Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾತಿ ಗಣತಿ ಸಮಾಜ ಜೋಡಿಸಲಿದೆ | Socio-Economic Caste Census
    ರಾಜಕೀಯ

    ಜಾತಿ ಗಣತಿ ಸಮಾಜ ಜೋಡಿಸಲಿದೆ | Socio-Economic Caste Census

    vartha chakraBy vartha chakraಅಕ್ಟೋಬರ್ 7, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು, ಅ.07: ಸಮಾಜದಲ್ಲಿನ ಅಸಮಾನತೆ ನಿವಾರಿಸಲು ಜಾತಿವಾರು ಜನಸಂಖ್ಯೆಯ ವಿವರ ಅಗತ್ಯ ಹೀಗಾಗಿ
    ಜಾತಿ ಗಣತಿ (Socio-Economic Caste Census) ಸಮಾಜವನ್ನು ವಿಭಜಿಸುವುದಿಲ್ಲ ಬದಲಿಗೆ ಅನ್ಯಾಯ ಸರಿ ಪಡಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಡತನ ನಿವಾರಣೆ ಕಾರ್ಯಕ್ರಮ ರೂಪಿಸುವಾಗ ಸಮ ಸಮಾಜ ನಿರ್ಮಾಣ ಮಾಡಬೇಕು. ಯಾವ ಜಾತಿ ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ಆರ್ಥಿಕವಾಗಿ, ಸಾಮಾಜಿಕವಾಗಿ ರಾಜಕೀಯವಾಗಿ ಯಾವ ಸ್ಥಿತಿಗತಿಯಲ್ಲಿದೆ ಎಂದು ತಿಳಿಯಬೇಕು ಇದಕ್ಕಾಗಿ ಜಾತಿ ಗಣತಿ ಅಗತ್ಯ ಎಂದರು.

    ನಮ್ಮದು ಜಾತಿ ವ್ಯವಸ್ಥೆಯ ಸಮಾಜವಾಗಿದೆ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಅಸಮಾನತೆ ಇರುವ ಜಾತಿಗಳನ್ನು ಮುಖ್ಯವಾಹಿನಿಗೆ ತರಲು ಅಂಕಿಅಂಶಗಳು ಅಗತ್ಯ. ಅದಕ್ಕಾಗಿ ಜಾತಿಗಣತಿ ಮಾಡಬೇಕು. ಸಾಮಾಜಿಕ- ಆರ್ಥಿಕ ಸಮೀಕ್ಷೆ ಹಾಗೂ ಜಾತಿ ಸಮೀಕ್ಷೆ ಆಗಬೇಕು. ಇದು ಖಂಡಿತವಾಗಿಯೂ ಸಮಾಜವನ್ನು ಒಡೆಯುವುದಿಲ್ಲ ಎಂದು ಅಭಿಪ್ರಾಯಪಟ್ಟರು.
    ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವರದಿ ಪಡೆಯಲಿಲ್ಲ. ಈಗ ಬೇರೆ ಅಧ್ಯಕ್ಷ ರಿದ್ದು, ಅವರಿಗೆ ಕಾಂತರಾಜು ವರದಿ ಇದ್ದಂತೆಯೇ ಮಾಡಿಕೊಡುವಂತೆ ಹೇಳಿದ್ದೇನೆ. ಅವರು ನವೆಂಬರ್ ನಲ್ಲಿ ವರದಿ ನೀಡುವುದಾಗಿ ಹೇಳಿದ್ದಾರೆ ಎಂದರು.

