ಬೆಂಗಳೂರು.
ಅಧಿಕಾರ ಹಸ್ತಾಂತರ ವಿಚಾರ ರಾಜ್ಯ ಕಾಂಗ್ರೆಸ್ಸಿನಲ್ಲಿ ದೊಡ್ಡ ಮಟ್ಟದ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ ಕೊಟ್ಟ ಮಾತು ಮತ್ತು ಅಧಿಕಾರ ಹಂಚಿಕೆ ಒಪ್ಪಂದ ಎಂಬ ವಿಚಾರಗಳು ಸಾಕಷ್ಟು ಬಾರಿ ಚರ್ಚೆಯಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಸಮಯದಲ್ಲಿ ದೆಹಲಿಯ ಹೈಕಮಾಂಡ್ ಅಂಗಳದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಸೂತ್ರ ರಚನೆಯಾಗಿದೆ ಎಂದು ಹೇಳಲಾಗುತ್ತಿದೆ.
ಆದರೆ, ಯಾವುದೇ ರೀತಿಯ ಅಧಿಕಾರ ಹಂಚಿಕೆ ಸೂತ್ರ ರಚನೆಯಾಗಿಲ್ಲ. ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ . ನಾನು ಯಾರಿಗೂ ಮಾತು ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೇ ಈ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದಾರೆ.
ಆದರೆ ಈ ವಿಷಯವಾಗಿ ಕೆಲವು ಅಂಶಗಳನ್ನು ಗಮನಿಸುವುದಾದರೆ ಸರ್ಕಾರ ರಚನೆಯ ಸಮಯದಲ್ಲಿ ಅಧಿಕಾರ ಹಂಚಿಕೆ ಸೂತ್ರ ರಚನೆಯಾಗಿರಬಹುದು ಎಂದು ಊಹಿಸಬಹುದು.
ಯಾಕೆಂದರೆ ಅಂದು ಕೆಪಿಸಿಸಿ ಅಧ್ಯಕ್ಷರಾಗಿ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಅಸ್ತಿತ್ವಕ್ಕೆ ತರಲು ಸಾಕಷ್ಟು ಶ್ರಮಿಸಿದ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದರು. ಹೀಗಾಗಿ ಸರ್ಕಾರ ರಚನೆಯ ಸಮಯದಲ್ಲಿ ಒಮ್ಮತ ಮೂಡಿಸಲು ಹೈಕಮಾಂಡ್ ಸಾಕಷ್ಟು ಕಸರತ್ತು ನಡೆಸಿತ್ತು ಅಂತಿಮವಾಗಿ ಡಿಕೆ ಶಿವಕುಮಾರ್ ಅವರಿಗೆ ಉಪ ಮುಖ್ಯಮಂತ್ರಿ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಎರಡು ನೀಡಿತ್ತು ಅಲ್ಲದೆ ಬೆಂಗಳೂರು ನಗರ ಅಭಿವೃದ್ಧಿ ಮತ್ತು ಜಲ ಸಂಪನ್ಮೂಲ ಇಲಾಖೆ ಜವಾಬ್ದಾರಿ ನೀಡಲಾಗಿತ್ತು.
ಈ ಎರಡು ಇಲಾಖೆಗಳು ಅತ್ಯಂತ ಮಹತ್ವದ ಖಾತೆಗಳಾಗಿವೆ.
ವಿಷಯ ಈಗ ಯಾಕೆ ಹೇಳಲಾಗುತ್ತಿದೆ ಎಂದರೆ ಅಧಿಕಾರ ಹಂಚಿಕೆ ವಿಚಾರ ಚರ್ಚೆಯಲ್ಲಿ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಆಪ್ತ ವಲಯ ಸರ್ಕಾರ ರಚನೆಯ ಸಮಯದಲ್ಲಿ ಯಾವುದೇ ರೀತಿಯ ಅಧಿಕಾರ ಹಂಚಿಕೆ ಸೂತ್ರ ರಚನೆಯಾಗಿಲ್ಲ ಯಾವುದೇ ಒಪ್ಪಂದ ಕೂಡ ಮಾಡಿಕೊಂಡಿಲ್ಲ ಎಂದು ಪದೇಪದೇ ಹೇಳುತ್ತಿದ್ದಾರೆ. ಇದು ನಿಜವೇ ಆಗಿದ್ದರೆ ಡಿಕೆ ಶಿವಕುಮಾರ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ, ಮಹತ್ವದ ಎರಡು ಇಲಾಖೆಗಳ ಜವಾಬ್ದಾರಿ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾಕೆ ನೀಡಲಾಯಿತು ಎನ್ನುವುದು ಈಗಿರುವ ಪ್ರಶ್ನೆ.
Previous Articleಜರ್ಮನಿ ತಂಡದೊಂದಿಗೆ ಮುಖ್ಯಕಾರ್ಯದರ್ಶಿ ಚರ್ಚೆ
Next Article ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

