Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಬ್ಬಿನ ಬೆಲೆ ನಿರ್ಧಾರದ ಅಧಿಕಾರ CMಗೆ
    ರಾಜ್ಯ

    ಕಬ್ಬಿನ ಬೆಲೆ ನಿರ್ಧಾರದ ಅಧಿಕಾರ CMಗೆ

    vartha chakraBy vartha chakraಅಕ್ಟೋಬರ್ 15, 2022Updated:ಅಕ್ಟೋಬರ್ 15, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಪ್ರಸಕ್ತ ಹಂಗಾಮಿಗೆ ಕಬ್ಬಿನ ದರ ನಿಗದಿ ಸಂಬಂಧ ರಾಜ್ಯ ಸರ್ಕಾರ ಕರೆಯಲಾಗಿದ್ದ ಕಬ್ಬು ಬೆಳೆಗಾರರ ಪ್ರತಿನಿಧಿಗಳು ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ಒಮ್ಮತಕ್ಕೆ ಬರಲು ವಿಫಲವಾಗಿದ್ದು ಅಂತಿಮ ನಿರ್ಧಾರದ ಜವಾಬ್ದಾರಿ ಮುಖ್ಯಮಂತ್ರಿ ಹೆಗಲೇರಿದೆ.
    ಕಬ್ಬು ದರ ನಿಗದಿ ಸಂಬಂಧಿಸಿದಂತೆ ಸಕ್ಕರೆ ಸಚಿವ ಶಂಕರ ಪಾಟೀಲ ಮುನ್ನೇನಕೊಪ್ಪ ಸಭೆ ನಡೆಸಿದರು ಇದರಲ್ಲಿ ರೈತರು ಪ್ರತಿ ಟನ್ ಕಬ್ಬಿಗೆ ₹5,500 ದರ ನಿಗದಿಪಡಿಸಬೇಕು. ಕಟಾವು ಮತ್ತು ಸಾಗಣೆ ವೆಚ್ಚವನ್ನು ರೈತರಿಗೆ ಹೊರೆಯಾಗದಂತೆ ನಿದಿ ಮಾಡಬೇಕು ಎಂದು ಪಟ್ಟು ಹಿಡಿದರೆ, ಸಕ್ಕರೆ ಕಾರ್ಖಾನೆ ಮಾಲೀಕರು ಪ್ರತಿ ಟನ್ ಕಬ್ಬಿಗೆ 3,500ಕ್ಕಿಂತ ಹೆಚ್ಚು ದರ ನೀಡುವುದು ಅಸಾಧ್ಯ ಎಂದರು.
    ಸಕ್ಕರೆ ಕಾರ್ಖಾನೆಯ ಮಾಲೀಕರ ಪ್ರತಿನಿಧಿ ಹೇಳಿಕೆಗೆ ರೈತ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.
    ಸುಮಾರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಸಭೆ ನಡೆಸಿದ ಸಚಿವರು, ರೈತ ಮುಖಂಡರು ಮತ್ತು ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳ ಅಭಿಪ್ರಾಯ ಆಲಿಸಿ,ಒಮ್ಮತ ಮೂಡಿಸುವ ಪ್ರಯತ್ನ ನಡೆಸಿದರೂ ಸಾಧ್ಯವಾಗಲಿಲ್ಲ ‌.
    ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತಮಾಡಿದ ಅವರು, ‘ಶನಿವಾರದ ಸಭೆಯ ವಿವರಗಳನ್ನು ಮುಖ್ಯಮಂತ್ರಿಯವರಿಗೆ ನೀಡಲಾಗುವುದು. ಅವರ ನೇತೃತ್ವದಲ್ಲಿ ಸಭೆ ನಡೆಸಿ ದರ ನಿಗದಿಪಡಿಸಲಾಗುವುದು’ ಎಂದರು.
    ಕೋಡಿಹಳ್ಳಿ ಫೈಟ್:
    ಇದಕ್ಕೂ ಮುನ್ನ ಸಭೆಯಲ್ಲಿ ರೈತ‌ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಭಾಗವಹಿಸಿರುವುದಕ್ಕೆ ರೈತ ಸಂಘದ ಮತ್ತೊಂದು ಬಣ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಕೆಲಕಾಲ‌ ಗದ್ದಲ‌ ನಡೆಯಿತು.
    ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಗುರುತರವಾದ ಆರೋಪಗಳಿವೆ. ಅವರಿಂದಾಗಿ ರೈತ ಮುಖಂಡರನ್ನು ಅನುಮಾನದಿಂದ ನೋಡುವ ಸನ್ನಿವೇಶ ನಿರ್ಮಾಣವಾಗಿದೆ. ಆದ್ದರಿಂದ ಅವರನ್ನು ಹೊರಗಿಟ್ಟು ಸಭೆ ನಡೆಸಬೇಕು. ಇಲ್ಲವಾದರೆ ನಾವು ಸಭೆಯಿಂದ ಹೊರ ಹೋಗುತ್ತೇವೆ’ ಎಂದರು.
    ಗುರುತರ ಆರೋಪ ಎದುರಿಸುತ್ತಿರುವವರು, ಕ್ರಿಮಿನಲ್ ಪ್ರಕರಣ ಹೊಂದಿರುವವರನ್ನೂ ಸಭೆಗೆ ಆಹ್ವಾನಿಸಲಾಗಿದೆ. ಇದು ಸರಿಯಲ್ಲ’ ಎಂದು ಮಂಡ್ಯ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆಂಪೂಗೌಡ ಹೇಳಿದರು.
    ತಮ್ಮ ವಿರುದ್ಧದ ಆರೋಪಕ್ಕೆ ಉತ್ತರಿಸಿದ ಚಂದ್ರಶೇಖರ್, ‘ವೈಯಕ್ತಿಕವಾದ ಆರೋಪಗಳನ್ನು ಸಭೆಯಲ್ಲಿ ಬಳಸಬೇಡಿ. ನನ್ನ ವಿರುದ್ಧದ ಆರೋಪಗಳು ಸಾಬೀತಾದರೆ ಶಿಕ್ಷೆ ಅನುಭವಿಸಲು ಸಿದ್ಧ ಎಂದು ಮುಖ್ಯಮಂತ್ರಿಯವರಿಗೆ ಈಗಾಗಲೇ ಪತ್ರ ನೀಡಿದ್ದೇನೆ. ವೈಯಕ್ತಿಕ ಆರೋಪ ಎಳೆದು ತಂದು ಸಭೆಗೆ ಅಡ್ಡಿಪಡಿಸಬಾರದು’ ಎಂದರು.
    ಚಂದ್ರಶೇಖರ್ ಬೆಂಬಲಿಗರು ಇನ್ನೊಂದು ಗುಂಪಿನ‌ ವಿರುದ್ಧ ವಾಗ್ದಾಳಿ ಆರಂಭಿಸಿತು. ಮತ್ತೊಂದು ಗುಂಪು ಕೂಡ ವಾಕ್ಸಮರ ನಡೆಸಿತು.
    ಸಭೆಯನ್ನು ನಡೆಸಲು ಅವಕಾಶ ನೀಡುವಂತೆ ಸಚಿವರು ಪದೇ ಪದೇ ಮನವಿ ಮಾಡಿದರು.
    ಈ ವೇಳೆ ಮಧ್ಯ ಪ್ರವೇಶಿಸಿದ ರೈತ ನಾಯಕಿ ಸುನಂದಾ ಜಯರಾಂ, ‘ಕಬ್ಬಿನ ದರ ನಿಗದಿ ಮತ್ತು ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಸಭೆಯ ಪ್ರಮುಖ ಕಾರ್ಯಸೂಚಿ‌. ಆ ಕುರಿತು ಮೊದಲು ಚರ್ಚೆ ನಡೆಯಲಿ. ಉಳಿದ ವಿಷಯವನ್ನು ರೈತ ಸಂಘದ ಮುಖಂಡರು ಸೇರಿ ಚರ್ಚಿಸೋಣ’ ಎಂದು ಹೇಳಿದರು.ಸುನಂದಾ ಅವರ ಮಾತನ್ನು ಸಭೆಯಲ್ಲಿದ್ದ ಎಲ್ಲರೂ ಒಪ್ಪಿಕೊಂಡರು. ನಂತರ ಸಭೆ ಮುಂದುವರಿಯಿತು

    Verbattle
    Verbattle
    Verbattle
    m
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಹೈಕೋರ್ಟ್ ಗೆ ಹೊಸ CJ
    Next Article ಉಪನ್ಯಾಸಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ
    vartha chakra
    • Website

    Related Posts

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    ಅಬಕಾರಿ ಇಲಾಖೆಯಲ್ಲಿ ಲಂಚಾವತಾರ

    ಜನವರಿ 19, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Philippriog ರಲ್ಲಿ ಕಾಲು ತುಳಿದಿದ್ದಕ್ಕೆ ಕೊಲೆ.
    • RicardoCor ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • Kennethgog ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.