    ತೀರಾ ಹಿಂದುಳಿದ ಸಮುದಾಯಗಳಿಗೆ ಪ್ರತ್ಯೇಕ ವರ್ಗ ನಿಗಧಿ ಪಡಿಸಲು ಬೇಡಿಕೆ ಕೇಳಿಬಂದಿದೆ ರಾಷ್ಟ್ರೀಯ ಮಟ್ಟದಲ್ಲಿ ಪ್ರತ್ಯೇಕ ವರ್ಗ ಬೇಕು ಎಂಬ ಆಗ್ರಹವಿದೆ.ಜಾತಿವಾರು ಗಣತಿ ವಿವರ ಬಂದ ನಂತರ ಈ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಎಲ್ಲರನ್ನೂ ಒಳಗೊಂಡ ಸಮಾಜ, ಸಬ್ ಕೆ ಸಾಥ್, ಸಬ್ ಕಾ ವಿಕಾಸ್ ಎನ್ನುತ್ತಾರೆ. ಮುಸಲ್ಮಾನರಿಗೆ ಟಿಕೆಟ್ ಕೊಡದೆ ಹೋದರೆ ಸಬ್ ಕೆ ಸಾಥ್ ಆಗುತ್ತದೆಯೇ, ಎಲ್ಲರನ್ನೂ ಒಳಗೊಂಡಂತೆ ಆಗುತ್ತದೆಯೇ? ಹೇಳುವುದಕ್ಕೂ, ಮಾಡುವುದಕ್ಕೂ ವ್ಯತ್ಯಾಸವಿದೆ. ಹೇಳೋದು ಬೇರೆ, ವಸ್ತುಸ್ಥಿತಿ ಬೇರೆ ಎಂದರು.

    4860 ಕೋಟಿ ನೆರವು:
    ರಾಜ್ಯದ ಬರಪೀಡಿತ ಪ್ರದೇಶದಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ 4860 ಕೋಟಿ ರೂಪಾಯಿಗಳ ನೆರವನ್ನು ಕೋರಿದ್ದೇವೆ. ಆದರೆ 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಸೇರಿ ಒಟ್ಟು 3000೦ ಕೋಟಿ ರೂ.ಗಳಿಗೂ ನಷ್ಟ ಉಂಟಾಗಿದೆ. ಎನ್. ಡಿ.ಆರ್.ಎಫ್ ನಿಯಮಗಳ ಪ್ರಕಾರ 4860 ಕೋಟಿ ರೂ.ಗಳನ್ನು ಕವೆ ಎಂದು ತಿಳಿಸಿದರು
    ಕೇಂದ್ರ ಬರ ಅಧ್ಯಯನ ತಂಡ ಮೂರು ತಂಡಗಳಾಗಿ 11 ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಅವರು ವರದಿ ನೀಡಿದ ಆಧಾರದ ಮೇಲೆ ಕೇಂದ್ರ ಸರ್ಕಾರ ಪರಿಹಾರ ನಿಗದಿ ಮಾಡಲಿದೆ ಎಂದರು

    caste census CEN Government Karnataka karnataka census m mi News Politics Socio-Economic Caste Census Trending Varthachakra ನರೇಂದ್ರ ಮೋದಿ ನ್ಯಾಯ ಬೆಳೆ ನಷ್ಟ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕಿದ ಖದೀಮರು | Bitcoin
    Next Article ಬೆಂಗಳೂರು ಸಂಚಾರ ದಟ್ಟಣೆಗೆ ಮದ್ದು | Namma Bengaluru
    vartha chakra
    • Website

    Related Posts

    ಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus

    ಡಿಸೆಂಬರ್ 5, 2023

    ವಿಜಯೇಂದ್ರ ಭಾವಮೈದ ಸೇರಿ ಹಲವು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ | Vijayendra

    ಡಿಸೆಂಬರ್ 5, 2023

    ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura

    ಡಿಸೆಂಬರ್ 5, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus

    ವಿಜಯೇಂದ್ರ ಭಾವಮೈದ ಸೇರಿ ಹಲವು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ | Vijayendra

    ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura

    ಚಿಕನ್ ಇಲ್ಲದ ಬಿರಿಯಾನಿ ಕೊಟ್ಟ ತಪ್ಪಿಗೆ ಏನಾಯ್ತು ಗೊತ್ತಾ | Chicken Biryani

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Veronapxc ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    • Prokat_gkEr ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    • Vikiwkj ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    Latest Kannada News

    ಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus

    ಡಿಸೆಂಬರ್ 5, 2023

    ವಿಜಯೇಂದ್ರ ಭಾವಮೈದ ಸೇರಿ ಹಲವು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ | Vijayendra

    ಡಿಸೆಂಬರ್ 5, 2023

    ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura

    ಡಿಸೆಂಬರ್ 5, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Did Kamal Nath cause the defeat of Congress in MP?
    ಕಮಲ್ ನಾಥ್ ಹೇಗೆ ಕಾಂಗ್ರೆಸ್ ಸೋಲಿಸಿದರು ಗೊತ್ತಾ? #kannada
    Subscribe