ನವದೆಹಲಿ: 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿದಂತೆ ಅಂದಿನ ಮುಖ್ಯಮಂತ್ರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ.
ಗಲಭೆಯಲ್ಲಿ ಹತ್ಯೆಯಾಗಿದ್ದ ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ 80 ವರ್ಷದ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಪ್ರಕರಣದಲ್ಲಿ ಮೋದಿ ಸೇರಿದಂತೆ ಹಲವರಿಗೆ ವಿಶೇಷ ತನಿಖಾ ತಂಡ ಈ ಹಿಂದೆ ಕ್ಲೀನ್ ಚಿಟ್ ನೀಡಿತ್ತು.
ಇದನ್ನು ಪ್ರಶ್ನಿಸಿ ಜಾಕಿಯಾ ಜಾಫ್ರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ. ಈ ಗಲಭೆಯಲ್ಲಿ 60 ಜನ ಸಾವನ್ನಪ್ಪಿದ್ದರು.
ಗುಜರಾತ್ ಗಲಭೆ: ಮೋದಿಗೆ ಸುಪ್ರೀಂ ಕ್ಲೀನ್‌ಚಿಟ್, ಜಾಫ್ರಿ ಪತ್ನಿ ಅರ್ಜಿ ವಜಾ
Previous Articleದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ: 17,336 ಮಂದಿಗೆ ಸೋಂಕು
Next Article ಆಫ್ರಿಕನ್ ವಂಚಕರು.. !!