ಬೆಂಗಳೂರು, ಅ.12- ರಾಜ್ಯದ ಬಹುತೇಕ ಎಲ್ಲಾ ಕಡೆ ಆಂಡ್ರಾಯ್ಡ್ ಪೋನ್ ಗಳಿಗೆ ವೈಬ್ರೇಟ್ (Mobile Vibrate) ಮೂಲಕ ಎಚ್ಚರಿಕೆಯ ಸಂದೇಶ ರವಾನೆಯಾಗಿ ಅನೇಕರು ತಮ್ಮ ಪೋನ್ ಗೆ ಏನೋ ಆಗಿದೆ ಎಂದು ಗಾಭರಿಗೊಳಗಾಗಿದ್ದಾರೆ.
ಈ ಕುರಿತಂತೆ ದೂರ ಸಂಪರ್ಕ ಇಲಾಖೆ ಇದೀಗ ಸ್ಪಷ್ಟನೆಯೊಂದನ್ನು ನೀಡಿದ್ದು,ಯಾರೂ ಕೂಡ ಗಾಭರಿ ಪಡಬೇಕಾದ ಅಗತ್ಯವಿಲ್ಲ ಎಂದು ಸ್ಪಷ್ಟ ಪಡಿಸಿದೆ.
ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಎಚ್ಚರಿಕೆ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಎಲ್ಲಾ ಮೊಬೈಲ್ ಬಳಕೆದಾರರಿಗೆ ಪ್ರಾಯೋಜಿಕ ಸಂದೇಶವೊಂದನ್ನು ರವಾನಿಸಿದೆ. ಇಂದು ಬೆಳಿಗ್ಗೆ ದೇಶಾದ್ಯಂತ ಬಹುತೇಕರ ಮೊಬೈಲ್‍ಗಳಿಗೆ ಈ ರೀತಿಯ ಸಂದೇಶಗಳು ಬಂದಿವೆ. ಇದು ಕೇಂದ್ರ ಸರ್ಕಾರದ ದೂರ ಸಂಪರ್ಕ ಇಲಾಖೆಯಿಂದ ಸೇಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶವಾಗಿದೆ.
ಇದು ನೆರೆ, ಭೂಕಂಪದಂತಹ ಪ್ರಾಕೃತಿಕ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ಸಲುವಾಗಿ ಪರೀಕ್ಷಿಸಲಾಗಿದೆ. ಇತ್ತೀಚೆಗೆ ಇಸ್ರೇಲ್ ಮೇಲೆ ಹಮಾಸ್ ಉಗ್ರರ ದಾಳಿ ನಡೆದಿದೆ. ಆಫ್ಘನಿಎಂದು ನದಲ್ಲಿ ಭೂಕಂಪ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಇಂತಹ ಯಾವುದೇ ತುರ್ತು ಪರಿಸ್ಥಿತಿಗಳಲ್ಲಿ ನಾಗರಿಕರನ್ನು ಸುರಕ್ಷಿತೆಯಿಂದಿಡಲು ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಈ ಸಂದೇಶ ವೈರ್‍ಲೆಸ್ ತಂತ್ರಜ್ಞಾನವನ್ನು ಹೊಂದಿದೆ. ಸಾರ್ವಜನಿಕರಿಗೆ ಸಕಾಲಿಕ ಹಾಗೂ ತ್ವರಿತ ಮಾಹಿತಿ ರವಾನೆ ಮಾಡಲಿದೆ.
ನಿಮ್ಮ ಕಡೆಯಿಂದ ಯಾವುದೇ ಕ್ರಿಯೆಯ ಅಗತ್ಯವಿಲ್ಲದ ಕಾರಣ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಾರಿಗೊಳಿಸುತ್ತಿರುವ ಪ್ಯಾನ್ ಇಂಡಿಯಾ ತುರ್ತು ಎಚ್ಚರಿಕೆಯ ಸಂದೇಶವನ್ನು ಪರೀಕ್ಷಿಸಲು ಈ ಸಂದೇಶವನ್ನು ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ತುರ್ತು ಸಂದರ್ಭದಲ್ಲಿ ಸಕಾಲಿಕ ಎಚ್ಚರಿಕೆಗಳನ್ನು ಒದಗಿಸುವ ಗುರಿಯನ್ನು ಹೊಂದಲಾಗಿದೆ ಎಂದು ಸ್ಪಷ್ಟನೆಯಲ್ಲಿ ನಮೂದಿಸಲಾಗಿದೆ.