Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೈ ನೋವೆಂದು ಆಸ್ಪತ್ರೆ ಸೇರಿದ ಯುವತಿ ಶವವಾಗಿ ಮನೆಗೆ!
    ಸುದ್ದಿ

    ಕೈ ನೋವೆಂದು ಆಸ್ಪತ್ರೆ ಸೇರಿದ ಯುವತಿ ಶವವಾಗಿ ಮನೆಗೆ!

    vartha chakraBy vartha chakraಮೇ 30, 2022Updated:ಮೇ 30, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೈ ನೋವೆಂದು ಆಸ್ಪತ್ರೆಗೆ ಬಂದ ಯುವತಿ ಸಾವನ್ನಪ್ಪಿದ್ದು, ಇದೀಗ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಗಂಭೀರ ಆರೋಪ ಮಾಡುತ್ತಿದ್ದಾರೆ. ಯುವತಿಯನ್ನು ತೇಜಸ್ವಿನಿ(20) ಎಂದು ಗುರುತಿಸಲಾಗಿದೆ. ತೇಜಸ್ವಿನಿ ಕೈಗೆ ಗಾಯವಾಗಿತ್ತು. ಹೀಗಾಗಿ ಆಕೆಯನ್ನು ಇಂದು ಬೆಳಗ್ಗೆ ಮಾರತಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಇದೀಗ ಯುವತಿ ಸಾವನ್ನಪ್ಪಿದ್ದು, ಖಾಸಗಿ ಆಸ್ಪತ್ರೆಯ ಎಡವಟ್ಟಿನಿಂದಲೇ ಮೃತಪಟ್ಟಿರುವುದಾಗಿ ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ. ತೇಜಸ್ವಿನಿ ಅಂತಿಮ ವರ್ಷದ ಬಿಇ ಓದುತ್ತಿದ್ದಾಳೆ. ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದ ತೇಜಸ್ವಿನಿಗೆ ಆಪರೇಷನ್ ಮಾಡಬೇಕೇಂದು ಆಸ್ಪತ್ರೆ ಸಿಬ್ಬಂದಿ ಅನಾಸ್ತೇಶಿಯಾ ನೀಡಿದ್ದಾರೆ. ಎರಡು ಗಂಟೆ ಬಳಿಕ ನಿಮ್ಮ ಮಗಳು ಬದುಕಿಲ್ಲ ಎಂದು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಆಸ್ಪತ್ರೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಾರತಹಳ್ಳಿ ಪೊಲೀಸರು ಸ್ಥಳದಲ್ಲಿಯೇ ಬೀಡು ಬಿಟ್ಟಿದ್ದಾರೆ. ಆಸ್ಪತ್ರೆ ಬಳಿ ಪೊಲೀಸರು ಮತ್ತು ಪೋಷಕರ ನಡುವೆ ಜಟಾಪಟಿ ನಡೆದಿದೆ. ನಮಗೆ ವಿಷ ಕೊಡಿ ಇಲ್ಲ ನ್ಯಾಯ ಕೊಡಿಸಿ ಎಂದು ತೇಜಸ್ವಿನಿ ಪೋಷಕರು ಆಸ್ಪತ್ರೆ ಒಳಗೆ ಪ್ರತಿಭಟನೆಗೆ ಕುಳಿತಿದ್ದಾರೆ.ದೇಹ ತುಂಬಾ ಇಂಜೆಕ್ಷನ್ ಮಾಕ್ರ್ಸ್ ಗಳಿದೆ. ಹೈ ಡೋಸ್ ಕೊಟ್ಟೇ ನಮ್ಮ ಮಗಳು ಸತ್ತಿರೋದು. ಬೆಳಗ್ಗೆ 4 ಗಂಟೆಗೆ ಆಸ್ಪತ್ರೆಗೆ ಸೇರಿಸಿದ್ವಿ. 11.40ಕ್ಕೆ ನಿಮ್ಮ ಮಗಳಿಗೆ ಸೀರಿಯಸ್ ಆಗಿದೆ ಅಂತ ಫೋನ್ ಬಂತು. ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡ್ತೇವೆ ಅಂತಾ ಹೇಳಿದ್ರು. ನಾವು ಸರಿ ಅಂತಾ ಹೇಳಿದ್ವಿ. ಅದಾದ ಬಳಿಕ ಒಂದು ಫೋನ್ ಬರಲಿಲ್ಲ. ಬಂದು ವಿಚಾರಿಸಿದಾಗ ನಿಮ್ಮ ಮಗಳು ಇಲ್ಲ ಅಂತಾ ಹೇಳಿದ್ರು. ಮ್ಯಾಸೀವ್ ಹಾರ್ಟ್ ಅಟ್ಯಾಕ್ ಆಗಿದೆ ಅಂದ ಹೇಳಿದ್ರು. ಅನಾಸ್ತೇಷಿಯ ಕೊಟ್ಟ ಬಳಿಕ ಎದೆ ನೋವು ಅಂತಾ ಹೇಳಿದ್ರು. ಆಮೇಲೆ ಸತ್ತಿದ್ದಾರೆ ಅಂತಾ ಆಸ್ಪತ್ರೆಯವರು ಹೇಳುತ್ತಿದ್ದಾರೆ. ಇದು ಆಸ್ಪತ್ರೆ ನಿರ್ಲಕ್ಷದಿಂದಲೇ ಆಗಿರೋದು ಎಂದು ಯುವತಿ ಚಿಕ್ಕಪ್ಪ ಲಕ್ಷ್ಮಣ್ ಕಿಡಿಕಾರಿದ್ದಾರೆ.ಆಸ್ಪತ್ರೆಗೆ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಭೇಟಿ ನೀಡಿ ನ್ಯಾಯ ಕೊಡಿಸುವ ಭರವಸೆ ನೀಡಿ ಪ್ರತಿಭಟನೆ ಕೈಬಿಡುವಂತೆ ಪೋಷಕರ ಮನವೊಲಿಸಿದ್ದಾರೆ. ಈಗಾಗಲೇ ಆಸ್ಪತ್ರೆ ವೈದ್ಯರನ್ನು ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ ಠಾಣೆಯಲ್ಲಿ ಬಂಧಿಯಾಗಿರೋ ವೈದ್ಯರ ಫೋಟೋ ತೋರಿಸುವಂತೆ ಪೋಷಕರು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವೀಡಿಯೋ ಕಾಲ್ ಮಾಡಿ ಬಂಧಿತ ವೈದ್ಯರನ್ನ ಪೊಲೀಸರು ತೇಜಸ್ವಿನಿ ಪೋಷಕರಿಗೆ ತೋರಿಸಿದ್ದಾರೆ.

    Verbattle
    Verbattle
    Verbattle
    marathahalli medical tejaswini
    Share. Facebook Twitter Pinterest LinkedIn Tumblr Email WhatsApp
    Previous ArticleBetting ಆರೋಪಿ ಸೆರೆ
    Next Article ಕೆಟ್ಟು ನಿಂತ ರೈಲು
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly ರಲ್ಲಿ Agro startup ಗಳಿಗೆ ಸರ್ಕಾರದ ಪ್ರೋತ್ಸಾಹ.
    • StellaHewly ರಲ್ಲಿ ​ಬಿ ಖಾತಾ ಸೈಟ್ ಮಾಲೀಕರಿಗೆ ಬಂಪರ್ ಕೊಡುಗೆ!
    • JoshuaAborn ರಲ್ಲಿ ನಟಿ ರನ್ಯಾ ಚಿನ್ನ ಸಾಗಿಸೋದು ಹೇಗೆ ಗೊತ್ತಾ..
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.