ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪೌಲಾ ಮೈನೊ ಅವರು ಶನಿವಾರ ಇಟಲಿಯಲ್ಲಿರುವ ಅವರ ಸ್ವಗೃಹದಲ್ಲಿ ನಿಧನರಾದರು. ಅವರ ಅಂತ್ಯಕ್ರಿಯೆ ಭಾನುವಾರ ನಡೆಯಿತು ಎಂದು ಕಾಂಗ್ರೆಸ್ ನವದೆಹಲಿಯಲ್ಲಿ ತಿಳಿಸಿದೆ.
ಕಾಂಗ್ರೆಸ್ ಅಧ್ಯಕ್ಷರು ಆಗಸ್ಟ್ 23 ರಂದು ತಮ್ಮ 90 ರ ಹರೆಯದ ತಮ್ಮ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿ ಮಾಡಲು ತೆರಳಿದ್ದರು.
“ಶ್ರೀಮತಿ ಸೋನಿಯಾ ಗಾಂಧಿಯವರ ತಾಯಿ, ಶ್ರೀಮತಿ ಪಾವೊಲಾ ಮೈನೊ ಅವರು ಆಗಸ್ಟ್ ಶನಿವಾರದಂದು ಇಟಲಿಯಲ್ಲಿ ತಮ್ಮ ಮನೆಯಲ್ಲಿ ನಿಧನರಾದರು. ಭಾನುವಾರ ಅಂತ್ಯಕ್ರಿಯೆ ನಡೆಯಿತು” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ಸೋನಿಯಾ ಗಾಂಧಿ, ಅವರ ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಈಗಾಗಲೇ ವಿದೇಶದಲ್ಲಿದ್ದು, ಸೋನಿಯಾ ಗಾಂಧಿ ಹುಟ್ಟೂರಿಗೆ ಭೇಟಿ ನೀಡಿದ್ದಾರೆ.