ಚಿತ್ರದುರ್ಗ, ಅ.6 – ರಾಜ್ಯದಲ್ಲಿ ಮಳೆ ಅಭಾವದಿಂದಾಗಿ ತಲೆ ದೋರಿದ ಬರಪರಿಸ್ಥಿತಿಯಿಂದ ಸುಮಾರು 30 ಸಾವಿರ ಕೋಟಿ ರೂ. ಬೆಳೆಹಾನಿಯಾಗಿದೆ.ಈ ಹಾನಿಗೆ ಪರಿಹಾರ ಹಾಗೂ ಅಗತ್ಯ ನೆರವು ಕಲ್ಪಿಸಲು ರಾಷ್ಟ್ರೀಯ ಪ್ರಾಕೃತಿಕ ವಿಕೋಪ ಮಾರ್ಗಸೂಚಿಯಂತೆ 4860 ಕೋಟಿ ರೂಪಾಯಿ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಚಿತ್ರದುರ್ಗದ ಮುರುಘಾಮಠದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ಬರಪರಿಸ್ಥಿತಿಯ ಅಧ್ಯಯನಕ್ಕಾಗಿ ಬಂದಿರುವ ಕೇಂದ್ರ ಅಧ್ಯಯನ ತಂಡಕ್ಕೆ ಈ ಕುರಿತು ಎಲ್ಲಾ ಮಾಹಿತಿ ನೀಡಿರುವುದಾಗಿ ತಿಳಿಸಿದರು.
ಕೇಂದ್ರದ ಅಧ್ಯಯನ ತಂಡಕ್ಕೆ ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯ ವಸ್ತುಸ್ಥಿತಿಯನ್ನು ಈಗಾಗಲೇ ವಿವರಿಸಲಾಗಿದೆ. ಒಟ್ಟು 236 ತಾಲ್ಲೂಕುಗಳಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಸುಮಾರು 30 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಬೆಳೆಹಾನಿ ಸಂಭವಿಸಿದೆ. 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ಶೇ. 52 ರಷ್ಟು ಬೆಳೆಹಾನಿಯಾಗಿದೆ. ಕೃಷ್ಣಾ ಮೇಲ್ದಂಡೆ ಹಾಗೂ ನಾರಾಯಣಪುರ ಜಲಾಶಯಗಳನ್ನು ಹೊರತುಪಡಿಸಿ , ಕಾವೇರಿ ಸೇರಿದಂತೆ ಇನ್ನುಳಿದ ಜಲಾನಯನ ಪ್ರದೇಶಗಳಲ್ಲಿ ನೀರಿಲ್ಲ ಎಂಬ ವಾಸ್ತವಿಕ ಸ್ಥಿತಿ ವಿವರಿಸಿರುವುದಾಗಿ ತಿಳಿಸಿದರು
ಈ ಪ್ರದೇಶದಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ಕೇಂದ್ರದ ಮಾರ್ಗಸೂಚಿಯಂತೆ 4860 ಕೋಟಿ ರೂ.ಗಳ ಪರಿಹಾರವನ್ನು ಕೋರಲಾಗಿದೆ ಎಂದರು.
ರಾಜ್ಯದಲ್ಲಿ ಈ ಬಾರಿ ಹಸಿರು ಬರ ಉಂಟಾಗಿದೆ. ಕೇಂದ್ರದ ಅಧ್ಯಯನ ತಂಡ ಮೂರು ತಂಡಗಳಲ್ಲಿ ರಾಜ್ಯದ 11 ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ. ಅವರು ತಮ್ಮ ವರದಿ ಸಲ್ಲಿಸಿದ ನಂತರ ಅದರ ಆಧಾರದಲ್ಲಿ ಕೇಂದ್ರ ಪರಿಹಾರ ನೀಡಲಿದೆ ಎಂದು ತಿಳಿಸಿದರು.
ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನದಲ್ಲಿನ ವಿಳಂಬವಾಗುತ್ತಿದೆ. ಹಿಂದಿನ ಸರ್ಕಾರದವರು ಈ ಯೋಜನೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ, 5300 ಕೋಟಿ ರೂ. ಬಿಡುಗಡೆ ಮಾಡಲಿದೆ ಎಂದಿದ್ದರು. ಆದರೆ ಇದುವರೆಗೆ ಕೇಂದ್ರದಿಂದ ಯಾವುದೇ ಹಣ ಬಿಡುಗಡೆಯಾಗಿಲ್ಲ. ಈ ಮೊತ್ತವನ್ನು ಆದಷ್ಟು ಬೇಗನೆ ಬಿಡುಗಡೆಗೊಳಿಸುವಂತೆ ಕೇಂದ್ರಕ್ಕೆ ಮತ್ತೊಮ್ಮೆ ಕೋರಲಾಗಿದೆ ಎಂದು ಹೇಳಿದರು
ನಮ್ಮ ಸರ್ಕಾರವು ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ವಿಶೇಷ ಪ್ರಾಧಾನ್ಯತೆ ನೀಡಲಾಗುವುದು. ಪ್ರಸಕ್ತ ವರ್ಷ ಹಾಗೂ ಮುಂದಿನ ವರ್ಷವೂ ಕೂಡ ಈ ಯೋಜನೆಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.


1 ಟಿಪ್ಪಣಿ
This is where ordinary nights become extraordinary – https://gntopama.com , Your arrival just made the odds sweat .