ಸ್ಥಳ ಮತ್ತು ದಾಖಲಾತಿಗಳ ಪರಾಮರ್ಶೆಯೊಂದಿಗೆ ಆರೋಪಿತರ ಸ್ಪಷ್ಟ ಗುರುತಿಸುವಿಕೆಯ ಸಹಿತ ಪರಿಪೂರ್ಣ ವರದಿಯನ್ನು ಸೂಕ್ತ ಅಭಿಪ್ರಾಯ ಶಿಫಾರಸ್ಸಿನೊಂದಿಗೆ 30 ದಿನಗಳ ಒಳಗೆ ಸರ್ಕಾರಕ್ಕೆ ಸಲ್ಲಿಸಲು ಆದೇಶಿಸಲಾಗಿದೆ.

    ತನಿಖಾ ವ್ಯಾಪ್ತಿಗೆ ಕೆಲವು ನಿಬಂಧನೆಗಳನ್ನು ವಿಸಲಾಗಿದೆ. ಕೈಗೆತ್ತಿಕೊಳ್ಳಲಾದ ಕಾಮಗಾರಿಗಳಿಗೆ ಅಗತ್ಯ ಶಾಸನಬದ್ಧ ಅನುಮತಿಗಳನ್ನು ಪಡೆಯಲಾಗಿದೆಯೇ, ಕೆಟಿಪಿಪಿ ಕಾಯ್ದೆ ಪಾಲನೆ ಮತ್ತು ಸರ್ಕಾರದ ಅನುಮತಿ ಇದೆಯೇ, ಟೆಂಡರ್ ಪ್ರಕ್ರಿಯೆಗಳಲ್ಲಿ ನಿಯಮಾವಳಿಗಳನ್ನು ತಿರುಚುವುದು ಅಥವಾ ಸಡಿಲಗೊಳಿಸುವ ಮೂಲಕ ದುವ್ರ್ಯವಹಾರ ನಡೆಸಿ ಅನರ್ಹರಿಗೆ ಟೆಂಡರ್ ನೀಡಲಾಗಿದೆಯೇ, ನಿರ್ದಿಷ್ಟ ಗುತ್ತಿಗೆದಾರರ ಹೆಸರಿನಲ್ಲಿ ಕಾರ್ಯಾದೇಶ ನೀಡಿ ಬೇರೆಯವರಿಗೆ ಬಿಲ್ ಪಾವತಿ ಮಾಡಿರುವುದು ಸೇರಿದಂತೆ 16 ಅಂಶಗಳನ್ನು ತನಿಖೆ ನಡೆಸಲು ಸೂಚಿಸಲಾಗಿದೆ.

     

    Latest Kannada News Only at www.varthachakra.com 

     

    ರಶ್ಮಿಕಾ ಗೆ 5 ನಿಮಿಷಕ್ಕೆ 5 ಕೋಟಿ!

    Verbattle
    Verbattle
    Verbattle
    #kannada art Bangalore bbmp bbmp news crores kannada news m mi News SIT Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಅತಿಯಾದ ಅಮಲು ತಂದ ಆಪತ್ತು | Drunken Driving
    Next Article ತುರ್ತು ಕಾಮಗಾರಿಗೆ ಮಾತ್ರ ಹಣ – ಸಿ.ಎಂ.ಸಿದ್ದರಾಮಯ್ಯ ಭರವಸೆ | Siddaramiah
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Yhoith on ಫೆಬ್ರವರಿ 15, 2026 11:06 ಫೂರ್ವಾಹ್ನ

      mcluck Michigan mcluckcasinogm mr luck casino

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • LinwoodGah ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • LeonardReawn ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.