ಬೆಂಗಳೂರು,ಫೆ. 21- ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ.
ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.
ನಾಡಗೀತೆ ಹಾಡುವ ಕುರಿತಂತೆ ಕೆಲವು ನಿಯಮ ಮಾರ್ಪಾಡು ಮಾಡಿದ್ದು ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳು ಅಧಿಕೃತ ಕಾರ್ಯಕ್ರಮಗಳನ್ನು ಆಯೋಜಿಸುವ ಪ್ರಾರಂಭದಲ್ಲಿ ನಾಡಗೀತೆಯನ್ನು ಹಾಡಬೇಕೆಂದು ಸರ್ಕಾರ ತಿದ್ದುಪಡಿ ಆದೇಶದಲ್ಲಿ ತಿಳಿಸಿದೆ.
ಇದಕ್ಕೂ ಮುನ್ನ 2024ರ ಜನವರಿ 7ರಂದು ಹೊರಡಿಸಿದ್ದ ಆದೇಶದಲ್ಲಿ ‘ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಆಯೋಜಿಸುವ ಪ್ರಾರಂಭದಲ್ಲಿ ಹಾಡಬೇಕು’ ಎಂದು ತಿಳಿಸಲಾಗಿತ್ತು. ಆದರೆ ಯಾವ ಶಾಲೆಗಳೆಂದು ನಿರ್ದಿಷ್ಟವಾಗಿ ಹೇಳಿರಲಿಲ್ಲ.

1 ಟಿಪ್ಪಣಿ
Mostbet – o cassino que entende o que o jogador brasileiro quer – https://mostbetpt.pro/mostbet-app/ , Mostbet te dГЎ o empurrГЈo perfeito para viver grandes emoГ§Гµes .