ಮೈಸೂರು ಏ 13: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ನಾಯಕ ಹಾಗೂ ಬಿಜೆಪಿ ಸಂಸದ ವಿ ಶ್ರೀನಿವಾಸಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗೆಲ್ಲಬೇಕೆಂದು ಕಾರ್ಯತಂತ್ರ ರೂಪಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕಾಗಿ ಹಲವಾರು ನಾಯಕರನ್ನು ಭೇಟಿ ಮಾಡಿ ಬೆಂಬಲ ಕೋರುತ್ತಿದ್ದಾರೆ ಇದರ ಮುಂದುವರೆದ ಭಾಗವಾಗಿ ಅವರು ಹಿರಿಯ ನಾಯಕ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿದ್ದಾರೆ.
ಒಂದು ಕಾಲದಲ್ಲಿ ಶ್ರೀನಿವಾಸ್ ಪ್ರಸಾದ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದು ಹಲವು ಕಾರಣಗಳಿಂದಾಗಿ ಅವರ ನಡುವಿನ ಸಂಬಂಧ ಹಳಸಿತ್ತು. ಪರಿಣಾಮವಾಗಿ ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿಗೆ ಪಕ್ಷಾಂತರ ಮಾಡಿ ಸಂಸದರಾಗಿಯು ಆಯ್ಕೆಯಾಗುವ ಮೂಲಕ ಸಿದ್ದರಾಮಯ್ಯ ಅವರಿಗೆ ಸವಾಲೋಡ್ಡಿದ್ದರು.
ವಯಸ್ಸಿನ ಕಾರಣಕ್ಕಾಗಿ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗಿರುವ ಶ್ರೀನಿವಾಸ ಪ್ರಸಾದ್ ಈ ಬಾರಿ ಚುನಾವಣೆಯಲ್ಲಿ ಯಾರಿಗೆ ಬೆಂಬಲ ನೀಡಲಿದ್ದಾರೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿತ್ತು.
ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಮ್ಮದೇ ಆದ ಮತ ಬ್ಯಾಂಕ್ ಹೊಂದಿರುವ ಶ್ರೀನಿವಾಸ ಪ್ರಸಾದ್ ಈ ಬಾರಿ ಚುನಾವಣೆಯಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಬಿಜೆಪಿಯಿಂದ ಕಣಕ್ಕಿಳಿಸಲು ಬಯಸಿದ್ದರು ಆದರೆ ಬಿಜೆಪಿ ಹೈಕಮಾಂಡ್ ಇವರಿಗೆ ಟಿಕೆಟ್ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಅವರ ಕುಟುಂಬದ ಹಲವು ಸದಸ್ಯರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ್ದಾರೆ.
ಇಂತಹ ಸಮಯದಲ್ಲಿ ಸಿದ್ದರಾಮಯ್ಯ ಅವರು ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆದಿರುವುದು ರಾಜ್ಯ ರಾಜಕಾರಣದಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗಿದೆ
ಸಿಎಂ ಸಿದ್ದರಾಮಯ್ಯ ಹಾಗೂ ಶ್ರೀನಿವಾಸ್ ಪ್ರಸಾದ್ ಭೇಟಿಗೂ ಹಲವು ಕಾರಣಗಳಿವೆ. ಈಗಾಗಲೇ ಶ್ರೀನಿವಾಸ್ ಪ್ರಸಾದ್ ಅವರ ಕುಟುಂಬಕ್ಕೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದೆ. ಹೀಗಾಗಿ ಮಕ್ಕಳು, ಮೊಮ್ಮಕ್ಕಳ ರಾಜಕೀಯ ಭವಿಷ್ಯದ ಬಗ್ಗೆಯೂ ಮನವರಿಕೆ ಮಾಡಲಾಗಿದೆ. ಕಾಂಗ್ರೆಸ್ ನಿಂದ ಸುನೀಲ್ ಬೋಸ್ ಅವರು ಅಭ್ಯರ್ಥಿಯಾಗಿದ್ದಾರೆ. ಅವರನ್ನು ಗೆಲ್ಲಿಸಿಕೊಂಡು ಬರುವ ಸವಾಲು ಕಾಂಗ್ರೆಸ್ ಗಿದೆ. ಮೈಸೂರು ಭಾಗದಲ್ಲಿ ಶ್ರೀನಿವಾಸ್ ಪ್ರಸಾದ್ ಅಭಿಮಾನಿಗಳನ್ನು ಕಾಂಗ್ರೆಸ್ ನತ್ತ ಸೆಳೆದರೆ ಕಾಂಗ್ರೆಸ್ ಗೆ ಹೆಚ್ಚು ಲಾಭವಾಗಲಿದೆ. ಮುಂದಿನ ದಿನಗಳಲ್ಲಿ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ, ಮೊಮ್ಮಕ್ಕಳಿಗೆ ಸ್ಥಾನಮಾನ ನೀಡುವ ಭರವಸೆ ನೀಡಿದೆ ಎನ್ನಲಾಗಿದ್ದು, ಈ ಮೂಲಕ ದೋಸ್ತಿ ಮುಂದಿವರೆಸುವ ಇಂಗಿತ ವ್ಯಕ್ಯಪಡಿಸಿದ್ದಾರೆ ಎನ್ನುತ್ತಿವೆ ಮೂಲಗಳು.
2 ಪ್ರತಿಕ್ರಿಯೆಗಳು
вывод из запоя срочно ростов http://vyvod-iz-zapoya-rostov111.ru .
выведение из запоя воронеж стационар выведение из запоя воронеж стационар .