ಬೆಂಗಳೂರು, ಡಿ.28- ಲೋಕಸಭೆ ಚುನಾವಣೆಗೆ (Loksabha 2024) ರಾಜಕೀಯ ಪಕ್ಷಗಳು ಭರದ ಸಿದ್ದತೆ ನಡೆಸಿರುವ ಬೆನ್ನಲ್ಲೇ ಹಲವು ನಾಯಕರು ಪಕ್ಷಾಂತರ ಪರ್ವಕ್ಕೆ ಮುನ್ನುಡಿ ಇಡ ತೊಡಗಿದ್ದಾರೆ.
ಬಿಜೆಪಿ ನಾಯಕತ್ವದ ವಿರುದ್ಧ ಬೇಸರಗೊಂಡು ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿರುವ ಶಾಸಕರು ಹಾಗೂ ಮಾಜಿ ಸಚಿವರಾದ ಶಿವರಾಮ್ ಹೆಬ್ಬಾರ್ ಮತ್ತು ಎಸ್.ಟಿ.ಸೋಮಶೇಖರ್ ಪಕ್ಷ ತೊರೆಯಲು ಮುಂದಾಗಿದ್ದಾರೆ.
ಈ ಕುರಿತಂತೆ ಅವರು ಈಗಾಗಲೇ ಕಾಂಗ್ರೆಸ್ ನಾಯಕರ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಸೇರಲಿರುವ ಈ ಇಬ್ಬರೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.
ಶಿವರಾಮ ಹೆಬ್ಬಾರ್ ಕಾರವಾರ ಲೋಕಸಭಾ ಕ್ಷೇತ್ರ ಹಾಗೂ ಎಸ್.ಟಿ.ಸೋಮಶೇಖರ್ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕಣಕ್ಜಿಳಿಯುವ ಸಾಧ್ಯತೆ ಇದೆ.
ಬಿಜೆಪಿ ಗೆ ರಾಜೀನಾಮೆ ನೀಡಲಿರುವ ಇಬ್ಬರಿಗೂ ಸರ್ಕಾರದಲ್ಲಿ ಸಂಪುಟ ದರ್ಜೆ ಸ್ಥಾನಮಾನದ ಅಧಿಕಾರ ನೀಡುವ ಭರವಸೆ ಸಿಕ್ಕಿದ್ದು, ಸೋಮಶೇಖರ್ ಅವರಿಗಾಗಿ ಆಡಳಿತ ಸುಧಾರಣೆ ಆಯೋಗದಂತಹ ಉನ್ನತ ಹುದ್ದೆ ಸಿಗಲಿದ್ದು,ಹೆಬ್ಬಾರ್ ಅವರಿಗಾಗಿ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಪಡೆ ರಚನೆಯಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಇವರ ಪಕ್ಷ ಸೇರ್ಪಡೆ ವಿಚಾರದಲ್ಲಿ ಹೈಕಮಾಂಡ್ ಮತ್ತು ಸ್ಥಳೀಯ ಮಟ್ಟದ ನಾಯಕರ ಜೊತೆ ಮಾತುಕತೆ ನಡೆಸುತ್ತಿರುವ ಪರಮೇಶ್ವರ್ ಅವರನ್ನು ಇಂದು ಬೆಳಿಗ್ಗೆ ಇಬ್ಬರೂ ನಾಯಕರು ಭೇಟಿ ಮಾಡಿ ಮಾತುಕತೆ ನಡೆಸಿದರು.
ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದ ವೇಳೆ ಈ ಇಬ್ಬರೂ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದು,ಈಗಲೂ ಅದೇ ಅನ್ಯೋನ್ಯ ಸಂಬಂಧವನ್ನು ಹೊಂದಿದ್ದಾರೆ ಈ ಹಿನ್ನೆಲೆಯಲ್ಲಿ ಪರಮೇಶ್ವರ್ ಅವರೇ ಇವರ ಸೇರ್ಪಡೆ ಸೇರಿದಂತೆ ಇತರೆ ವಿಷಯವಾಗಿ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಇನ್ನೂ ಗೃಹ ಸಚಿವರ ಭೇಟಿ ಬಳಿಕ ಶಾಸಕ ಎಸ್.ಟಿ.ಸೋಮಶೇಖರ್ ಸುದ್ದಿಗಾರರೊಂದಿಗೆ
ಮಾತನಾಡಿ,ಈ ಭೇಟಿಯಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆಯಲಿಲ್ಲ.ನಮ್ಮ ಕ್ಷೇತ್ರದ ಹಲವು ಅಭಿವೃದ್ಧಿ ಯೋಜನೆಗಳ ಕುರಿತು ಮಾತನಾಡಲು ಬಂದಿದ್ದೆವು ಎಂದು ಹೇಳಿದರು
ನನ್ನ ಕ್ಷೇತ್ರದ ಮಾಗಡಿ ರಸ್ತೆಗೆ ಹೊಸ ಪೊಲೀಸ್ ಠಾಣೆ ಬೇಕಾಗಿದೆ. ಅಂದ್ರಹಳ್ಳಿ ಬ್ಯಾಡರಹಳ್ಳಿ ವಿಭಜನೆ ಆಗಬೇಕು. ಈ ವಿಚಾರವಾಗಿ ಗೃಹ ಸಚಿವರನ್ನ ಭೇಟಿಯಾಗಿದ್ದೆ ಎಂದರು.
ಇನ್ನು ಬಿಜೆಪಿಯಲ್ಲಿ ಸದ್ಯ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸಂಸದ ಡಿ.ವಿ.ಸದಾನಂದಗೌಡ ಸರಿಯಾಗಿಯೇ ಹೇಳಿದ್ದಾರೆ. ಯಾರು ಪಕ್ಷ ವಿರುದ್ದವಾಗಿ ನಡೆದುಕೊಳ್ಳುತ್ತಾರೋ ಅವರ ಮೇಲೆ ಕ್ರಮ ಆಗಲಿ ಎಂದು ಆಗ್ರಹಿಸಿದರು.
ಶಿವರಾಮ ಹೆಬ್ಬಾರ್ ಮಾತನಾಡಿ ನಾವೇನಾದರೂ ಪಕ್ಷ ವಿರೋಧಿ ಚಟುವಟಿಕೆ ಮಾಡ್ತಿದ್ದೀವಾ? ಬಿಜೆಪಿಯಲ್ಲಿ ಹೇಳೋರು ಕೇಳುವವರು ಇಲ್ಲ ಎಂಬುವುದು ತಪ್ಪು. ವಿಜಯೇಂದ್ರ ಅಧ್ಯಕ್ಷರಾಗಿದ್ದಾರೆ. ಅಶೋಕ್ ವಿಪಕ್ಷ ನಾಯಕರಾಗಿದ್ದಾರೆ. ಪಕ್ಷದಲ್ಲಿ ಒಳ್ಳೆ ಕಮಿಟಿ ಮಾಡಿದ್ದಾರೆ. ರಾಷ್ಟ್ರೀಯ ಪಕ್ಷ ಬಿಜೆಪಿಯನ್ನು ದಿನದಿಂದ ದಿನಕ್ಕೆ ಸರಿ ಮಾಡುತ್ತಿದ್ದಾರೆ ಎಂದರು.


1 ಟಿಪ್ಪಣಿ
Нужен проектор? projector24.ru/ большой выбор моделей для дома, офиса и бизнеса. Проекторы для кино, презентаций и обучения, официальная гарантия, консультации специалистов, гарантия качества и удобные условия покупки.