ಲಕ್ನೋ,ಜ.19- ಅಯೋಧ್ಯೆಯ ರಾಮಮಂದಿರದಲ್ಲಿ ಬಾಲ ರಾಮಮೂರ್ತಿ ಯ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಅಯೋಧ್ಯೆ ನಗರದಾದ್ಯಂತ ಅಭೂತಪೂರ್ವ ಪೊಲೀಸ್ ಬಂದೋಬಸ್ತ್ ಕಲ್ಪಿಸಿ ಕಟ್ಟೆಚ್ಚರ ವಹಿಸಿರುವ ಬೆನ್ನಲ್ಲೇ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮೂವರು ಶಂಕಿತರನ್ನು ಬಂಧಿಸಿದೆ.
ಉತ್ತರ ಪ್ರದೇಶದ ವಿಶೇಷ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರು ಸುದ್ದಿಗಾರರಿಗೆ ಈ ಮಾಹಿತಿ ನೀಡಿ, ಅಯೋಧ್ಯೆ ಜಿಲ್ಲೆಯಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳವು ಮೂವರು ಶಂಕಿತರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಸೂಚನೆಗಳ ಮೇರೆಗೆ ನಡೆಸುತ್ತಿರುವ ತಪಾಸಣೆ ಅಭಿಯಾನದ ಭಾಗವಾಗಿ, ಯುಪಿ-ಎಟಿಎಸ್ ಅಯೋಧ್ಯೆ ಸಮೀಪದಲ್ಲಿ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಿದೆ.
ಈ ಶಂಕಿತರನ್ನು ವಿಚಾರಣೆ ನಡೆಸಲಾಗುತ್ತಿದೆ.
ಅವರಿಗೆ ಇದುವರೆಗೂ ಯಾವುದೇ ನಿಷೇಧಿತ ಸಂಘಟನೆಯೊಂದಿಗೆ ಸಂಪರ್ಕ ಇರುವುದು ಬಹಿರಂಗವಾಗಿಲ್ಲ ಎಂದಿದ್ದಾರೆ.
ಇದರ ಬೆನ್ನಲ್ಲೇ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಉತ್ತರ ಪ್ರದೇಶ ಸರ್ಕಾರವು ಡ್ರೋನ್‌ಗಳ ಮೂಲಕ ಕಣ್ಗಾವಲು ಹೆಚ್ಚಿಸಿದೆ. ಅಯೋಧ್ಯೆ ನಗರದಾದ್ಯಂತ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡಲು ಎನ್ವಿಡಿ ಮತ್ತು ಸಿಸಿಟಿವಿ ಕ್ಯಾಮೆರಾಗಳಂತಹ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದೆ.
ಜನವರಿ 22 ರಂದು ರಾಮಮಂದಿರ ಉದ್ಘಾಟನೆಗೆ ಭರದ ಸಿದ್ಧತೆಗಳು ನಡೆಯುತ್ತಿದ್ದು, ಗಣ್ಯರು ಹಾಗೂ ಸಮಾಜದ ಎಲ್ಲ ವರ್ಗದ ಜನರು ಪಾಲ್ಗೊಳ್ಳಲಿದ್ದಾರೆ. ಜನವರಿ 22 ರಂದು ಭವ್ಯ ಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸಿದ್ಧರಾಗಿದ್ದಾರೆ.
ವಾರಾಣಸಿಯ ಅರ್ಚಕ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಜನವರಿ 22 ರಂದು ರಾಮಲಲ್ಲಾ ಅವರ ಮಹಾಮಸ್ತಕಾಭಿಷೇಕದ ಮುಖ್ಯ ವಿಧಿವಿಧಾನವನ್ನು ನೆರವೇರಿಸಲಿದ್ದಾರೆ.
ಜನವರಿ 14 ರಿಂದ ಜನವರಿ 22 ರವರೆಗೆ ಅಯೋಧ್ಯೆಯಲ್ಲಿ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತದೆ. ಸಮಾರಂಭದ ದಿನಾಂಕ ಹತ್ತಿರವಾಗುತ್ತಿದ್ದಂತೆ ಅಯೋಧ್ಯೆಯಲ್ಲಿ ರಾಮಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. . ಕಾರ್ಯಕ್ರಮದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆವಹಿಸಲಾಗುತ್ತಿದೆ.

2 ಪ್ರತಿಕ್ರಿಯೆಗಳು
No Mostbet vocГЄ joga com mais saldo e mais chances de ganhar muito – https://mostbetpt.pro/pagamento/ , Mostbet: saques rГЎpidos, bГґnus generosos e milhares de jogos incrГveis .
Your winning streak wrote its own press release – https://atamsulosin.com , One more round and even tomorrow bows down .