ಬೆಂಗಳೂರು,ಜ.4- ಕಳೆದ ಐದು ದಶಕಗಳಿಂದ ರಾಜ್ಯ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಮುತ್ಸದ್ಧಿ ರಾಜಕಾರಣಿ
ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು
ಸಕ್ರಿಯ ರಾಜಕಾರಣದಿಂದ ನಾನು ದೂರ ಸರಿಯುತ್ತಿದ್ದೇನೆ. ನಮಗೆ ನಮ್ಮ ವಯಸ್ಸಿನ ಬಗ್ಗೆ ಅರಿವಿರಬೇಕು. 90 ರ ವಯಸ್ಸಿನಲ್ಲಿ 50 ರ ತರಹ ನಟನೆ ಮಾಡಲು ಆಗಲ್ಲ.ಹೀಗಾಗಿ ನಾನು
ಸಾರ್ವಜನಿಕ ಜೀವನದಿಂದ ದೂರ ಇರಬೇಕು ಅಂತ ತೀರ್ಮಾನ ಮಾಡಿದ್ದೇನೆ ಎಂದು ಹೇಳಿದರು
ನಾನು ಎಲ್ಲೂ ಈಗ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ’ ನಾನೇ ರಿಟೈರ್ ಆಗಿರುವಾಗ ಭಾರತೀಯ ಜನತಾ ಪಕ್ಷ ನನ್ನನ್ನು ಕಡೆಗಣಿಸಿದೆ ಎಂಬ ಪ್ರಶ್ನೆ ಬರಲ್ಲ ಎಂದರು
ರಾಜಕೀಯ ನಿವೃತ್ತಿ ಬಗ್ಗೆ ಹೈಕಮಾಂಡ್ ನಾಯಕರ ಗಮನಕ್ಕೆ ತಂದಿದ್ದೀರಾ ಎಂಬ ಪ್ರಶ್ನೆಗೆ ಅವರು ನನಗೆ ಪೆನ್ಶನ್ ಕೊಡಲ್ಲ. ಹೀಗಾಗಿ ಅವರ ಗಮನಕ್ಕೆ ತಂದಿಲ್ಲ. ನಾನೇ ಸ್ವಯಂ ಪ್ರೇರಿತರಾಗಿ ರಿಟೈರ್ (ನಿವೃತ್ತಿ) ಆಗುತ್ತಿರುವಾಗ ಇದರ ಬಗ್ಗೆ ಹೇಳಲ್ಲ. ವಯಸ್ಸಿಗೆ ಬೆಲೆ ಕೊಟ್ಟು ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಮೈಸೂರು ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ದೇಶ ಕಂಡ ಮಹಾನ್ ವ್ಯಕ್ತಿ. ಅಭಿವೃದ್ಧಿ ವಿಚಾರವಾಗಿ ಅನೇಕ ಕೆಲಸ ಮಾಡಿದ್ದಾರೆ.ಇವರ ಹೆಸರನ್ನು ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಗೆ ಇಡಲು ಕೆಂದ್ರ ಹೆದ್ದಾರಿ ಮತ್ತು ಜಲಸಾರಿಗೆ ಸಚಿವ ನಿತಿನ್ ಗಡ್ಕರಿ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದೇನೆ. ಅವರು ಏನು ಮಾಡ್ತಾರೆ ಎಂಬುದನ್ನು ನೋಡಬೇಕು ಎಂದು ಹೇಳಿದರು.
Previous Articleಪ್ರಿಯಾಂಕ್ ಖರ್ಗೆ ಕಟ್ಟಿಹಾಕಲು ರಣತಂತ್ರ
Next Article ಸಿದ್ದರಾಮಯ್ಯ ಟೀಕೆ ಸೃಷ್ಟಿಸಿದ ಕೋಲಾಹಲ