Browsing: BBMP election

ಬೆಂಗಳೂರು,ಡಿ.19: ಕಳೆದ ಕೆಲವಾರು ದಿನಗಳಿಂದ ‌ನೆನೆಗುದಿಗೆ ಬಿದ್ದಿರುವ ಬಿಬಿಎಂಪಿ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಸೇರಿದಂತೆ ಕೆಲವು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹಿಡಿದಿದ್ದ ಗ್ರಹಣ ಬಿಡುಗಡೆಯಾಗುವ ಲಕ್ಷಣಗಳು ಗೋಚರಿಸಿವೆ. ಚುನಾವಣೆ ನಡೆಸುವ ಸಂಬಂಧ ಮೀಸಲಾತಿ ಪಟ್ಟಿ…

Read More

ಬೆಂಗಳೂರು – ಕಳೆದ ಐದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಸರ್ಕಾರ ತಯಾರಿ ನಡೆಸಿದ್ದು, ಇದೀಗ ವಾರ್ಡ್ ಪುನರ್ ವಿಂಗಡಣೆಯ ಅಂತಿಮ ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕ ಆಕ್ಷೇಪಣೆ ಬಳಿಕ…

Read More

ನವದೆಹಲಿ, ಜು.28- ಕಳೆದ ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಬಿಎಂಪಿ ಚುನಾವಣೆಗೆ ಸುಪ್ರೀಂಕೋರ್ಟ್ ಹಸಿರು ನಿಶಾನೆ ತೋರಿದೆ. ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ನೇತೃತ್ವದ ಪೀಠ ಇಂದು ವಿಚಾರಣೆ ಕೈಗೆತ್ತಿಕೊಂಡು ಒಂದು ವಾರದೊಳಗೆ ವಾರ್ಡ್‍ಗಳ ಮೀಸಲಾತಿ ಘೋಷಣೆ ಮಾಡಬೇಕೆಂದು ರಾಜ್ಯಸರ್ಕಾರಕ್ಕೆ ತಾಕೀತು ಮಾಡಿದೆ.

ಇದಲ್ಲದೆ, ಚುನಾವಣೆ ಆಯೋಗವು ಕೂಡ ಕೂಡಲೇ ಬಿಬಿಎಂಪಿಗೆ ಚುನಾವಣೆ ನಡೆಸಲು ಸಿದ್ಧತೆ ಆರಂಭಿಸಬೇಕು ಮತ್ತು ರಾಜ್ಯ ಸರ್ಕಾರ ಇದಕ್ಕೆ ಸಹಕಾರ ನೀಡಬೇಕು ಎಂದು ತಿಳಿಸಿದೆ. ಕಳೆದ 2020 ಸೆಪ್ಟೆಂಬರ್‍ನಲ್ಲಿ ಅಂತ್ಯಗೊಂಡಿದ್ದ ಬಿಬಿಎಂಪಿ ಚುನಾಯಿತ ಸದಸ್ಯರ ಅವ ನಂತರ ರಾಜ್ಯ ಸರ್ಕಾರ ಅಕಾರ ವಿಕೇಂದ್ರೀಕರಣದ ನೆಪದಲ್ಲಿ 198 ವಾರ್ಡ್‍ಗಳನ್ನು 243ಕ್ಕೆ ಹೆಚ್ಚಿಸಿ ಕ್ಷೇತ್ರ ಪುನರ್‍ವಿಂಗಡಣೆಗೆ ಚಾಲನೆ ನೀಡಿತ್ತು.

ಇದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ನಡುವೆ ಮುಖ್ಯ ಆಯುಕ್ತರಾಗಿದ್ದ ಓಕಾ ಅವರು ಬಿಬಿಎಂಪಿ ಚುನಾವಣೆ ನಡೆಸುವಂತೆ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.
ಕಳೆದ ಮೇನಲ್ಲಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಪೀಠ ಮೂರು ತಿಂಗಳೊಳಗೆ ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮೀಸಲಾತಿಯನ್ನು ಪ್ರಕಟಿಸಲು ಗಡುವು ನೀಡಿತ್ತು.

ಅದರಂತೆ ರಾಜ್ಯ ಸರ್ಕಾರ ಕ್ಷೇತ್ರ ಪುನರ್ವಿಂಗಡಣೆ ಕುರಿತಂತೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿತ್ತು. ನಂತರ ನ್ಯಾಯಮೂರ್ತಿ ಭಕ್ತವತ್ಸಲಂ ನೇತೃತ್ವದ ಸಮಿತಿ ನೀಡಿದ್ದ ಮೀಸಲಾತಿ ವರದಿ ಕುರಿತಂತೆ ಪರಿಶೀಲಿಸಿ ಕ್ರಮ ಕೈಗೊಳ್ಳಲು ಒಂದು ವಾರ ಅವಕಾಶ ಕೋರಿ ಸರ್ಕಾರ ವಾದ ಮಂಡಿಸಿತ್ತು.

Read More

ಬೆಂಗಳೂರು, ಜೂ6- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು ಕಾರ್ಯತಂತ್ರ ರೂಪಿಸುತ್ತಿರುವ ಬಿಜೆಪಿ ಇದಕ್ಕೂ ಮೊದಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲೇಬೇಕೆಂದು ಪಣ ತೊಟ್ಟಿದೆ.ಇದಕ್ಕಾಗಿ…

Read More

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಸಂಬಂಧ ಸುಪ್ರೀಂ ಕೋರ್ಟ ಮಹತ್ವದ ಆದೇಶ ನೀಡಿದೆ. ಎಂಟು ವಾರಗಳೊಳಗೆ ವಾರ್ಡ್‌ಗಳ ಮರು ವಿಂಗಡಣೆ‌ ಹಾಗು ಒಬಿಸಿ ಮೀಸಲಾತಿ ಅಂತಿಮಗೊಳಿಸಿ ಕಾರ್ಯ ಪೂರ್ಣಗೊಂಡ ಕೂಡಲೆ ಚುನಾವಣೆ ನಡೆಸುವಂತೆ ರಾಜ್ಯ…

Read More